ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 23,24ರಂದು ಸಿಇಟಿ ಪರೀಕ್ಷೆ, ವಿದ್ಯಾರ್ಥಿಗಳೇ ಸಿದ್ಧರಾಗಿ

|
Google Oneindia Kannada News

ಬೆಂಗಳೂರು, ಜನವರಿ 12: ಏಪ್ರಿಲ್ 23,24ರಂದು ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)-2019 ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಏ.23ರ ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, ಏಪ್ರಿಲ್ 24ರ ಬೆಳಗ್ಗೆ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯದ ಪರೀಕ್ಷೆ 60 ಅಂಕಗಳದ್ದಾಗಿರಲಿದೆ. ಏ.25ರಂದು ಹೊರರಾಜ್ಯ ಮತ್ತು ಗಡಿನಾಡು ಅಭ್ಯರ್ಥಿಗಳಿಗೆ 50 ಅಂಕಗಳಿಗೆ ಕನ್ನಡ ಭಾಷಾ ಜ್ಞಾನ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಳಗ್ಗೆ 10.30ರಿಂದ 11.50ರವರೆಗೆ ಹಾಗೂ ಮಧ್ಯಾಹ್ನ 3.50ರವರೆಗೆ ಪರೀಕ್ಷೆಗಳು ನಡೆಯುತ್ತದೆ. ಎಂಜಿನಿಯರಿಂಗ್, ತಂತ್ರಜ್ಞಾನ, ಬಿಎಸ್ಸಿ, ಕೃಷಿ, ಬಿಟೆಕ್, ಬಿ.ಫಾರ್ಮ್, ಫಾರ್ಮಾ-ಡಿ ಕೋರ್ಸ್ ಗಳಿಗೆ ಸಿಇಟಿ ನಡೆಸಲಾಗತ್ತದೆ. ಹೆಚ್ಚಿನ ವಿವರಗಳಿಗಾಗಿ http:kea.kar.nic.in ಸಂಪರ್ಕಿಸಬಹುದಾಗಿದೆ.

CET 2019 on April 23 and 24

ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗೆ ಸಿಬಿಎಸ್‌ಇ ನಡೆಸುವ ನೀಟ್ ಪರೀಕ್ಷೆ ಮೇ 5ರಂದು, ಜೆಇಇ ಅಡ್ವಾನ್ಸ್ ಮೇ 19, ಜೆಇಇ ಮೈನ್ ಎರಡನೇ ಬಾರಿಗೆ ಪರೀಕ್ಷೆ ಬರೆಯುವವರಿಗೆ ಏ.6 ರಿಂದ 20ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಕಾಮೆಡ್-ಕೆ ಮತ್ತು ಕ್ಯಾಟ್ ಪರೀಕ್ಷೆಗಳು ಮೇ 12ರಂದು ನಡೆಯಲಿದೆ. ಎರಡೂ ಪರೀಕ್ಷೆಗಳು ಒಂದೇ ದಿನ ನಡೆಯುತ್ತಿರುವುದು ವಿದ್ಯಾರ್ಥಿಗಳನ್ನು ಆಂತಕ್ಕೀಡು ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾ.1ರಿಂದ ಮಾರ್ಚ್ 18ರವರೆಗೆ ನಡೆಯಲಿದೆ.

English summary
The Karnataka Examinations Authority (KEA) will conduct Common entrance Test 2019, the gateway for asmission to engineering pharmacy and other professional courses , on April 23,24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X