CET 2024 Result: ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ; ನೋಡುವುದು ಹೇಗೆ?
ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ. ಸಿಇಟಿ ಪರೀಕ್ಷೆ ಬರೆದು ಒಂದೂವರೆ ತಿಂಗಳಾದರೂ ಫಲಿತಾಂಶ ಪ್ರಕಟಿಸದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿತ್ತು.
ಶನಿವಾರ ಎಕ್ಸ್‌ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್ http://karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳಿಗೆ ನಿರಾಳ
2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು, ಇದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿತ್ತು. ಏಪ್ರಿಲ್ 18, 19ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆ ನಡೆಸಿತ್ತು.
ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸಿಇಟಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದರು.











Click it and Unblock the Notifications