ಕರ್ನಾಟಕ ಸಿಇಟಿ ದಾಖಲಾತಿ ಪರಿಶೀಲನೆ ಇಂದಿನಿಂದ ಆರಂಭ

ಬೆಂಗಳೂರು, ಜೂನ್ 12: ಸಿಇಟಿ ರ‍್ಯಾಂಕ್ ಪಡೆದಿರುವ ಅರ್ಹ ಸಮಾನ್ಯ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯನ್ನು ಮಂಗಳವಾರ(ಜೂನ್ 12)ರಿಂದ ಆರಂಭವಾಗಲಿದೆ. ಈ ಮೊದಲು ಜೂನ್ 7ರಿಂದ ದಾಖಲಾತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿತ್ತು. ಮಾರ್ಪಡಿಸಿರುವ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ರಾಜ್ಯದ ಎಲ್ಲ ಸಹಾಯಕ ಕೇಂದ್ರಗಳಲ್ಲಿ ದಾಖಲಾತಿ ಪರಿಶೀಲನೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ಮೂಲ ದಾಖಲಾತಿಯೊಂದಿಗೆ ರ‍್ಯಾಂಕ್ ಪಟ್ಟಿ ಪ್ರಕಾರ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್‌ಸೈಟ್‌ http://kea.kar.nic.in ಸಂಪರ್ಕಿಸಬಹುದು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 1ರಂದು ಪ್ರಕಟಿಸಿತ್ತು.ವಿಜಯಪುರದ ಶ್ರೀಧರ್ ದೊಡ್ಮನಿ ಪ್ರಥಮ ರ‍್ಯಾಂಕ್ ಪಡೆದಿದ್ದು, ದಕ್ಷಿಣ ಕನ್ನಡದ ನಾರಾಯಣ ಪೈ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ, ಬೆಂಗಳೂರಿನ ಮಹಿಮಾ ಕೃಷ್ಣ ತೃತೀಯ ಹಾಗೂ ಬಳ್ಳಾರಿಯ ಎಸ್ಆರ್ ಅಪರೂಪ ನಾಲ್ಕನೇ ರ‍್ಯಾಂಕ್ ಗಳಿಸಿದ್ದರು.

CET document verification resumes

ಎಂಜಿನಿಯರಿಂಗ್‌ನಲ್ಲಿ ವಿಜಯಪುರದ ಶ್ರೀಧರ ದೊಡ್ಮನಿ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡದ ನಾರಾಯಣ ಪೈ ದ್ವಿತೀಯ ಸ್ಥಾನ ಪಡೆದಿದ್ದಾರೆ. ಡಿಬೋರ್ಸ್‌ ಸನ್ಯಾಸಿ 3 ನೇ ಸ್ಥಾನ ಪಡೆದಿದ್ದಾರೆ. ಒಟ್ಟು 1,57,580 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಬೆಂಗಳೂರಿನಲ್ಲಿ 73 ಕೇಂದ್ರಗಳು ಸೇರಿದಂತೆ ರಾಜ್ಯಾದ್ಯಂತ 343 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು ಇದರಲ್ಲಿ 82079 ವಿದ್ಯಾ ರ್ಥಿಗಳಿದ್ದರೆ, 75501 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+