ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ ಪರೀಕ್ಷೆ ಆನ್‌ಲೈನ್ ಇಲ್ಲ: ಆಫ್‌ಲೈನ್‌ನಲ್ಲೇ ನಡೆಸಲು ನಿರ್ಧಾರ

|
Google Oneindia Kannada News

ಬೆಂಗಳೂರು, ಜನವರಿ 31: ಸಿಇಟಿ ಪರೀಕ್ಷೆಯನ್ನು ಆನ್‌ಲೈನ್ ಮಾಡಬೇಕು ಎಂಬ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿದ್ದು, ಆಫ್‌ಲೈನ್‌ನಲ್ಲೇ ನಡೆಸುವಂತೆ ಕೇಳಿದೆ.

ಎಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ಮಾಡುವುದು ಬೇಡ ಎಂದಿರುವ ಸರ್ಕಾರ ಶಾಶ್ವತವಾಗಿ ಆಫ್‌ಲೈನ್‌ ಮೂಲಕವೇ ನಡೆಸಲು ತಿಳಿಸಿದೆ.

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕಾರಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕಾರ

ಈ ಹಿಂದಿನ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಪ್ರಸ್ತುತವಿರುವ ಪೆನ್-ಪೇಪರ್ ವ್ಯವಸ್ಥೆ ತೆಗೆದು ಹಾಕಿ 2020 ಏಪ್ರಿಲ್‌ನಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಯನ್ನು ಆನ್‌ಲೈನ್ ಮಾಡುವುದಾಗಿ ಘೋಷಿಸಿದ್ದರು.

ಪ್ರತಿ ವರ್ಷ 2 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯುತ್ತಾರೆ

ಪ್ರತಿ ವರ್ಷ 2 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯುತ್ತಾರೆ

ಪ್ರತಿ ವರ್ಷ ಅಂದಾಜು 2 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಬರೆಯುತ್ತಾರೆ. ಈ ಪ್ರಮಾಣದಲ್ಲಿ ಇವರಿಗೆ ಕಂಪ್ಯೂಟರ್ ಸೇರಿದಂತೆ ಮೂಲ ಸೌಕರ್ಯ ಒದಗಿಸುವ ಸಮಸ್ಯೆ ಎದುರಾಗಿದೆ ಎಂಬ ಕಾರಣ ನೀಡಿ ಆನ್‌ಲೈನ್‌ ಪರೀಕ್ಷೆ ಬೇಡ ಎಂದು ನಿರ್ಧರಿಸಿದೆ.

ಕರ್ನಾಟಕ ಪರೀಕ್ಷಾ ಮಂಡಳಿ ಸಭೆಯಲ್ಲಿ ತೀರ್ಮಾನ

ಕರ್ನಾಟಕ ಪರೀಕ್ಷಾ ಮಂಡಳಿ ಸಭೆಯಲ್ಲಿ ತೀರ್ಮಾನ

ಈ ಕುರಿತು ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ಕರ್ನಾಟಕ ಪರೀಕ್ಷಾ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆನ್‌ಲೈನ್ ಪರೀಕ್ಷೆ ನಡೆಸುವಂತೆ ಕೋರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅಧಿಕೃತವಾಗಿ ಕೈಬಿಡಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸುವುದು ಕಷ್ಟ

ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸುವುದು ಕಷ್ಟ

ತಾಂತ್ರಿಕವಾಗಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆಗಳನ್ನು ನಡೆಸುವುದುಕಷ್ಟಸಾಧ್ಯ, ಕಂಪ್ಯೂಟರ್ ಒದಗಿಸುವುದು, ವಿದ್ಯುತ್ ಸರಬರಾಜು ಸೇರಿದಂತೆ ತಾಂತ್ರಿಕ ಅಡಚಣೆಗಳು ಎದುರಾಗಲಿವೆ. ಆಫ್‌ಲೈನ್ ವ್ಯವಸ್ಥೆಯಲ್ಲಿ ಪರೀಕ್ಷೆ ನಡೆಸುವುದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

ವೈದ್ಯ ಹಾಗೂ ದಂತವೈದ್ಯ ಕೋರ್ಸ್‌ಗಳಿಗೆ ಆಫ್‌ಲೈನ್‌ನಲ್ಲೇ ಪರೀಕ್ಷೆ

ವೈದ್ಯ ಹಾಗೂ ದಂತವೈದ್ಯ ಕೋರ್ಸ್‌ಗಳಿಗೆ ಆಫ್‌ಲೈನ್‌ನಲ್ಲೇ ಪರೀಕ್ಷೆ

ಈಗಾಗಲೇ ವೈದ್ಯ ಮತ್ತು ದಂತ ವೈದ್ಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಹಾಗೂ ಸಾಮಾನ್ಯ ಕಾನೂನು ಪ್ರವೇಶಕ್ಕಾಗಿ ಪರೀಕ್ಷೆಗಳನ್ನು ಆಫ್‌ಲೈನ್ ಮೂಲಕವೇ ನಡೆಸಲಾಗುತ್ತಿದೆ. ಹೀಗಾಗಿ, ಸಿಇಟಿಯನ್ನು ಕೂಡ ಆಫ್‌ಲೈನ್‌ನಲ್ಲಿಯೇ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

English summary
The state government has rejected the proposal that the CET test should be done online and asked to conduct it offline.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X