CET Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ
ಬೆಂಗಳೂರು, ಏಪ್ರಿಲ್ 26: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಹ ಸಿಇಟಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಮಾಹಿತಿ ನೀಡಿದ್ದಾರೆ.
ಮುಂಬರುವ ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕಗಳು ಬಂದಿದೆ ಎಂಬ ಕಾರಣಕ್ಕಾಗಿ, ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಗೆ ಹಾಜರಾಗಬೇಕು ಎಂದು ಪಿಯು ಬೋರ್ಡ್ ಸ್ಪಷ್ಟಪಡಿಸಿದೆ.

ಇದೇ ವೇಳೆ, ಸಿಇಟಿ ಪರೀಕ್ಷೆಗೆ ಹಾಜರಾದರೆ ಮಾತ್ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅಂಕಗಳನ್ನು ಸೀಟು ಹಂಚಿಕೆಗೆ ಪರಿಗಣನೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಾಗಲಿ ಅಥವಾ ಪೋಷಕರಾಗಲಿ ಸಿಇಟಿ ಪರೀಕ್ಷೆ ತೆಗೆದುಕೊಳ್ಳಬೇಕಾ ಅಥವಾ ಬೇಡವೇ ಎಂಬ ವಿಚಾರದಲ್ಲಿ ಗೊಂದಲಕ್ಕೆ ಒಳಗಾಗಬಾರದು. ಪೂರಕ ಪರೀಕ್ಷೆಯನ್ನು ಬರೆಯಲು ತೀರ್ಮಾನಿಸಿದ್ದರೂ, ಸಿಇಟಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ಹಾಜರಾದರೆ ಮಾತ್ರ ಪೂರಕ ಪರೀಕ್ಷೆ ಅಂಕ ಪರಿಗಣನೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶ ಪ್ರತಿಯಲ್ಲಿ ಏನಿದೆ?
ದಿನಾಂಕ ಏಪ್ರಿಲ್ 21, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಶೇಕಡಾವಾರು ಅಂಕಗಳ ಕಾರಣದಿಂದ ಕೆಲವು ವಿದ್ಯಾರ್ಥಿಗಳು ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿದ್ದಾರೆ. 2023ರ ಸಿಇಟಿಗೆ ಹಾಜರಾಗಲು ಅರ್ಹತೆ ಮಾನದಂಡಗಳ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಮಾಹಿತಿ ಕೋರುತ್ತಿದ್ದಾರೆ.

ಈ ಬಗ್ಗೆ ಸಿಇಟಿ-2023ಕ್ಕೆ ನೋಂದಣಿ ಮಾಡಿ ಶುಲ್ಕ ಪಾವತಿಸಿರುವ ಎಲ್ಲಾ ವಿದ್ಯಾರ್ಥಿಗಳು, 2023ರ ಮೇ 20 ಮತ್ತು 21ರಂದು ನಡೆಸುವ ಸಿಇಟಿ ಪರೀಕ್ಷೆ ಹಾಜರಾಗಲು ಈ ಮೂಲಕ ತಿಳಿಸಿದೆ.
ಹಿಂದಿನ ವರ್ಷಗಳಲ್ಲಿ ಎರಡನೇ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಆಯಾ ವರ್ಷದ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರೆ ಮಾತ್ರ ನಿಯಮಗಳ ಪ್ರಕಾರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತಿತ್ತು ಎಂಬ ಮಾಹಿತಿಯನ್ನು ಈ ಹಂತದಲ್ಲಿ ಅಭ್ಯರ್ಥಿಗಳ ಮತ್ತು ಪೋಷಕರ ಗಮನಕ್ಕೆ ತರಲಾಗಿದೆ ಎಂದು ತಿಳಿಸಲಾಗಿದೆ.
ಇದೇ ವೇಳೆ, ಸಿಇಟಿ ಪರೀಕ್ಷೆಗೆ ಹಾಜರಾದರೆ ಮಾತ್ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅಂಕಗಳನ್ನು ಸೀಟು ಹಂಚಿಕೆಗೆ ಪರಿಗಣನೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಾಗಲಿ ಅಥವಾ ಪೋಷಕರಾಗಲಿ ಸಿಇಟಿ ಪರೀಕ್ಷೆ ತೆಗೆದುಕೊಳ್ಳಬೇಕಾ ಅಥವಾ ಬೇಡವೇ ಎಂಬ ವಿಚಾರದಲ್ಲಿ ಗೊಂದಲಕ್ಕೆ ಒಳಗಾಗಬಾರದು. ಪೂರಕ ಪರೀಕ್ಷೆಯನ್ನು ಬರೆಯಲು ತೀರ್ಮಾನಿಸಿದ್ದರೂ, ಸಿಇಟಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ, ಶುಲ್ಕ
2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 21ರಂದು ಬಿಡುಗಡೆಯಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಪಿಯು ಮಂಡಳಿಯು ನೋಂದಣಿ ಪ್ರಾರಂಭಿಸಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾದ ದಿನದಿಂದ ನೋಂದಣಿ ಪ್ರಾರಂಭವಾಗಿದ್ದು, ದಂಡವಿಲ್ಲದೆ ಏಪ್ರಿಲ್ 26ರವರೆಗೆ ಅರ್ಜಿ ಸಲ್ಲಿಸಬಹುದಾಗಿತ್ತು. ಇದೀಗ ದಂಡ ಪಾವತಿಯೊಂದಿಗೆ ಏಪ್ರಿಲ್ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮೇ 2 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್ ಕೊನೆಯ ವಾರದಲ್ಲಿ ಪ್ರಕಟಿಸಲಾಗುತ್ತದೆ. ಇನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲು KSEAB.karanataka.gov.inನ ಅಧಿಕೃತ KSEAB ವೆಬ್‌ಸೈಟ್ ನೋಂದಣಿ ಮಾಡಬಹುದು.
ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಲ್ಕವನ್ನು ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಸಿ 1 ವರ್ಗದ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಉಳಿದದ ವರ್ಗದವರು ಒಂದು ವಿಷಯಕ್ಕೆ 140 ರೂ., ಎರಡು ವಿಷಯಗಳಿಗೆ 270 ರೂ. ಮತ್ತು ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ. ಪಾವತಿಸಬೇಕಾಗುತ್ತದೆ.












Click it and Unblock the Notifications