ಸಿಇಟಿ ಪರೀಕ್ಷೆ ನಿಗದಿಯಂತೆ ನಡೆಯಲಿವೆ: ಡಿಸಿಎಂ ಡಾ. ಅಶ್ವಥ್ ನಾರಾಯಣ್

ಬೆಂಗಳೂರು, ಜು. 10: ಸಿಇಟಿ ಪರೀಕ್ಷೆಗಳು ನಿಗದಿಯಂತೆ ಇದೇ ಜುಲೈ 30 ಹಾಗೂ 31ರಂದು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ಇದಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಇಟಿ ಘಟಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು.

ಪಿಜಿ‌ ಸಿಇಟಿ ಆಗಸ್ಟ್ 8 ಮತ್ತು 9 ನಡೆಯಲಿದೆ.‌ ಆಗಸ್ಟ್ 9 ರಂದು ಡಿಪ್ಲೋಮಾ ‌ಸಿಇಟಿ ನಡೆಯಲಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

 CET exams will be held on July 30 and 31 as scheduled: DCM Dr. Ashwath Narayana

ಕೆ-ಸೆಟ್ ಪರೀಕ್ಷೆ ತೀರ್ಮಾನ ಇಲ್ಲ: ಕೆ-ಸೆಟ್ ಪರೀಕ್ಷೆಗಳ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ. ಪರೀಕ್ಷೆ ತಡ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಹಿನ್ನಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳನ್ನು ವಹಿಸಿ ಪರೀಕ್ಷೆ ನಡೆಸಲಾಗುವುದು. ಸಮರ್ಪಕ ಸ್ಯಾನಿಟೈಸೇಷನ್ ಮತ್ತು ಸಾಮಾಜಿಕ ಅಂತರಕ್ಕೆ ಧಕ್ಕೆ ಆಗದ ಹಾಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+