ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ ಪ್ರವೇಶ ಶುಲ್ಕ ಪಾವತಿ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

|
Google Oneindia Kannada News

ಬೆಂಗಳೂರು, ಆಗಸ್ಟ್ 07: ರಾಜ್ಯದ ಹಲವೆಡೆ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥವಾಗಿದ್ದು, ದೈನಂದಿನ ಚಟುವಟಿಕೆಗಳಿಗೆ ಹಿನ್ನಡೆ ಆಗಿದೆ. ಇದನ್ನು ಗಮನಿಸಿ ರಾಜ್ಯ ಸರ್ಕಾರವು ಸಿಇಟಿ ಪ್ರವೇಶ ಶುಲ್ಕ ಪಾವತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಸಿಇಟಿ ಮೂರನೇ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ಗಡುವನ್ನು ಒಂದು ವಾರ ವಿಸ್ತರಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಳಗಾವಿಯಲ್ಲಿ ಭಯಂಕರ ಮಳೆ; ಚಿತ್ರ ನೋಡಿ... ಬೆಳಗಾವಿಯಲ್ಲಿ ಭಯಂಕರ ಮಳೆ; ಚಿತ್ರ ನೋಡಿ...

ಶುಲ್ಕ ಪಾವತಿಗೆ ಇಂದು ಕೊನೆಯ ದಿನವಾಗಿತ್ತು.ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

CET fee pay last date extended for one week

ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ಇದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಹೆಚ್ಚುವರಿ ಸಮಯ ನೀಡಲಾಗಿದೆ.

ಎರಡು ದಿನದಿಂದ ಮನೆ ಮೇಲೇ ಕೂತು ಅಂಗಲಾಚುತ್ತಿದ್ದಾರೆ ದಂಪತಿಎರಡು ದಿನದಿಂದ ಮನೆ ಮೇಲೇ ಕೂತು ಅಂಗಲಾಚುತ್ತಿದ್ದಾರೆ ದಂಪತಿ

ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆ. ಹಲವು ಗ್ರಾಮಗಳು ಪ್ರವಾಹದಿಂದಾಗಿ ದ್ವೀಪದಂತಾಗಿದ್ದು, ರಸ್ತೆ ಸಂಪರ್ಕವನ್ನು ಕಡಿದುಕೊಂಡಿವೆ. ಕೆಲವೆಡೆ ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಶಾಲೆಗಳಿಗೆ ನೀರು ನುಗ್ಗಿದೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಮೇಲಿನಂತೆ ನಿರ್ಣಯ ತೆಗೆದುಕೊಳ್ಳಲಾಗಿದೆ.

English summary
State government extended last date to pay fee for CET. The government took a decision keeping in mind about rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X