ಸಿಇಟಿ ಅಂಕ ಬಿಕ್ಕಟ್ಟು: 75:25 ಅನುಪಾತ ಪರಿಗಣಿಸಲು ಹೈಕೋರ್ಟ್ ಸಲಹೆ
ಬೆಂಗಳೂರು, ಆ.19: ಪುನರಾವರ್ತಿತ(repeaters) ಪಿಯುಸಿ ವಿದ್ಯಾರ್ಥಿಗಳ ಅಂಕ ಪರಿಗಣನೆ ಬಿಕ್ಕಟ್ಟು ಸಂಬಂಧ ಹೈಕೋರ್ಟ್ ಸರ್ಕಾರದ ಮುಂದೆ 75:25 ಸೂತ್ರದ ಸಲಹೆಯನ್ನು ಇಟ್ಟಿದೆ.
2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನುವೃತ್ತಿಪರ ಕೋರ್ಸ್‌ಗಳ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕ್ರಮ ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಗುರುವಾರ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು.
ತಾವು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.50ಅಂಕಗಳನ್ನು ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮತ್ತೊಂದೆಡೆ ಕೋವಿಡ್ ಹಿನ್ನೆಲೆಯಲ್ಲಿ 2021ನೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಉತ್ತೀರ್ಣರಾಗಿರುವುದರಿಂದ ವಿದ್ಯಾರ್ಥಿಗಳ ಮನವಿ ಪರಿಗಣಿಸುವುದಿಲ್ಲ ಎಂಬುದಾಗಿ ಸರ್ಕಾರ ಹೇಳುತ್ತಿದೆ.
ಹಾಗಾಗಿ, ಎರಡೂ ಕಡೆಯ ವಾದದಲ್ಲಿ ಸಮತೋಲನ ಸಾಧಿಸಲು ಸಿಇಟಿಯ ಶೇ75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಶೇ.25ರಷ್ಟು ಅಂಕಗಳನ್ನು ಪರಿಗಣಿಸಲು ಸಾಧ್ಯವೇ? ಎಂದು ಸರ್ಕಾರವನ್ನು ಪ್ರಶ್ನಿಸಿತು.

ನಿಲುವು ತಿಳಿಸಲು ಸರ್ಕಾರಕ್ಕೆ ಸೂಚನೆ: ಕಳೆದ ಸಾಲಿನಲ್ಲಿ ಪರೀಕ್ಷೆಯಲ್ಲಿ ಬರೆಯದೆ ಉತ್ತೀರ್ಣರಾಗಿರುವ ಪಿಯು ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25ರಷ್ಟು ಅಂಕಗಳನ್ನು ಪರಿಗಣಿಸಿ ಅವರಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಕಲ್ಪಿಸಲು ಸಾಧ್ಯವೇ ಎಂಬ ಬಗ್ಗೆ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.
ಅರ್ಜಿದಾರರು 25 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಸಕ್ತ ವರ್ಷದಲ್ಲಿ ಪಿಯುಸಿ ಪರೀಕ್ಷೆ ಬರೆದು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸಮನಾಗಿ ಹಿಂದಿನ ವರ್ಷ ಯಾವುದೇ ಪರೀಕ್ಷೆ ಬರೆಯದೇ ಉತ್ತೀರ್ಣವಾಗಿರುವ ವಿದ್ಯಾರ್ಥಿಗಳನ್ನು ಸಮಾನವಾಗಿ ಇಡುವುದು ನ್ಯಾಯಸಮ್ಮತವಲ್ಲ ಎಂದು ಸರ್ಕಾರ ಹೇಳುತ್ತಿದೆ.
ಸಿಇಟಿಗೆ ಪಿಯು ಅಂಕ ವಿವಾದ; ಕೌನ್ಸೆಲಿಂಗ್ ಆರಂಭಿಸಲ್ಲ ಎಂದ ಸರ್ಕಾರ
ಆದ್ದರಿಂದ ಅರ್ಜಿದಾರರು, ಸರ್ಕಾರದ ನಡುವೆ ಸಮತೋಲನ ಸಾಧಿಸಲು 75:25ರ ಅನುಪಾತದಲ್ಲಿ ಅಂಕಗಳನ್ನು ಪರಿಗಣಿಸುವ ಸಾಧ್ಯತೆ ಬಗ್ಗೆ ಸರ್ಕಾರ ನಿಲುವು ತಿಳಿಸಬೇಕು ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಆ.22ಕ್ಕೆ ಮುಂದೂಡಿತು.

ಅಲ್ಲದೆ, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕೆಇಎ ಯಾವುದೇ ತೆರನಾದ ದಾಖಲೆ ಪರಿಶೀಲಿಸುವ ಪ್ರಕ್ರಿಯೆಯಿಂದ ಅರ್ಜಿದಾರ ವಿದ್ಯಾರ್ಥಿಗಳ ಹಕ್ಕು ಮತ್ತು ವಾದಕ್ಕೆ ತೊಂದರೆ ಉಂಟು ಮಾಡುವಂತಿರಬಾರದು ಎಂದು ಸೂಚಿಸಿ ಆ.8ರಂದು ನೀಡಿದ್ದ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆಗೆ ವಿಸ್ತರಿಸಿ ನ್ಯಾಯಪೀಠ ಆದೇಶಿಸಿತು.
ಅರ್ಜಿದಾರರ ವಾದವೇನು?: 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ 2021-22ನೇ ಶೈಕ್ಷಣಿಕ ವರ್ಷದ ಪಿಯು ಅಂಕ ಅನ್ವಯಿಸುವುದಿಲ್ಲ ಎಂದು ಕೆಇಎ ಹೇಳಿದೆ. ಈ ಕುರಿತು ಸಂಬಂಧಪಟ್ಟ ಕಾಯ್ದೆಗೆ ತಿದ್ದುಪಡಿ ತರದೇ ಆದೇಶ ಮಾಡಿ, ಜಾರಿಗೊಳಿಸಲು ಮುಂದಾಗಿದೆ. ಪರೀಕ್ಷೆ ಮುಗಿದ್ದು, ಫಲಿತಾಂಶ ಪ್ರಕಟಿಸಿರುವಾಗ ಕೆಇಎ ನಿಯಮ ಬದಲಿಸಲಾಗದು. ಅದರ ಬದಲಾಗಿ 2020-21, 2021-22 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕಗಳನ್ನು ಆಧರಿಸಿ ಶ್ರೇಯಾಂಕ ಪ್ರಕಟಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications