ಜೂನ್ 1 ರಂದು ಸಿಇಟಿ ಫಲಿತಾಂಶ ಪ್ರಕಟ ಸಾಧ್ಯತೆ
ಬೆಂಗಳೂರು, ಮೇ 29: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಫಲಿತಾಂಶ ಜೂನ್ 1 ಅಥವಾ 2 ರಂದು ಹೊರಬೀಳುವ ಸಾಧ್ಯತೆ ಇದೆ. ಈ ಕುರಿತು ಮಂಗಳವಾರ ಪ್ರಾಧಿಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.
ಏಪ್ರಿಲ್ 30ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದರೂ ಸಿಬಿಎಸ್‌ಇ 12 ನೇ ತರಗತಿ ಫಲಿತಾಂಶ ಮೇ 26ರಂದು ಪ್ರಕಟವಾಗಿದೆ. ಅಂತೆಯೇ ಇನ್ನು, ವೈದ್ಯ ಹಾಗೂ ದಂತ ವೈದ್ಯ ಕೋರ್ಸ್ ಗಳ ಪ್ರವೇಶಕ್ಕಾಗಿ ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೇ 6ರಂದು ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಜೂನ್ 5 ರಂದು ಪ್ರಕಟಿಸಲಾಗುತ್ತದೆ.

ಜೂನ್ 12ರಿಂದ ಕೋರ್ಸ್‌ಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಮಂಡಳಿಯು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.












Click it and Unblock the Notifications