ಸಿಇಟಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, 2 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು, ಮೇ 24: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶವು ನಾಳೆ(ಮೇ 25)ರಂದು ಹೊರಬೀಳಲಿದೆ. ಫಲಿತಾಂಶವು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಲಿದೆ.
ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ.
ಎಂಜಿನಿಯರಿಂಗ್ ಕಾಲೇಜು ಪ್ರವೇಶಕ್ಕೆ ಮುಂದಾಗಿರುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಏ 29 ಹಾಗೂ 30ರಂದು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ಪರೀಕ್ಷೆ ಬರೆದಿದ್ದರು.

ರಾಜ್ಯಾದ್ಯಂತ 431 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು, ಬೆಂಗಳೂರಿನ 84 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.











Click it and Unblock the Notifications