ಸಿಇಟಿ ಬಿಕ್ಕಟ್ಟು: ಹೈಕೋರ್ಟ್‌ನಲ್ಲಿ ಶುಕ್ರವಾರ ಫೈನಲ್ ಪರಿಹಾರ
ಬೆಂಗಳೂರು,ಸೆ.22. ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಕುರಿತಂತೆ ಉಂಟಾಗಿರುವ ಬಿಕ್ಕಟ್ಟಿಗೆ ಹೈಕೋರ್ಟ್‌ನಲ್ಲಿ ಶುಕ್ರವಾರ ಫೈನಲ್ ಪರಿಹಾರ ಸಿಗುವ ಸಾಧ್ಯತೆ ಇದೆ.
ಪುನರಾವರ್ತಿತ ವಿದ್ಯಾರ್ಥಿಗಳ 2021ನೇ ಸಾಲಿನ ಪಿಯು ಅಂಕಗಳನ್ನು 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವ ವಿಚಾರದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ತಜ್ಞರ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಗುರುವಾರ ಸಲ್ಲಿಸಿದೆ.
ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ಪಡೆದ ಪಿಯು ಅಂಕಗಳನ್ನು ಪ್ರಸಕ್ತ ಈ ವರ್ಷದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿ ಹೊಸದಾಗಿ ಜೇಷ್ಠತಾ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ಏಕಸದಸ್ಯ ಪೀಠವು ನಿರ್ದೇಶನ ನೀಡಿತ್ತು.
ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸಲ್ಲಿಸಿರುವ ಮೇಲ್ಮನವಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಬಿ.ತಿಮ್ಮೇಗೌಡರ ಅಧ್ಯಕ್ಷತೆಯ ಐವರ ಸಮಿತಿಯು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವುದಕ್ಕಾಗಿ ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿನ್ಯಾಯಪೀಠಕ್ಕೆ ಸಲ್ಲಿಸಿದರು.

ಅಲ್ಲದೆ, ಸಿಇಟಿ ಬಿಕ್ಕಟ್ಟು ಪರಿಹರಿಸಲು ಅಗತ್ಯವಾದ ಸಮನ್ವಯ ಸೂತ್ರವೊಂದನ್ನು ರೂಪಿಸಲಾಗಿದೆ. ಆ ಕುರಿತ ವಿವರ ವರದಿಯಲ್ಲಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಸೆ.23ಕ್ಕೆ (ಶುಕ್ರವಾರ) ಮುಂದೂಡಿದೆ.
ಪರಿಹಾರ ರೂಪಿಸಲು ಆದೇಶ: ಪ್ರಸ್ತಕ ಸಾಲಿನಲ್ಲಿ ಸಿಇಟಿ ಬರೆದ ಮತ್ತು ಪುರಾವರ್ತಿತ (2020-21ನೇ ಸಾಲಿನ ದ್ವಿತೀಯು ಪಿಯು ವಿದ್ಯಾರ್ಥಿಗಳು) ವಿದ್ಯಾರ್ಥಿಗಳಿಗೆ ತೊಂದರೆಯಾಗದ ಮತ್ತು ಎಲ್ಲರಿಗೂ ನೆರವಾಗುವಂತಹ ಪರಿಹಾರ ಕ್ರಮಗಳನ್ನು ರೂಪಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠವು ಸೆ.19ರಂದು ಸರ್ಕಾರಕ್ಕೆ ಸೂಚಿಸಿತ್ತು.
ಏಕಸದಸ್ಯಪೀಠದ ಆದೇಶವೇನು?: 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನ ಸಿಇಟಿ ಫಲಿತಾಂಶಕ್ಕೆ ಪರಿಗಣಿಸದ ಕೆಇಎ ಕ್ರಮ ಪ್ರಶ್ನಿಸಿ 50ಕ್ಕೂ ಅಧಿಕ ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಏಕಸದಸ್ಯಪೀಠ ಸೆ.3ರಂದು ಆದೇಶ ಹೊರಡಿಸಿತ್ತು.
ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿಯ ಶೇ.50 ಅಂಕ ಹಾಗೂ ಸಿಇಟಿಯ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ Rank ಪಟ್ಟಿ ಪ್ರಕಟಿಸುವಂತೆ ಕೆಇಎಗೆ ಸೆ.3ರಂದು ಆದೇಶಿಸಿತ್ತು. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿ ಇದೀಗ ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ವಿಭಾಗೀಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.

ಸಮಾನವಾಗಿ ಪರಿಗಣಿಸಲಾಗದು: ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು, 2020-2021ನೇ ಸಾಲಿನಲ್ಲಿ ಪಿಯು ಪರೀಕ್ಷೆಯನ್ನೇ ಎದುರಿಸಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿದ್ದ ಆದೇಶದ ಅನುಸಾರ ಅವರು ಅಂಕಗಳನ್ನು ಪಡೆದುಕೊಂಡಿದ್ದಾರೆ. 2020-21ನೇ ಸಾಲಿನಲ್ಲಿ ಪಿಯು ವಿದ್ಯಾರ್ಥಿಗಳು ಅನುತ್ತೀರ್ಣ ಆಗಿರಲಿಲ್ಲ.
2021- 22ನೇ ಸಾಲಿನ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ್ದ ಪರಿಕ್ಷೆಯನ್ನು ಎದುರಿಸಿದ್ದರು. ಹಲವು ವಿದ್ಯಾರ್ಥಿಗಳು 600ಕ್ಕೆ 600 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಹಿಂದಿನ ಸಾಲಿನ ವಿದ್ಯಾರ್ಥಿಗಳು ಇಷ್ಟು ಅಂಕಗಳನ್ನು ಪಡೆದುಕೊಂಡಿಲ್ಲ. ಪರೀಕ್ಷೆಯನ್ನೇ ಬರೆಯದೇ ಉತ್ತೀರ್ಣವಾಗಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಎದುರಿಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳೊಂದಿಗೆ ಸಮಾನವಾಗಿ ನೋಡಲಾಗದು ಎಂದು ಮೇಲ್ಮನವಿಯಲ್ಲಿ ಆಕ್ಷೇಪಿಸಿದೆ.
ಏಕ ಸದಸ್ಯಪೀಠದ ಆದೇಶ ಅನುಷ್ಠಾನ ಮಾಡಿದರೆ, 2022ನೇ ಸಾಲಿನಲ್ಲಿ ಮೆರಿಟ್ ಪಡೆದಿರುವ ಒಂದು ಲಕ್ಷಕ್ಕೂ ವಿದ್ಯಾರ್ಥಿಗಳು Rank ಲಿಸ್ಟ್ ನಲ್ಲಿ ಕೆಳಗೆ ಹೋಗುತ್ತಾರೆ. ಯಾವುದೇ ತಪ್ಪು ಮಾಡದ ಅವರಿಗೆ ಅನ್ಯಾಯವಾಗಲಿದ್ದು, ಅವರ ಭವಿಷ್ಯಕ್ಕೆ ಮಾರಕವಾಗಲಿದೆ. ಏಕ ಸದಸ್ಯಪೀಠವು 2021-22ನೇ ಸಾಲಿನ ವಿದ್ಯಾರ್ಥಿಗಳ ವಾದವನ್ನು ಆಲಿಸಿಲ್ಲ. ಮುಖ್ಯವಾಗಿ 'ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ನಿಯಮಗಳು-2006' (ಸಿಇಟಿ ಪ್ರವೇಶಾತಿ ನಿಯಮಗಳು 2006ರ ನಿಯಮ 1(1)(ಸಿ) ವಿನ
ಧ್ಯೇಯೋದ್ದೇಶವನ್ನೇ ಏಕ ಸದಸ್ಯ ಪೀಠ ಪರಿಗಣಿಸಿಲ್ಲ. ಆದ್ದರಿಂದ ಏಕ ಸದಸ್ಯ ನ್ಯಾಯಪೀಠದ ಸೆ.3ರ ಆದೇಶ ರದ್ದುಪಡಿಸಬೇಕು ಎಂದು ಸರ್ಕಾರ ಮೇಲ್ಮನವಿಯಲ್ಲಿ ಕೋರಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications