ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ ಬಿಕ್ಕಟ್ಟು: ಹೈಕೋರ್ಟ್‌ನಲ್ಲಿ ಶುಕ್ರವಾರ ಫೈನಲ್ ಪರಿಹಾರ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು,ಸೆ.22. ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಕುರಿತಂತೆ ಉಂಟಾಗಿರುವ ಬಿಕ್ಕಟ್ಟಿಗೆ ಹೈಕೋರ್ಟ್‌ನಲ್ಲಿ ಶುಕ್ರವಾರ ಫೈನಲ್ ಪರಿಹಾರ ಸಿಗುವ ಸಾಧ್ಯತೆ ಇದೆ.

ಪುನರಾವರ್ತಿತ ವಿದ್ಯಾರ್ಥಿಗಳ 2021ನೇ ಸಾಲಿನ ಪಿಯು ಅಂಕಗಳನ್ನು 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವ ವಿಚಾರದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ತಜ್ಞರ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಗುರುವಾರ ಸಲ್ಲಿಸಿದೆ.

ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ಪಡೆದ ಪಿಯು ಅಂಕಗಳನ್ನು ಪ್ರಸಕ್ತ ಈ ವರ್ಷದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿ ಹೊಸದಾಗಿ ಜೇಷ್ಠತಾ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್‌ ಏಕಸದಸ್ಯ ಪೀಠವು ನಿರ್ದೇಶನ ನೀಡಿತ್ತು.

ಪಿಜಿ ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ: ವಿವರ ಇಲ್ಲಿದೆಪಿಜಿ ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ: ವಿವರ ಇಲ್ಲಿದೆ

ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸಲ್ಲಿಸಿರುವ ಮೇಲ್ಮನವಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಬಿ.ತಿಮ್ಮೇಗೌಡರ ಅಧ್ಯಕ್ಷತೆಯ ಐವರ ಸಮಿತಿಯು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವುದಕ್ಕಾಗಿ ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿನ್ಯಾಯಪೀಠಕ್ಕೆ ಸಲ್ಲಿಸಿದರು.

CET Row: HC will decide on Ranking finally on Friday Sep 23

ಅಲ್ಲದೆ, ಸಿಇಟಿ ಬಿಕ್ಕಟ್ಟು ಪರಿಹರಿಸಲು ಅಗತ್ಯವಾದ ಸಮನ್ವಯ ಸೂತ್ರವೊಂದನ್ನು ರೂಪಿಸಲಾಗಿದೆ. ಆ ಕುರಿತ ವಿವರ ವರದಿಯಲ್ಲಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಸೆ.23ಕ್ಕೆ (ಶುಕ್ರವಾರ) ಮುಂದೂಡಿದೆ.

ಪರಿಹಾರ ರೂಪಿಸಲು ಆದೇಶ: ಪ್ರಸ್ತಕ ಸಾಲಿನಲ್ಲಿ ಸಿಇಟಿ ಬರೆದ ಮತ್ತು ಪುರಾವರ್ತಿತ (2020-21ನೇ ಸಾಲಿನ ದ್ವಿತೀಯು ಪಿಯು ವಿದ್ಯಾರ್ಥಿಗಳು) ವಿದ್ಯಾರ್ಥಿಗಳಿಗೆ ತೊಂದರೆಯಾಗದ ಮತ್ತು ಎಲ್ಲರಿಗೂ ನೆರವಾಗುವಂತಹ ಪರಿಹಾರ ಕ್ರಮಗಳನ್ನು ರೂಪಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠವು ಸೆ.19ರಂದು ಸರ್ಕಾರಕ್ಕೆ ಸೂಚಿಸಿತ್ತು.

ಏಕಸದಸ್ಯಪೀಠದ ಆದೇಶವೇನು?: 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನ ಸಿಇಟಿ ಫಲಿತಾಂಶಕ್ಕೆ ಪರಿಗಣಿಸದ ಕೆಇಎ ಕ್ರಮ ಪ್ರಶ್ನಿಸಿ 50ಕ್ಕೂ ಅಧಿಕ ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಏಕಸದಸ್ಯಪೀಠ ಸೆ.3ರಂದು ಆದೇಶ ಹೊರಡಿಸಿತ್ತು.

CUET UG Result 2022 : ಪದವಿ ಪೂರ್ವ ಪರೀಕ್ಷಾ ಫಲಿತಾಂಶ ಪ್ರಕಟ, ಚೆಕ್ ಮಾಡಿ!CUET UG Result 2022 : ಪದವಿ ಪೂರ್ವ ಪರೀಕ್ಷಾ ಫಲಿತಾಂಶ ಪ್ರಕಟ, ಚೆಕ್ ಮಾಡಿ!

ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿಯ ಶೇ.50 ಅಂಕ ಹಾಗೂ ಸಿಇಟಿಯ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ Rank ಪಟ್ಟಿ ಪ್ರಕಟಿಸುವಂತೆ ಕೆಇಎಗೆ ಸೆ.3ರಂದು ಆದೇಶಿಸಿತ್ತು. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿ ಇದೀಗ ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ವಿಭಾಗೀಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.

CET Row: HC will decide on Ranking finally on Friday Sep 23

ಸಮಾನವಾಗಿ ಪರಿಗಣಿಸಲಾಗದು: ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು, 2020-2021ನೇ ಸಾಲಿನಲ್ಲಿ ಪಿಯು ಪರೀಕ್ಷೆಯನ್ನೇ ಎದುರಿಸಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿದ್ದ ಆದೇಶದ ಅನುಸಾರ ಅವರು ಅಂಕಗಳನ್ನು ಪಡೆದುಕೊಂಡಿದ್ದಾರೆ. 2020-21ನೇ ಸಾಲಿನಲ್ಲಿ ಪಿಯು ವಿದ್ಯಾರ್ಥಿಗಳು ಅನುತ್ತೀರ್ಣ ಆಗಿರಲಿಲ್ಲ.

2021- 22ನೇ ಸಾಲಿನ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ್ದ ಪರಿಕ್ಷೆಯನ್ನು ಎದುರಿಸಿದ್ದರು. ಹಲವು ವಿದ್ಯಾರ್ಥಿಗಳು 600ಕ್ಕೆ 600 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಹಿಂದಿನ ಸಾಲಿನ ವಿದ್ಯಾರ್ಥಿಗಳು ಇಷ್ಟು ಅಂಕಗಳನ್ನು ಪಡೆದುಕೊಂಡಿಲ್ಲ. ಪರೀಕ್ಷೆಯನ್ನೇ ಬರೆಯದೇ ಉತ್ತೀರ್ಣವಾಗಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಎದುರಿಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳೊಂದಿಗೆ ಸಮಾನವಾಗಿ ನೋಡಲಾಗದು ಎಂದು ಮೇಲ್ಮನವಿಯಲ್ಲಿ ಆಕ್ಷೇಪಿಸಿದೆ.

ಏಕ ಸದಸ್ಯಪೀಠದ ಆದೇಶ ಅನುಷ್ಠಾನ ಮಾಡಿದರೆ, 2022ನೇ ಸಾಲಿನಲ್ಲಿ ಮೆರಿಟ್ ಪಡೆದಿರುವ ಒಂದು ಲಕ್ಷಕ್ಕೂ ವಿದ್ಯಾರ್ಥಿಗಳು Rank ಲಿಸ್ಟ್ ನಲ್ಲಿ ಕೆಳಗೆ ಹೋಗುತ್ತಾರೆ. ಯಾವುದೇ ತಪ್ಪು ಮಾಡದ ಅವರಿಗೆ ಅನ್ಯಾಯವಾಗಲಿದ್ದು, ಅವರ ಭವಿಷ್ಯಕ್ಕೆ ಮಾರಕವಾಗಲಿದೆ. ಏಕ ಸದಸ್ಯಪೀಠವು 2021-22ನೇ ಸಾಲಿನ ವಿದ್ಯಾರ್ಥಿಗಳ ವಾದವನ್ನು ಆಲಿಸಿಲ್ಲ. ಮುಖ್ಯವಾಗಿ 'ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ನಿಯಮಗಳು-2006' (ಸಿಇಟಿ ಪ್ರವೇಶಾತಿ ನಿಯಮಗಳು 2006ರ ನಿಯಮ 1(1)(ಸಿ) ವಿನ

ಧ್ಯೇಯೋದ್ದೇಶವನ್ನೇ ಏಕ ಸದಸ್ಯ ಪೀಠ ಪರಿಗಣಿಸಿಲ್ಲ. ಆದ್ದರಿಂದ ಏಕ ಸದಸ್ಯ ನ್ಯಾಯಪೀಠದ ಸೆ.3ರ ಆದೇಶ ರದ್ದುಪಡಿಸಬೇಕು ಎಂದು ಸರ್ಕಾರ ಮೇಲ್ಮನವಿಯಲ್ಲಿ ಕೋರಿದೆ.

English summary
Karnataka CET Row: Report on CET rankings(repeaters) submitted before Karnataka High Court today(September 22) HC will decide on it Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X