ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳೇ ಆಲ್‌ ದಿ ಬೆಸ್ಟ್

|
Google Oneindia Kannada News

ಬೆಂಗಳೂರು, ಏ.29: ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧಗೊಂಡಿದೆ. ಲೋಕಸಭೆ ಚುನಾವಣೆಯಿಂದ ಮುಂದೂಡಲ್ಪಟ್ಟಿತ್ತು.

ಮಂಗಳವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 1 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ

ವಿದ್ಯಾರ್ಥಿಗಳು ಪ್ರವೇಶ ಪತ್ರದ ಜೊತೆ ಪ್ಯಾನ್, ಆಧಾರ್, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, 2 ನೇ ಪಿಯುಸಿ ಪ್ರವೇಶ ಪತ್ರ ಸೇರಿದಂತೆ ಯಾವುದಾದರು ಒಂದು ಮಾನ್ಯತೆ ಹೊಂದಿರುವ ಗುರುತಿನ ಪತ್ರವನ್ನ ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.

ಈ ಬಾರಿ 1,94,311 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು 97,716 ಮತ್ತು ವಿದ್ಯಾರ್ಥಿನಿಯರು 96,585 ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 431 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನ 84 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೊದಲ ದಿನವಾದ ಇಂದು ಜೀವಶಾಸ್ತ್ರ ಮತ್ತು ಗಣಿತ ವಿಭಾಗದ ಪರೀಕ್ಷೆ ನಡೆಯಲಿದೆ.

CET to begin in Karnataka on April 29

ಪರೀಕ್ಷಾ ಅಕ್ರಮ ತಡೆಯಲು 431 ವೀಕ್ಷಕರು, 862 ವಿಶೇಷ ದಳದ ಸದಸ್ಯರು, 9,700 ಕೊಠಡಿ ಮೇಲ್ವಿಚಾರಕರು, ಸೇರಿ ಒಟ್ಟಾರೆ 28,245 ಜನರನ್ನ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಯುಕೇಟರ್, ಟಾಬ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನ ತೆಗೆದುಕೊಂಡು ಹೋಗುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

English summary
The Common Entrance Test (CET) for engineering and other professional courses in the State will begin on Monday with the biology and mathematics papers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X