CH Vijayashankar: ಮೈಸೂರು ಮಾಜಿ ಸಂಸದ ಸಿ. ಎಚ್. ವಿಜಯಶಂಕರ್ ರಾಜ್ಯಪಾಲರಾಗಿ ನೇಮಕ
ಬೆಂಗಳೂರು, ಜುಲೈ 28: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ. ಎಚ್. ವಿಜಯಶಂಕರ್ ಸಹ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
ಭಾನುವಾರ ಈ ಕುರಿತು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಸಿ. ಎಚ್. ವಿಜಯಶಂಕರ್ ಅವರನ್ನು ಮೇಘಾಲಯ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಸಿ. ಎಚ್. ವಿಜಯಶಂಕರ್ ಪರಿಚಯ: ಸಿ. ಎಚ್. ವಿಜಯಶಂಕರ್ ಅವರ ಪೂರ್ಣ ಹೆಸರು ಚಂದ್ರಶೇಖರ್ ಹೆಚ್. ವಿಜಯಶಂಕರ್. 1956ರ ಅಕ್ಟೋಬರ್ 21ರಂದು ಅವರು ಜನಿಸಿದರು. ಮೂಲತಃ ರಾಣೆಬೆನ್ನೂರಿನವರಾದ ಅವರು ರಾಜಕೀಯ ನೆಲೆ ಕಂಡುಕೊಂಡಿದ್ದು ಮೈಸೂರಿನಲ್ಲಿ.
ಸಿ. ಎಚ್. ವಿಜಯಶಂಕರ್ 1998ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿ ಸಂಸದರಾಗಿ ಆಯ್ಕೆಯಾದರು. 2004ರ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು, 316,442 ಮತಗಳನ್ನು ಪಡೆದು ಜೆಡಿಎಸ್‌ನ ಎ. ಎಸ್. ಗುರುಸ್ವಾಮಿ ಸೋಲಿಸಿ ಸಂಸದರಾಗಿ 2ನೇ ಬಾರಿಗೆ ಆಯ್ಕೆಯಾದರು.
ಆದರೆ 2009ರ ಲೋಕಸಭೆ ಚುನಾವಣೆಯಲ್ಲಿ ಸಿ. ಎಚ್. ವಿಜಯಶಂಕರ್, ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿದು 3,47,119 ಮತಗಳನ್ನು ಪಡೆದು, ಕಾಂಗ್ರೆಸ್‌ನ ಎಚ್. ವಿಶ್ವನಾಥ್ ವಿರುದ್ಧ ಸೋಲು ಕಂಡರು.
2014ರ ಲೋಕಸಭೆ ಚುನಾವಣೆಯಲ್ಲಿ ಸಿ. ಎಚ್. ವಿಜಯಶಂಕರ್ ಅವರನ್ನು ಬಿಜೆಪಿ ಹಾಸನ ಕ್ಷೇತ್ರದಿಂದ ಕಣಕ್ಕಿಳಿಸಿತು. 1,65,688 ಮತಗಳನ್ನು ಪಡೆದ ಅವರು ಜೆಡಿಎಸ್‌ನ ಎಚ್. ಡಿ. ದೇವೇಗೌಡರ ವಿರುದ್ಧ ಸೋತರು, ಚುನಾವಣೆಯಲ್ಲಿ 3ನೇ ಸ್ಥಾನವನ್ನು ಪಡೆದರು.
ಸಿ. ಎಚ್. ವಿಜಯಶಂಕರ್ ಕುರುಬ ಸಮುದಾಯದ ನಾಯಕರು. ಸಜ್ಜನ ರಾಜಕಾರಣಿಯಾದ ಅವರು, ಒಂದು ಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದವರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಅವರಿಗೆ 2019ರ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದರು ಸಿದ್ದರಾಮಯ್ಯ. ಆದರೆ ಚುನಾವಣೆಯಲ್ಲಿ ವಿಜಯಶಂಕರ್ 550,327 ಮತಗಳನ್ನು ಪಡೆದು, ಬಿಜೆಪಿಯ ಪ್ರತಾಪ್ ಸಿಂಹ ವಿರುದ್ಧ ಸೋಲು ಕಂಡರು.
ಬಳಿಕ 2019ರ ನವೆಂಬರ್‌ನಲ್ಲಿಯೇ ಸಿ. ಎಚ್. ವಿಜಯಶಂಕರ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ವಾಪಸ್ ಆದರು. 2004ರ ಚುನಾವಣೆಯಲ್ಲಿ ದಿ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೋಲಿಸಿದ್ದ ಸಿ. ಎಚ್. ವಿಜಯಶಂಕರ್ 2009ರ ಚುನಾವಣೆಯಲ್ಲಿ ಸೋತರು.
2014ರ ಚುನಾವಣೆಯಲ್ಲಿ ಸಿ. ಎಚ್. ವಿಜಯಶಂಕರ್ ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಪ್ರತಾಪ್ ಸಿಂಹಗೆ ಟಿಕೆಟ್ ನೀಡಿತು. ಅಲ್ಲದೇ ವಿಜಯಶಂಕರ್ ಅವರನ್ನು ಹಾಸನದಿಂದ ಕಣಕ್ಕಿಳಿಸಿತು.
ಲೋಕಸಭೆ ಚುನಾವಣೆ 2014ರ ಬಳಿಕ ಸಿ. ಎಚ್. ವಿಜಯಶಂಕರ್, "ಬಿಜೆಪಿಯಲ್ಲಿ ನನಗೆ ಅತೀವ ಅನ್ಯಾಯವಾಗಿದೆ. ನನ್ನ ಮಾತೃಪಕ್ಷ ಕಾಂಗ್ರೆಸ್‌ಗೆ ಸೇರುವೆ" ಎಂದು 2017ರಲ್ಲಿ ಹೇಳಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದರು. 2019ರ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಬಿಜೆಪಿಗೆ ಅವರು ವಾಪಸ್ ಆಗಿದ್ದರು.
1998ರಿಂದ 2000ದ ತನಕ ಸಿ. ಎಚ್. ವಿಜಯಶಂಕರ್ ವಿಧಾನ ಪರಿಷತ್ ಸದಸ್ಯರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾಗಿ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾಗಿ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಸಿ. ಎಚ್. ವಿಜಯಶಂಕರ್ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರ್ನಾಟಕ ಸರ್ಕಾರದಲ್ಲಿ ಅರಣ್ಯ ಹಾಗೂ ಸಣ್ಣ ಕೈಗಾರಿಕೆ ಸಚಿವರಾಗಿಯೂ ಕೆಲಸ ಮಾಡಿದ್ದಾರೆ.
1992-94 ಮೈಸೂರು (ಮೈಸೂರು ಮತ್ತು ಚಾಮರಾಜನಗರ ಅಖಂಡ ಜಿಲ್ಲೆ) ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದರು. 1994ರಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ನಡೆದ ಮಧ್ಯಂತರ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್










Click it and Unblock the Notifications