ಬಿಜೆಪಿ ಟಿಕೆಟ್ ಡೀಲ್ ಕೇಸ್: ಸಿಸಿಬಿ ಕಚೇರಿಯಿಂದ ಆಸ್ಪತ್ರೆಗೆ ಚೈತ್ರಾ ಕುಂದಾಪುರ ಶಿಫ್ಟ್! ಆಗಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 15: ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ಅವರು ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪದ ಅಡಿಯಲ್ಲಿ ಸಿಸಿಬಿ ಅಧಿಕಾರಿಗಳು ಬಂದಿಸಿದ್ದು, ಏಕಾಏಕಿ ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಹೌದು, ಸಿಸಿಬಿ ಕಚೇರಿಯಲ್ಲಿ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆದುಕೊಂಡು ಬರಲಾಗಿದ್ದು, ಏಕಾಏಕಿ ಚೈತ್ರಾ ಕುಂದಾಪುರ ಕುಸಿದು ಬಿದಿದ್ದು, ಪ್ರಾಥಮಿಕವಾಗಿ ಚೈತ್ರಾ ಕುಂದಾಪುರ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರಿಂದ ತಿಳಿದು ಬಂದಿದೆ. ಸದ್ಯ ವಿಕ್ಟೋರಿಯಾ ಐಸಿಯು ನಲ್ಲಿ ಚೈತ್ರಾ ಕುಂದಾಪುರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.












Click it and Unblock the Notifications