ಲೋಕಸಭಾ ಚುನಾವಣೆ: ಉತ್ತರ ಕನ್ನಡದಲ್ಲಿ ಚಕ್ರವರ್ತಿ ಸೂಲಿಬೇಲೆ, ಹರಿಪ್ರಕಾಶ ಕೋಣೆಮನೆ ಹೆಸರು ಮುನ್ನೆಲೆಗೆ
ಬೆಂಗಳೂರು, ಫೆಬ್ರವರಿ 16: 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ತಯಾರಿಯನ್ನ ನಡೆಸಿದೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕೊಟ್ಟ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯಲ್ಲೂ ಅದೇ ಮಾದರಿಯನ್ನ ಅನುಸರಿಸಲು ಹೈಕಮಾಂಡ್ ಲೆಕ್ಕಾಚಾರವನ್ನ ಹಾಕಿಕೊಂಡಿದೆ.
ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಗಾಳ ಟಿಕೆಟ್ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ. ಅದರಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈ ಬಾರೀ ಹಾಲಿ ಸಂಸದರಾದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಸಿಗುವುದು ಅನುಮಾನ. ಕಳೆದ ವರ್ಷ ನಡೆದ ರಾಜ್ಯ ಚುನಾವಣೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಗೆದ್ದು ಸಂಸದೀಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲವಾಗಿ ಹೊರಹೊಮ್ಮಿತ್ತು.

ಇಷ್ಟು ದಿನಗಳ ಕಾಲ ಅನಂತ್ ಕುಮಾರ್ ಹೆಗಡೆಯ ಅವರ ಅನಾರೋಗ್ಯ ಕಾರಣದಿಂದ ರಾಜಕೀಯ ಕಾರ್ಯಕ್ರಮಗಳಿಂದ ದೂರ ಉಳಿದಿದ್ದು, ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಫುಲ್ ಆಕ್ಟಿವ್ ಆಗಿದ್ದಾರೆ. ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರಿಂದ ಅಂತರವನ್ನ ಕಾಯ್ದುಕೊಂಡಿರುವ ಅನಂತ್ ಕುಮಾರಸ್ ಹೆಗಡೆ ಅವರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಇಬ್ಬರು ನಾಯಕರ ಹೆಸರು ಕೇಳಿ ಬರುತ್ತಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯಾಗಿ ಚಕ್ರವರ್ತಿ ಸೂಲಿಬೆಲೆ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಚಿಸಲಾದ ನಮೋ ಬ್ರಿಗೇಡ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ವಾಗ್ದಾಳಿ ನಡೆಸಿ ಸೂಲಿಬೆಲೆ ಸುದ್ದಿಯಾಗಿದ್ದರು. ಉತ್ತರ ಕನ್ನಡ ಕ್ಷೇತ್ರದಿಂದ ಪ್ರಬಲವಾಗಿ ಕೇಳಿ ಬಂದಿದೆ.

ಇನ್ನೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ರಾಜ್ಯ ಭಾರತೀಯ ಜನತಾ ಪಕ್ಷದ ವಕ್ತಾರರಾಗಿ ವಿಸ್ತಾರ ಮೀಡಿಯಾದ ಮುಖ್ಯಸ್ಥ ಹಾಗೂ ಪತ್ರಕರ್ತರಾದ ಹರಿ ಪ್ರಕಾಶ ಕೋಣೆಮನೆಯವರ ಹೆಸರು ಸಹ ಕೇಳಿ ಬರುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸನ್ನ ಹೊಂದಿದ್ದು, ಹಲವು ಶಿಕ್ಷಣ ಸಂಸ್ಥೆಗಳ ಮೂಲಕ ತಮ್ಮದೇ ಆದ ಜನ ಬೆಂಬಲವನ್ನ ಹೊಂದಿದ್ದಾರೆ. ಇನ್ನೂ ಆರ್ ಎಸ್ ಎಸ್ ನಾಯಕರ ಜೊತೆಗೆ ಉತ್ತಮ ಸಂಬಂಧವನ್ನ ಹೊಂದಿರುವ ಹರಿಪ್ರಕಾಶ್ ಕೋಣೆಮನೆ ಅವರು ಸಹ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳನ್ನ ಒಬ್ಬರಾಗಿದ್ದಾರೆ ಎನ್ನಲಾಗಿದೆ.
ಒಟ್ಟಲ್ಲಿ, ಹಿಂದುತ್ವದ ಭದ್ರಕೋಟೆಯಾದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರಾದ ಅನಂತ್ ಕುಮಾರ್ ಹೆಗಡೆ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಲಿದ್ದು, ಈ ಕ್ಷೇತ್ರಕ್ಕೆ ಚಕ್ರವರ್ತಿ ಸೂಲಿಬೆಲೆ ಹಾಗೂ ಹರಿಪ್ರಕಾಶ ಕೋಣೆಮನೆ ಅವರ ಹೆಸರು ಪ್ರಬಲವಾಗಿ ಕೇಳಿ ಬಂದಿದ್ದು, ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications