ಎರಡುವರೆ ವರ್ಷಗಳ ನಂತರವೂ ಡಿಕೆಶಿಯ ಸಿಎಂ ಕನಸು ನನಸಾಗುವುದು ಸುಲಭವಲ್ಲ- ಕಾರಣಗಳೇನು ಗೊತ್ತೇ? ಇನ್‌ಸೈಡ್ ಸ್ಟೋರಿ
ಬೆಂಗಳೂರು, ನವೆಂಬರ್ 05: ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಆಡಳಿತ ನಡೆಸಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ರೆ, ಇತ್ತ ಕಾಂಗ್ರೆಸ್ ಸಾಮೂಹಿಕ ನಾಯಕತ್ವದಡಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿ ಜಯಗಳಿಸಿತ್ತು.
ಸರ್ಕಾರ ರಚನೆಯ ವೇಳೆ ಯಾರು ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಹೈಕಮಾಂಡ್ ನಾಯಕರ ಮಟ್ಟದಲ್ಲಿ ಸರಣಿ ಸಭೆಗಳಾಗಿತ್ತು. ಇನ್ನೂ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಶಾಸಕರ ಅಭಿಪ್ರಾಯ ಕೇಳಿದಾಗ ಬಹುತೇಕ ಶಾಸಕರು ಸಿದ್ದರಾಮಯ್ಯ ಪರವಾಗಿಯೇ ನಿಂತಿದ್ರೆ, ಇನ್ನೂ ಬಹುತೇಕ ಶಾಸಕರು ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ತಿರ್ಮಾನಕ್ಕೆ ಬದ್ಧ ಎಂದು ಹೇಳಿದ್ರೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪರವಾಗಿ ಬೆರಳೆಣಿಕೆಯಷ್ಟು ಶಾಸಕರು ಮಾತ್ರ ಬೆಂಬಲಕ್ಕೆ ನಿಂತಿದ್ರು.

ಇನ್ನೂ ಮುಖ್ಯಮಂತ್ರಿ ಸ್ಥಾನವನ್ನ ಪಡೆಯುವ ಕುರಿತು ಹಠ ಬಿಡದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತನ್ನ ಪ್ರಭಾವವನ್ನು ಬಳಸಿ ಹೈಕಮಾಂಡ್ ನಾಯಕ ಮಟ್ಟದಲ್ಲಿ ದೊಡ್ಡ ಸರ್ಕಸ್ ನಡೆಸಿದ್ರು, ಕೊನೆಗೆ ಮುಖ್ಯಮಂತ್ರಿ ಸ್ಥಾನವನ್ನ ಪಡೆಯುವ ಕುರಿತು ಹಲವು ಪ್ರಯತ್ನಗಳು ವಿಫಲವಾದ ಹಿನ್ನಲೆ ಕೊನೆಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರು. ಅಲ್ಲದೇ ಒಂದೇ ಉಪಮುಖ್ಯಮಂತ್ರಿ ಸ್ಥಾನವನ್ನ ನೀಡಬೇಕು ಹೆಚ್ಚುವರಿಯಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬಾರದು ಎಂದು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
ಅಲ್ಲದೇ ಮುಖ್ಯಮಂತ್ರಿ ಬದಲಾವಣೆ ವಿಚಾರ ಚಾಲ್ತಿಯಲ್ಲಿರಬೇಕು ಎಂದು ಹೋದ ಕಡೆ, ಬಂದ ಕಡೆಯಲ್ಲೇಲ್ಲ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ, ಮುಂದಿನ ದಿನಗಳಲ್ಲಿ ಆಗುತ್ತೇ ಎನ್ನುವ ಮಾತುಗಳು ಕೇಳಿ ಬಂದಿವೆ. ನಂತರ ಡಿ ಕೆ ಶಿವಕುಮಾರ್ ಬೆಂಬಲಗ ಶಾಸಕರು ಈ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನ ಪದೇ ಪದೇ ಹೇಳಿಕೆ ನೀಡುತ್ತಾ ಈ ವಿಚಾರವನ್ನ ಹೆಚ್ಚು ಚರ್ಚೆಯಲ್ಲಿರುವಂತೆ ಮಾಡಿದರು.

ಹಿರಿಯ ಸಚಿವರು ಹಾಗೂ ಹಿರಿಯ ಶಾಸಕರನ್ನ ಬಿಟ್ಟು ನೂತನವಾಗಿ ಗೆದ್ದ ಶಾಸಕರಾದ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ, ಶಾಸಕ ಉದಯ್ ಗೌಡ, ಹಾಗೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಎರಡೂವರೆ ವರ್ಷಗಳ ನಂತರ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಹಿರಂಗವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪರ ಬ್ಯಾಟಿಂಗ್ ಬೀಸಿದರು. ಆದರೆ, ಇದುವರೆಗೂ ಸಹ ಸಂಪುಟದಲ್ಲಿರುವ ಹಿರಿಯ ಸಚಿವರು ಹಾಗೂ ಸಂಪುಟದಿಂದ ಹೊರಗಿರುವ ಹಲವು ನಾಯಕರು ಸಿದ್ದರಾಮಯ್ಯ ಗೆ ಸಾಥ್ ನೀಡಿದ್ದಾರೆಯೇ ಹೊರೆತು, ಡಿ ಕೆ ಶಿವಕುಮಾರ್ ಪರ ಮಾತನಾಡಿಲ್ಲ.
ಇನ್ನೂ ಹೈಕಮಾಂಡ್ ನಿರ್ಧಾರದಂತೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಮಾಡಿದ ಮೇಲೆಯೂ ಕಾಂಗ್ರೆಸ್ ಪಾಳಯದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್ ಬಣ ಎಂದು ಸೃಷ್ಟಿಯಾಗಿದ್ದು, ನೂತನ ಶಾಸಕರನ್ನ ಬಿಟ್ಟು ಬೇರೆ ಯಾವ ಶಾಸಕರು ಸಹ ಡಿ ಕೆ ಶಿವಕುಮಾರ್ ಪರ ಒಲವು ತೋರಿಲ್ಲ ಎನ್ನಲಾಗಿದೆ. ಆದರೆ ಸಂಪುಟದ ಹಿರಿಯ ಸಚಿವರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಿದ್ದರಾಮಯ್ಯ ಅವರನ್ನ ಬೆಂಬಲಿಸಿದ್ದಾರೆ.
ಈ ಹಿಂದೆ ಅಕ್ರಮ ಅಸ್ತಿ ಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್‌ಜೈಲಿನಿಂದ ಹೊರ ಬಂದ ನಂತರ ಕಾಂಗ್ರೆಸ್ ಹೈಕಮಾಂಡ್ ಡಿ ಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನ ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಕಟ್ಟುವ ಹೊಣೆಯನ್ನ ಡಿ ಕೆ ಶಿವಕುಮಾರ್ ಅವರಿಗೆ ನೀಡಿತ್ತು. ನಂತರ ಹೈಕಮಾಂಡ್ ಕೊಟ್ಟ ಕೆಲಸವನ್ನ ಚಾಚುತಪ್ಪದೇ ನಿರ್ವಹಿಸಿ, ಪಕ್ಷವನ್ನ ರಾಜ್ಯದಲ್ಲಿ ಅಧಿಕಾರಕ್ಕೆ ತಂದ ಕೀರ್ತಿ ಡಿ ಕೆ ಶಿವಕುಮಾರ್ ಅವರಿಗೆ ಸಲ್ಲುತ್ತದೆ.
ಒಟ್ನಾಲಿ ಹಠ ಬಿಡದ ಡಿ ಕೆ ಶಿವಕುಮಾರ್ ಅವರು ರಾಜಕೀಯವಾಗಿ ನಾನು ಏನನ್ನ ಪಡೆಯಬೇಕೋ ಅದನ್ನ ಪಡೆಯುತ್ತೇನೆ ಎಂದಿದ್ದು, ಸೋನಿಯಾ ಗಾಂಧಿ ಅವರ ಕುಟುಂಬದ ಬೆಂಬಲ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಅವರಿಗಿದೆ. ಆದರೆ, ಈಗಾಗಲೇ ಅಕ್ರಮ ಅಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೂರು ತಿಂಗಳ ಒಳಗೆ ತನಿಖೆಯಾಗಬೇಕು ಎಂದು ಹೈಕೋರ್ಟ್ ಹೇಳಿದ್ದು, ಕನಕಪುರ ಬಂಡೆ ಅವರ ರಾಜಕೀಯ ಭವಿಷ್ಯ ಹಾಗೂ ಮುಖ್ಯಮಂತ್ರಿ ಆಗುವ ಕನಸ್ಸಿಗೆ ಸಾಲು ಸಾಲು ಸಮಸ್ಯೆಗಳು ಎದುರಾಗಿದೆ. ಈ ಎಲ್ಲಾ ಸಮಸ್ಯೆ ಹಾಗೂ ಅಡೆತಡೆಗಳನ್ನ ಎದುರಿಸಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರಾ ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
-
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications