HD Kumaraswamy: ಜೆಡಿಎಸ್ ನೂತನ ಸಾರಥಿ ಹೆಚ್ ಡಿ ಕುಮಾರಸ್ವಾಮಿ ಮುಂದಿರುವ ಸವಾಲು, ಗುರಿಗಳು!
ಬೆಂಗಳೂರು, ಅಕ್ಟೋಬರ್ 28: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದ್ದು, 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇತ್ತ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ.
ಬಿಜೆಪಿ ಜೊತೆಗಿನ ಮೈತ್ರಿಯಿಂದಾಗಿ ಬಹಿರಂಗವಾಗಿ ಹಲವು ಜೆಡಿಎಸ್ ನಾಯಕರು ಅಸಮಾಧಾನ ಹೊರಹಾಕಿದ್ದು, ಮುಸ್ಲಿಂ ಸಮುದಾಯದ ನಾಯಕ ಸಿಎಂ ಇಬ್ರಾಹಿಂ ಬಹಿರಂಗವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದು, ಜೆಡಿಎಸ್ ಪಾಳಯದಲ್ಲಿ ಮುಜುಗರಕ್ಕೆ ಕಾರಣವಾಗಿದ್ದು, ಸಿಎಂ ಇಬ್ರಾಹಿಂ ಅವರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಸರ್ಜಿಸಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನ ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಹೌದು, ಇದೀಗ ಲೋಕಸಭಾ ಚುನಾವಣೆ, ಬಿಬಿಎಂಪಿ ಚುನಾವಣೆಗೆ ಸೇರಿದಂತೆ ಸ್ಥಳೀಯ ಮಟ್ಟ ಚುನಾವಣೆಗಳು ಮುಂದೆ ಎದುರಾಗಲಿದ್ದು, ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಕುಮಾರಸ್ವಾಮಿ ಮುಂದೆ ಸಾಲು ಸಾಲು ಸವಾಲು ಹಾಗೂ ಗುರಿಗಳು ಇವೆ.
ಹೆಚ್ ಡಿ ಕುಮಾರಸ್ವಾಮಿ ಮುಂದಿರುವ ಸವಾಲುಗಳು!
2019 ಮಂಡ್ಯ ಲೋಕಸಭಾ ಕ್ಷೇತ್ರ 2023 ರಲ್ಲಿ ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯವನ್ನ ರೂಪಿಸಲು ಹೆಚ್ ಡಿ ಕುಮಾರಸ್ವಾಮಿ ಅವರು ಪಣ ತೊಟ್ಟಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪುತ್ರನನ್ನ ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುವುದೇ ಕುಮಾರಸ್ವಾಮಿ ಮುಂದಿರುವ ದೊಡ್ಡ ಸವಾಲಾಗಿದೆ.
ಲೋಕಸಭಾ ಚುನಾವಣೆಯಿಂದಾಗಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಾಗಿದ್ದು, ಮೈತ್ರಿಯಿಂದ ಮುಸ್ಲಿಂ ಸಮುದಾಯದ ನಾಯಕರು ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಮೈತ್ರಿಯಿಂದ ಮುಸ್ಲಿಂ ಸಮುದಾಯ ಕಡಗಣನೆ ಎಂಬ ಸಂದೇಶಕ್ಕೆ ಬ್ರೇಕ್ ಹಾಕಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮುಂದಾಗಿದ್ದು, ಮುಸ್ಲಿಂ ಸಮುದಾಯದ ನಾಯಕರನ್ನ ಓಲೈಸುವುದು ದಳಪತಿಗಳಿಗೆ ಸವಾಲಾಗಿದೆ.
ಇನ್ನೂ ಬಿಜೆಪಿ ಜೊತೆಗಿನ ಮೈತ್ರಿಯಿಂದಾಗಿ ಜೆಡಿಎಸ್ ನಾಯಕರು ಅಸಮಾಧಾನ ಹೊರಹಾಕಿದ್ದು, ಬಿಜೆಪಿ ನಾಯಕರ ಜೊತೆಗೆ ಹೊಂದಾಣಿಕೆ ಸಾಧಿಸುವುದು ದೊಡ್ಡ ಸವಾಲಾಗಿದೆ. ಮೈತ್ರಿ ಯಿಂದ ಸ್ಥಳೀಯ ಮಟ್ಟದಲ್ಲಿ ಎದುರಾಗುವ ಸಮಸ್ಯೆಗಳನ್ನ ಬಗೆಹರಿಸುವ ಕುರಿತು ದಳಪತಿಗಳು ಈಗಾಗಲೇ ಹಲವು ಸಭೆಗಳನ್ನ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಲೋಕಸಭಾ ಚುನಾವಣೆ ಅಸಮಾಧಾನಗೊಂಡ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದ್ದು, ಆಪರೇಷನ್ ಹಸ್ತಕ್ಕೆ ಒಳಗಾಗದಂತೆ ಶಾಸಕರನ್ನ ಹಿಡಿದಿಟ್ಟುಕೊಳ್ಳುವುದು ಸಹ ಕುಮಾರಸ್ವಾಮಿ ಅವರಿಗೆ ದೊಡ್ಡ ಸವಾಲಾಗಿದೆ.
ಹೆಚ್ ಡಿ ಕುಮಾರಸ್ವಾಮಿ ಮುಂದಿರುವ ಗುರಿಗಳು!
ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಜೆಡಿಎಸ್ ನ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿಯನ್ನ ನಡೆಸುತ್ತಿದ್ದಾರೆ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಿ ಬುದ್ಧಿ ಕಲಿಸಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹಲವು ತಂತ್ರಗಳನ್ನ ಹಾಕಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಠಕ್ಕರ್ ಕೊಡುವ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಕುಮಾರಸ್ವಾಮಿ ಅವರ ಪ್ರಮುಖ ಗುರಿಯಲ್ಲಿ ಒಂದಾಗಿದೆ. ಅಲ್ಲದೇ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ದಿನೇ ದಿನೇ ತನ್ನ ಪ್ರಬಲ್ಯವನ್ನ ಕಳೆದುಕೊಳ್ಳುತ್ತಿದೆ. ಹಳೇ ಮೈಸೂರು ಭಾಗ ಸೇರಿದಂತೆ ರಾಜ್ಯಾದ್ಯಂತ ಪಕ್ಷ ಸಂಘಟನೆ ನಡೆಸಲು ದಳಪತಿಗಳು ಯೋಜನೆಯನ್ನ ಸಿದ್ದಪಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ ಆರಂಭದಿಂದಲೂ ರಾಜ್ಯ ಸರ್ಕಾರದ ವಿರುದ್ದ ಹಲವು ದಾಖಲೆಗಳ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಕುಮಾರಸ್ವಾಮಿ ಹೊಸ ಹೊಸ ತಂತ್ರಗಾರಿಕೆಯನ್ನ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಹಲವು ದಾಖಲೆಗಳನ್ನ ಬಿಡುಗಡೆ ಮಾಡುವ ಮೂಲಕ ಸಿಎಂ ಹಾಗೂ ಡಿಸಿಎಂ ಟಾರ್ಗೆಟ್ ಮಾಡುವುದು. ಇನ್ನೂ ಮೈತ್ರಿಯಿಂದ ಸಿಗುವ ನಾಲ್ಕು ಕ್ಷೇತ್ರದಲ್ಲೂ ಗೆಲುವು ಸಾಧಿಸುವುದು ಕುಮಾರಸ್ವಾಮಿ ಅವರ ಗುರಿಗಳಲ್ಲಿ ಒಂದಾಗಿದೆ ಎನ್ನಲಾಗಿದೆ.












Click it and Unblock the Notifications