ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದಿರುವ ಸವಾಲುಗಳು!

By Gururaj
|
Google Oneindia Kannada News

Recommended Video

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕವಾದ ದಿನೇಶ್ ಗುಂಡೂರಾವ್ ಮುಂದಿದೆ ಈ ಸವಾಲುಗಳು

ಬೆಂಗಳೂರು, ಜುಲೈ 04 :ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರ ವಹಿಸಿಕೊಂಡಂದಿನಿಂದ ಕೆಪಿಸಿಸಿ ಪಟ್ಟಕ್ಕೆ ಯಾರು ಏರುತ್ತಾರೆ ಎಂಬ ಬಗ್ಗೆ ಭಾರೀ ಕುತೂಹಲ ಸೃಷ್ಟಿಯಾಗಿತ್ತು. ಅವರ್ನ ಬಿಟ್ ಇವ್ರು, ಇವರ್ನ ಬಿಟ್ ಅವ್ರು ಅಂತ ಕಡೆಗೂ 48 ವರ್ಷದ ರಾಜಕಾರಣಿ ದಿನೇಶ್ ಗುಂಡೂ ರಾವ್ ಅವರಿಗೆ ಮಹತ್ತರ ಜವಾಬ್ದಾರಿಯನ್ನು ಹೊರಿಸಿದ್ದಾರೆ.

ಸಾಕಷ್ಟು ಅಳೆದುತೂಗಿ, ಲೋಕಸಭೆ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು, ಜನಪ್ರಿಯತೆಯ ಮಾನದಂಡವನ್ನೂ ಪರಿಗಣಿಸಿ ದಿನೇಶ್ ಗುಂಡೂ ರಾವ್ ಅವರಿಗೆ ರಾಹುಲ್ ಗಾಂಧಿ ಅವರು ಜವಾಬ್ದಾರಿ ನೀಡಿದ್ದಾರೆ. ಇದರಿಂದ ಹಲವಾರು ಅಡೆತಡೆಗಳನ್ನು ದಿನೇಶ್ ಎದುರಿಸಿದರೂ ಅಚ್ಚರಿಯಿಲ್ಲ.

ಸುದೀರ್ಘ ಅವಧಿಯ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ರಾಜೀನಾಮೆಸುದೀರ್ಘ ಅವಧಿಯ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ರಾಜೀನಾಮೆ

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದಲ್ಲಿರುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದು. ಸಮ್ಮಿಶ್ರ ಸರ್ಕಾರವಿರುವ ರಾಜ್ಯದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಪ್ತರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಅಧಿಕೃತ ಪ್ರಕಟಣೆಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಅಧಿಕೃತ ಪ್ರಕಟಣೆ

2018ರ ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಕೆಪಿಸಿಸಿಗೆ ಸಾರಥಿ ಯಾರು? ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ನೂತನ ಅಧ್ಯಕ್ಷರ ಮುಂದಿರುವ ಪ್ರಮುಖ ಸವಾಲುಗಳು...

ಕಾಂಗ್ರೆಸ್ ಮಡಿಲಲ್ಲಿರುವ ಟೈಮ್ ಬಾಂಬ್ ಸ್ಫೋಟವಾದರೆ...!ಕಾಂಗ್ರೆಸ್ ಮಡಿಲಲ್ಲಿರುವ ಟೈಮ್ ಬಾಂಬ್ ಸ್ಫೋಟವಾದರೆ...!

ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ

ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಸಹ ಒಂದು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಸರ್ಕಾರವನ್ನು ರಚನೆ ಮಾಡಿವೆ. ಮೈತ್ರಿ ಸರ್ಕಾರದಲ್ಲಿ ಹಲವು ಅಸಮಾಧಾನಗಳು ಬರುತ್ತವೆ. ಅವುಗಳನ್ನು ನಿವಾರಿಸಿಕೊಂಡು ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯತೆ ಸಾಧಿಸುವ ಸವಾಲು ನೂತನ ಅಧ್ಯಕ್ಷರ ಮುಂದಿದೆ.

ಸಚಿವ ಸ್ಥಾನ ಹಂಚಿಕೆ, ನಿಗಮ ಮಂಡಳಿಗಳ ನೇಮಕ ಸೇರಿದಂತೆ ಹಲವು ವಿಚಾರಗಳಲ್ಲಿ ಎರಡೂ ಪಕ್ಷಗಳ ನಡುವೆ ಅಸಮಾಧಾನ ಉಂಟಾಗಬಹುದು. ಅವುಗಳನ್ನು ಸರಿದೂಗಿಸಿ, ಸಮ್ಮಿಶ್ರ ಸರ್ಕಾರ ಪತನವಾಗದಂತೆ ಕಾಪಾಡುವ ಹೊಣೆ ಕೆಪಿಸಿಸಿ ಅಧ್ಯಕ್ಷರ ಮೇಲಿದೆ.

ಪಕ್ಷ ಸಂಘಟನೆ ಮಾಡುವುದು

ಪಕ್ಷ ಸಂಘಟನೆ ಮಾಡುವುದು

2013ರ ಚುನಾವಣೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. 2018ರ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷರಾಗಿ ನೂತನವಾಗಿ ನೇಮಕವಾಗಿರುವ ದಿನೇಶ್ ಗುಂಡೂರಾವ್ ಅವರ ಮುಂದೆ ರಾಜ್ಯಾದ್ಯಂತ ಸಂಚಾರ ನಡೆಸಿ ಪಕ್ಷವನ್ನು ಸಂಘಟನೆ ಮಾಡುವ ಜವಾಬ್ದಾರಿ ಇದೆ.

ದಿನೇಶ್ ಗುಂಡೂರಾವ್ ಬೆಂಗಳೂರಿನವರು ಬೀದರ್‌ನಿಂದ ಚಾಮರಾಜನಗರದ ತನಕ ಸಂಚಾರ ನಡೆಸಿ ಪಕ್ಷವನ್ನು ಸಂಘಟನೆ ಮಾಡಬೇಕಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಸಂಘಟನೆಗೆ ಅವರು ಸಹಕಾರ ನೀಡಲಿದ್ದಾರೆ.

ಲೋಕಸಭೆ ಚುನಾವಣೆ

ಲೋಕಸಭೆ ಚುನಾವಣೆ

ಲೋಕಸಭೆ ಚುನಾವಣೆಗೆ ಸುಮಾರು 6 ತಿಂಗಳು ಇರುವಾಗ ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರುವ ಸವಾಲು ಅವರ ಮುಂದಿದೆ.

ಲೋಕಸಭೆ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ. ಸೀಟುಗಳ ಹಂಚಿಕೆ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಮುಂತಾದ ವಿಚಾರಗಳಲ್ಲಿ ದಿಟ್ಟ ನಿರ್ಧಾರವನ್ನು ತೆಗೆದುಕೊಂಡು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಸವಾಲು ದಿನೇಶ್ ಗುಂಡೂರಾವ್ ಮುಂದಿದೆ.

ಹಿರಿಯರ ಜೊತೆ ಸಮನ್ವಯ

ಹಿರಿಯರ ಜೊತೆ ಸಮನ್ವಯ

ಕಾಂಗ್ರೆಸ್‌ ಪಕ್ಷದಲ್ಲಿ ನಾಯಕರಿಗೆ ಕೊರತೆ ಇಲ್ಲ. ಹಲವಾರು ಹಿರಿಯ ನಾಯಕರು ಇನ್ನೂ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಇಂತಹ ಸಮಯದಲ್ಲಿ ಕಿರಿಯ ವಯಸ್ಸಿನ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆದ್ದರಿಂದ, ಹಿರಿಯ ನಾಯಕರ ಜೊತೆ ಸಮನ್ವಯ ಕಾಪಾಡಿಕೊಂಡು ಹೋಗಬೇಕಾದ ಸವಾಲು ನೂತನ ಅಧ್ಯಕ್ಷರ ಮುಂದಿದೆ.

English summary
Dinesh Gundu Rao appointed as president of Karnataka Pradesh Congress Committee (KPCC). Here is a list of challenges for him ahead of the 2019 Lok Sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X