ಸವಾಲಾದ ಟಿಕೆಟ್ ಹಂಚಿಕೆ: 40 ಕ್ಷೇತ್ರಗಳಲ್ಲಿ ಮೂಲ-ವಲಸೆ ಬಿಜೆಪಿಗರ ಪೈಪೋಟಿ

ಬೆಂಗಳೂರು ಏಪ್ರಿಲ್ 6: ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಹೋಗಿದೆ. ಆತಂರಿಕ ವಲಯದಲ್ಲಿ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ನಡುವೆ ಟಿಕೆಟ್ ಹಂಚಿಕೆ ವಿಚಾರವಾಗಿ ಭಾರೀ ಪೈಪೋಟಿ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಟಿಕೆಟ್ ಹಂಚಿಕೆ ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.

ಕನಿಷ್ಠ 40 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಾಗಿ ಪರಿಣಮಿಸಿರುವುದರಿಂದ ಬಿಜೆಪಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಘೋಷಣೆಗೆ ತಡ ಮಾಡುತ್ತಿದೆ ಎಂದೂ ಹೇಳಲಾಗುತ್ತಿದೆ. ಈ 40 ಸ್ಥಾನಗಳಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆಯು ಏಪ್ರಿಲ್ 20 ರವರೆಗೆ ಎಳೆಯುವ ಸಾಧ್ಯತೆಯಿದೆ. ಇದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

Challenging ticket distribution for BJP: Big plan in 40 constituencies

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಂತಹ ಉನ್ನತ ನಾಯಕರನ್ನು ಒಳಗೊಂಡ 22 ಸದಸ್ಯರ ಉನ್ನತ ಮಟ್ಟದ ಸಮಿತಿಯು ಬುಧವಾರ ತನ್ನ ಎರಡು ದಿನಗಳ ಸಭೆಯನ್ನು ಮುಕ್ತಾಯಗೊಳಿಸಿದ್ದು, 124 ಕ್ಷೇತ್ರಗಳಿಗೆ ತಲಾ 2-3 ಹೆಸರನ್ನು ಅಂತಿಮಗೊಳಿಸಿದೆ.

ಗುಬ್ಬಿ, ಬೈಲಹೊಂಗಲ, ಅಥಣಿ, ಕುಂದಗೋಳ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಮಾತ್ರವಲ್ಲದೆ ಆಯ್ಕೆಯಾಗದವರಿಂದ ಬಂಡಾಯದ ಭೀತಿ ಎದುರಾಗಿದೆ. ಮೂಲಗಳ ಪ್ರಕಾರ ಈ ವಾರಾಂತ್ಯಕ್ಕೆ ಬಿಜೆಪಿಯ ಮೊದಲ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ.

ಈ ವಾರಾಂತ್ಯಕ್ಕೆ ಬಿಜೆಪಿಯ ಮೊದಲ ಪಟ್ಟಿ

"ಅಥಣಿಯಂತಹ ಕೆಲವು ಸ್ಥಾನಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಹಾಲಿ ಶಾಸಕರು ಟಿಕೆಟ್ ಪಡೆಯುವ ಸಾಧ್ಯತೆಯಿದೆ. ಅಲ್ಲಿ ಶಾಸಕರು ಪಕ್ಷದ ಇನ್ನೊಬ್ಬ ಹಿರಿಯ ನಾಯಕರಿಂದ ತೀವ್ರ ಪೈಪೋಟಿ ಎದುರಿಸುತ್ತಿದ್ದಾರೆ. ಕುಮಟಹಳ್ಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಹಾಲಿ ಮಹೇಶ್ ನಡುವಿನ ಭಿನ್ನಾಭಿಪ್ರಾಯದಿಂದ ಅಭ್ಯರ್ಥಿ ಘೋಷಣೆ ತಡವಾಗಬಹುದು. ಜೊತೆಗೆ ಅಲ್ಲಿ ಪ್ರಕ್ರಿಯೆ ವಿಳಂಬವಾಗಬಹುದು" ಎಂದು ಮೂಲಗಳು ಹೇಳಿವೆ.

Challenging ticket distribution for BJP: Big plan in 40 constituencies

ಕೇಂದ್ರ ನಾಯಕತ್ವದ ನಿರ್ದೇಶನಕ್ಕೆ ಅನುಗುಣವಾಗಿ, ರಾಜ್ಯ ಬಿಜೆಪಿ ಘಟಕ ಪಕ್ಷವು ತನ್ನದೇ ಆದ ಶಾಸಕರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಕನಿಷ್ಠ ಇಬ್ಬರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಬೊಮ್ಮಾಯಿ ಕ್ಷೇತ್ರವಾದ ಶಿಗ್ಗಾಂವಿಯಲ್ಲೂ ಇಬ್ಬರ ಹೆಸರು ಶಿಫಾರಸು ಮಾಡಲಾಗಿದೆ.

ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಳ

ಪಕ್ಷದ ಹಿಡಿತದಲ್ಲಿರುವ ಭಾಗಗಳಲ್ಲಿ ಎರಡು ಹೆಸರುಗಳನ್ನು ಸೂಚಿಸುವ ಹಿಂದಿನ ಕಾರಣವೆಂದರೆ ಯಾವುದೇ ಹಾಲಿ ಶಾಸಕರು ಹೆಚ್ಚಿನ ಮಟ್ಟದ ಆಡಳಿತ ವಿರೋಧಿ ಸ್ಥಿತಿಯನ್ನು ಎದುರಿಸುವ ಸಾಧ್ಯತೆಯಿದೆ. ಅವರನ್ನು ಅಥವಾ ಅವಳನ್ನು ಬದಲಾಯಿಸುವ ಸಂದರ್ಭ ಬಂದರೆ ಅಂತವರು ಬಂಡಾಯ ಏಳಲು ಸಾಧ್ಯತೆ ಹೆಚ್ಚು. ಹೀಗಾಗಿ ಪಕ್ಷ ಪ್ರಬಲರನ್ನು ಹಾಗೂ ಅವರೊಂದಿಗಿರುವ ಮತಗಳನ್ನು ಕಳೆದುಕೊಳ್ಳಲು ಬಯಸುತ್ತಿಲ್ಲ. ಹೀಗಾಗಿ ಯಾವ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾದಲ್ಲಿ ಪಕ್ಷ ಅವರ ಮನವರಿಕೆಗೆ ಸಾರ್ಟ್ ಲಿಸ್ಟ್ ತಯಾರಿಸಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಗೆ ಸವಾಲಾದ ಟಿಕೆಟ್ ಹಂಚಿಕೆ

ಹಾಲಿ ಶಾಸಕರು ಕ್ಷೇತ್ರವನ್ನು ಬದಲಾಯಿಸಲು ಆಯ್ಕೆ ಮಾಡಿದರೆ, ಕೊನೆಯ ಕ್ಷಣದಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪಕ್ಷದಲ್ಲಿ ಪರ್ಯಾಯ ಹೆಸರು ಲಭ್ಯವಿರಬೇಕು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಹಾಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಎಸ್ ಎ ರವೀಂದ್ರನಾಥ್ ಅವರು ನಿವೃತ್ತಿ ಘೋಷಿಸಿರುವ ಅಭ್ಯರ್ಥಿಗಳ ಆಯ್ಕೆಗೆ ಪಕ್ಷವು ಸ್ವಲ್ಪ ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ.

Challenging ticket distribution for BJP: Big plan in 40 constituencies

ಶಾಸಕರಾದ ನೆಹರು ಓಲೇಕಾರ, ಮಾಡಾಳ್ ವಿರೂಪಾಕ್ಷಪ್ಪ ಮತ್ತು ಎಂಪಿ ಕುಮಾರಸ್ವಾಮಿ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಹಾವೇರಿ, ಚನ್ನಗಿರಿ ಮತ್ತು ಮೂಡಿಗೆರೆ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಾಗಿದೆ. "ಈ ಕ್ಷೇತ್ರಗಳಿಂದ ಹೆಚ್ಚಿನ ಸಂಖ್ಯೆಯ ಹೊಸ ಆಕಾಂಕ್ಷಿಗಳು ಟಿಕೆಟ್‌ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ವಿಳಂಬವಾಗಬಹುದು" ಎಂದು ಮೂಲಗಳು ತಿಳಿಸಿವೆ.

ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+