ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ, ಚಾಮರಾಜನಗರ ಸಂಸದರ ಕೊನೆಯುಸಿರು

ಶ್ರೀನಿವಾಸ್ ಪ್ರಸಾದ್ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು, ಹೀಗಾಗಿ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನೀಡಲಾಗುತ್ತಿತ್ತು. ಆದರೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ತೀವ್ರ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ ಎಂಬ ಸುದ್ದಿ ಆಘಾತ ಸೃಷ್ಟಿಸಿದೆ.

Chamarajanagar MP Srinivasa Prasad Is No More

ಏಪ್ರಿಲ್ 22 ರಂದು ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯ ಖಾಸಗಿ ಆಸ್ಪತ್ರೆಗೆ ಶ್ರೀನಿವಾಸ್ ಪ್ರಸಾದ್ ಅವರನ್ನು ದಾಖಲು ಮಾಡಲಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಮೂತ್ರಕೋಶ ಸಂಬಂಧಿ ಸಮಸ್ಯೆಗೆ ಸಿಲುಕಿದ್ದ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೇ ಕಾರಣಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಎನ್ನಲಾಗಿದೆ. ಆದರೆ ರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತ ಎದುರಾದ ಹಿನ್ನೆಲೆ ಕೊನೆಯುಸಿರು ಎಳೆದಿದ್ದಾರೆ. ಇನ್ನು ಈ ವಿಚಾರವನ್ನು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಚಾಮರಾಜನಗರ ಟಿಕೆಟ್ ಸಿಕ್ಕಿರಲಿಲ್ಲ

ಹಾಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್ ಸಿಕ್ಕಿರಲಿಲ್ಲ. ಹೀಗೆ ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಅಲ್ಲದೆ, ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಅವರ ಭೇಟಿ ಕುತೂಹಲ ಕೆರಳಿಸಿತ್ತು. ಆದರೆ ಈಗ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆ ಅವರ ಬೆಂಬಲಿಗರಿಗೆ ಆಘಾತ ನೀಡಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ಹಾಗೂ ರಾಜ್ಯ ರಾಜಕೀಯಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ಕೊಟ್ಟ ಕೊಡುಗೆ ನೆನಪು ಮಾಡಿಕೊಂಡು, ಗಣ್ಯರು ಕಂಬನಿ ಮಿಡಿದಿದ್ದಾರೆ.

ಮೈಸೂರಿನಲ್ಲಿ ಅಂತಿಮ ದರ್ಶನ

ಇನ್ನು ಇದೀಗ ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ಶ್ರೀನಿವಾಸ್ ಪ್ರಸಾದ್ ಪಾರ್ಥಿವ ಶರೀರ ರವಾನೆ ಮಾಡಲಾಗಿದೆ. ಇಂದು ಮೈಸೂರಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ, ಎಂಬ ಮಾಹಿತಿಯನ್ನ ನೀಡಲಾಗಿದೆ. ಶ್ರೀನಿವಾಸ್ ಪ್ರಸಾದ್‌ರ ಪಾರ್ಥಿವ ಶರೀರವನ್ನ ಈಗಾಗಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಮೈಸೂರಿಗೆ ಅಂಬ್ಯುಲೆನ್ಸ್ ಮೂಲಕ‌ ಕಳುಹಿಸಲಾಗಿದ್ದು. ಅಂತಿಮ ದರ್ಶನಕ್ಕೆ ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ಬರುವ ನಿರೀಕ್ಷೆ ಇದೆ. ಹೀಗಾಗಿ ಭದ್ರತೆ ಕೈಗೊಳ್ಳಲಾಗಿದ್ದು, ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+