ಚಾಮರಾಜನಗರ : ವಾಕಿಂಗ್ ಹೊರಟವರಿಗೆ ಸಾವು ತಂದ ವಾಹನ

By: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
Subscribe to Oneindia Kannada

ಚಾಮರಾಜನಗರ, ಜುಲೈ 14 : ವಾಕಿಂಗ್ ಹೋಗುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತಪಟ್ಟವರನ್ನು ಅಂಕಶೆಟ್ಟಿಪುರ ಗ್ರಾಮದ ಸಂಪತ್, ಶಿವಮಲ್ಲಚಾರಿ ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಪ್ರಮೀಳಾ, ನಾಗಮ್ಮ ಅವರು ತೀವ್ರವಾಗಿ ಗಾಯಗೊಂಡಿದ್ದು, ಪ್ರಮೀಳಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದುಕೊಂಡು ಹೋಗಲಾಗಿದೆ. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

Chamarajanagar : Pedestrian killed in road accident

ಪ್ರತಿನಿತ್ಯದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ವಾಕಿಂಗ್ ಹೋಗುವಾಗ ಅಪರಿಚಿತ ವಾಹನ ಬಂದು ಡಿಕ್ಕಿ ಹೊಡೆದಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನದ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ. [ವೀಲಿಂಗ್ ಮಾಡಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳು]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two pedestrian killed in road accident when an unidentified vehicle hit them on Firday, July 15 morning at Chamarajanagar.
Please Wait while comments are loading...