ಚಾಮರಾಜನಗರ : ಹೊಂಗನೂರು ಗಲಭೆ, ಎಸ್‍ಐ ತಲೆದಂಡ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಚಾಮರಾಜನಗರ, ಮೇ 10 : ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್ ಚಿಕ್ಕರಾಜಶೆಟ್ಟಿ ಅವರನ್ನು ಅಮಾನತು ಮಾಡಲಾಗಿದೆ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ, ಹಿಂಸಾಚಾರ ನಡೆಸಿತ್ತು.

ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ವಿಫಲರಾದ ಕಾರಣ ರಾಮಸಮುದ್ರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಚಿಕ್ಕರಾಜಶೆಟ್ಟಿ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್.ಜೈನ್ ಅವರು ಚಿಕ್ಕರಾಜಶೆಟ್ಟಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. [ಅಂಬೇಡ್ಕರ್ ಗೆ ಅಪಮಾನ, ಹೊಂಗನೂರು ಉದ್ವಿಗ್ನ]

cikkaraja shetty

ಹೊಂಗನೂರು ಗ್ರಾಮದಲ್ಲಿನ ಬಸ್ ನಿಲ್ದಾಣದಲ್ಲಿ ಹಾಕಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದರು. ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದನ್ನು ಖಂಡಿಸಿ ಏ.28ರಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. [ಅಷ್ಟೊಂದು ಅವಮಾನವಾಗದಿದ್ದರೆ ಅಂಬೇಡ್ಕರ್ ಹುಟ್ಟುತ್ತಿದ್ದರೆ?]

ಈ ಪ್ರತಿಭಟನೆ ವೇಳೆ ಎರಡು ಕೋಮಿನ ನಡುವೆ ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿದ್ದರು. ಸುಮಾರು 20 ಅಂಗಡಿಗಳು ಬೆಂಕಿಗಾಹುತಿಯಾಗಿದ್ದವು. ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗಿತ್ತು. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾದ ಕಾರಣ ಸಬ್‌ ಇನ್ಸ್‌ಪೆಕ್ಟರ್ ಅಮಾನತು ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Chamarajanagar Superintendent of Police Kuldeep Kumar R Jain has suspended Sub-Inspector of Police of Ramasamudra police station Who fail to control the situation in the time of group clash at Honganuru village.
Please Wait while comments are loading...