ಸಿದ್ದರಾಮಯ್ಯ ಸರ್ಕಾರಕ್ಕೆ ಎದುರಾಯ್ತಾ ಸಂಕಷ್ಟ: ಬಿ ನಾಗೇಂದ್ರಗೆ ನ್ಯಾಯಾಂಗ ಬಂಧನ
ಬೆಂಗಳೂರು, ಜುಲೈ 22: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಮಾಜಿ ಸಚಿವ ನಾಗೇಂದ್ರ ಅವರನ್ನು ಕಸ್ಟಡಿಗೆ ಪಡೆದಿತ್ತು.

ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು(ಜುಲೈ 22) ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಬಿ.ನಾಗೇಂದ್ರ ಅವರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲು ಪಾಲಾಗಲಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ?
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ನಾಗೇಂದ್ರ ಅವರು ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಪ್ರಕರಣದಿಂದ ಸರ್ಕಾರಕ್ಕೆ ತೀವ್ರ ಮುಜುಗರವನ್ನ ಉಂಟು ಮಾಡಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು.
ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್‌ಐಟಿ ಬಂಧಿಸಿದೆ.
SIT ಇದುವರೆಗೆ ಮುಟ್ಟು ಗೋಲು ಹಾಕಿಕೊಂಡಿರುವ ಮೊತ್ತ
1 14/2024 8,21,62,600 ಸತ್ಯನಾರಾಯಣ ವರ್ಮಾ
2 16/2024 3,62,47,200 ಪದ್ಮನಾಭ ಜೆ.ಜಿ.
3 17/2024 30,00,000 ಪದ್ಮನಾಭ ಜೆ.ಜಿ.
4 18/2024 1,49,65,200 ನಾಗೇಶ್ವರ ರಾವ್
5- 20/2024 30,00,000 ಚಂದ್ರಮೋಹನ್
6- 26/2024 12,50,000 ಜಿ.ಕೆ. ಜಗದೀಶ್
7- 27/2024 3,10,000 ಸತ್ಯನಾರಾಯಣ ವರ್ಮಾ
8 -28/2024 24,00,000 ಸತ್ಯನಾರಾಯಣ ವರ್ಮಾ
ಒಟ್ಟು ನಗದು 14,33,35,000
9 -207 ಗ್ರಾಂ ಚಿನ್ನ 13,50,000 ಚಂದ್ರಮೋಹನ್
10- 47.6 ಗ್ರಾಂ ಚಿನ್ನ 3,09,400 ಜಿ.ಕೆ. ಜಗದೀಶ್












Click it and Unblock the Notifications