ಚಂದ್ರಯಾನ 3: 'ಶಿವಶಕ್ತಿ' ನಾಮಕರಣ ಇದು ವಿಜ್ಞಾನ-ಆಧ್ಯಾತ್ಮದ ಸಮ್ಮಿಲನ: ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 27: ಚಂದ್ರನ ಅಂಗಳದಲ್ಲಿ ಸೆಟಲೈಟ್ ಸ್ಪರ್ಶ ಮಾಡಿದ ಸ್ಥಳಕ್ಕೆ ಶಿವಶಕ್ತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಮಕರಣ ಮಾಡುವ ಮೂಲಕ ವಿಜ್ಞಾನ ಮತ್ತು ಆಧ್ಯಾತ್ಮವನ್ನು ಒಗ್ಗೂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಭಾನುವಾರ ಶೋಭಾ ನಾಗಸಂದ್ರ ಅಪಾರ್ಟ್‌ಮೆಂಟ್ ವೆಲ್ ಫೇರ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಂದ್ರಯಾನ 3 ಯಶಸ್ವಿ ಉಡಾವಣೆಗೆ ಕಾರಣರಾದ ವಿಜ್ಞಾನಿಗಳಿಗೆ ಸನ್ಮಾನ ಮಾಡಿ ಅವರು ಮಾತನಾಡಿದರು.

ಇಸ್ರೊ ವಿಜ್ಞಾನಿಗಳ ನಿರಂತರ ದಣಿವಿಲ್ಲದ ಶ್ರಮದ ಫಲವಾಗಿ ಭಾರತ ವಿಶ್ವ ಮಟ್ಟದಲ್ಲಿ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವಂತಾಗಿದೆ. ಕರ್ನಾಟಕ ವಿಜ್ಞಾನ, ತಂತ್ರಜ್ಞಾನ ಕೃಷಿ ಸೇರಿದಂತೆ ಎಲ್ಲ ರಂಗಗಳಲ್ಲೂ ಮುಂಚೂಣಿಯಲ್ಲಿದ್ದು, ನಮ್ಮ ಸರ್ಕಾರ ಅಗತ್ಯ ನೆರವು ನೀಡಿತ್ತು ಎಂದು ಹೇಳಿದರು.
ಪ್ರಧಾನಿ ದೂರದೃಷ್ಟಿಯಿಂದ ಸಂಶೋಧನೆಗೆ ಒತ್ತು
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿಯ ನಾಯಕತ್ವ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮನ್ವಯತೆಯಿಂದ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ದೊರೆಯುವಂತಾಯಿತು ಎಂದರು.
ಇಸ್ರೋ ವಿಜ್ಞಾನಿಗಳ ಒಗ್ಗಟ್ಟಿನ ಶ್ರಮದ ಫಲವಾಗಿ ಚಂದ್ರಯಾನ 3 ಯಶಸ್ವಿಯಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಘನತೆ ಹೆಚ್ಚಾಗುವಂತೆ ಮಾಡಿದ್ದಲ್ಲದೇ ವಿಜ್ಞಾನ ಮತ್ತು ಆಧ್ಯಾತ್ಮವನ್ನೂ ಬೆಸೆಯುವಂತೆ ಮಾಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಮನೀಷ್ ಚಾವ್ಲ, ಶ್ರೀಮತಿ ಕಲ್ಪನಾ ಅರವಿಂದ್, ಆಕಾಂಕ್ಷ ಭಾರದ್ವಾಜ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಾಸರಹಳ್ಳಿ ಶಾಸಕ ಮುನಿರಾಜು, ಶುಭ ನಾಗಸಂದ್ರ ಅಪಾರ್ಟ್ಮೆಂಟ್ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ ಹಾಗು ಮತ್ತಿತರರು ಪಾಲ್ಗೊಂಡಿದ್ದರು.
ಅಪಾರ್ಟ್‌ಮೆಂಟ್‌ನಲ್ಲಿ ರಕ್ಷಾ ಬಂಧನ ಉತ್ಸವ
ಇನ್ನೂ ಇದೇ ಶೋಭಾ ಅಪಾರ್ಟ್‌ಮೆಂಟ್ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಇಂದು ಬೆಂಗಳೂರಿನ ನಾಗಸಂದ್ರದ ಶೋಭಾ ಅಪಾರ್ಟ್ಮೆಂಟ್ ನಲ್ಲಿ ನಡೆದ "ರಕ್ಷಾಬಂಧನದ ಉತ್ಸವ" ದಲ್ಲಿ ಭಾಗವಹಿಸಿ, ನಮ್ಮ ರಾಷ್ಟ್ರೀಯತೆ ಹಾಗೂ ನಮ್ಮ ಸಂಸ್ಕೃತಿಗಳ ರಕ್ಷಣೆಗಾಗಿ ಪರಸ್ಪರ ರಕ್ಷಾಗಳನ್ನು ಕಟ್ಟಲಾಯಿತು.












Click it and Unblock the Notifications