ಚಂದ್ರಯಾನ 3 ಯಶಸ್ವಿ: ಇಸ್ರೋ ಸಂಸ್ಥೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಬೆಂಗಳೂರು ಆಗಸ್ಟ್ 23: ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
"ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ ಶ್ರಮಿಸಿದ ಇಸ್ರೋ ಸಂಸ್ಥೆಗೆ ಶುಭಾಶಯಗಳು. ಇಸ್ರೋ ಸಂಸ್ಥೆ ಈವರೆಗೂ ಮೂರು ಚಂದ್ರಯಾನ ಯೋಜನೆ ಯಶಸ್ವಿಗೊಳಿಸಿರುವುದು ದೊಡ್ಡ ಸಾಧನೆಯೇ ಸರಿ. ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 3 ಯಶಸ್ವಿಯಾಗಿರುವುದು ಇಡೀ ದೇಶವೇ ಹೆಮ್ಮೆಪಡುವ ವಿಚಾರ. ಈ ಯೋಜನೆ ಯಶಸ್ಸಿನ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದೆ'' ಎಂದು ಶಿವಕುಮಾರ್ ಅವರು ಕೊಂಡಾಡಿದ್ದಾರೆ.

1960ರ ದಶಕದಲ್ಲೇ ದೇಶದ ರಾಕೆಟ್ ಮ್ಯಾನ್ ವಿಕ್ರಂ ಸಾರಾಭಾಯಿ, ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ದೂರದೃಷ್ಟಿ ಇಸ್ರೋ ಸಂಸ್ಥೆಗೆ ಬುನಾದಿ ಹಾಕಿತ್ತು. ಅಂದು ಅವರು ಬಿತ್ತಿದ ಬೀಜ ಇದು ವಿಶ್ವದಲ್ಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆದಿದೆ" ಎಂದು ಶಿವಕುಮಾರ್ ಅವರು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.
Watching #Chandrayaan3 making a soft but historical landing on moon's South Pole will forever be etched in my memory!
— DK Shivakumar (@DKShivakumar) August 23, 2023
This spectacular achievement has been made possible by the incredible hardwork of our brilliant scientists, engineers and technicians at @ISRO!
Our beloved… pic.twitter.com/VycvttzkeZ
ಈ ಕುರಿತು ಮುಖ್ಯಮಂತ್ರಿಗಳ ಪ್ರತಿಕ್ರಿಯೆ...
ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ ಎಂದರು.
ಬಾಹ್ಯಾಕಾಶ ವಿಜ್ಞಾನಕ್ಕೆ ಪ್ರಾರಂಭದ ದಿನಗಳಲ್ಲಿಯೇ ಬೆಂಬಲ ಮತ್ತು ನೆರವನ್ನು ನೀಡಿದ್ದ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ ಎಂದರು.
ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡೆ.@isro ವಿಜ್ಞಾನಿಗಳ ದಶಕಗಳ ಪರಿಶ್ರಮವು ನನ್ನಂತ ಕೋಟ್ಯಂತರ ಭಾರತೀಯರ ಕನಸನ್ನು ನನಸಾಗಿಸಿದೆ.
— Siddaramaiah (@siddaramaiah) August 23, 2023
ಚಂದ್ರನ ಮೇಲೆ ಭಾರತದ ಪತಾಕೆ ಹಾರಿಸಿ ದೇಶವಾಸಿಗಳು ಹೆಮ್ಮೆಪಡುವಂತೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ… pic.twitter.com/Gz4EAdUTvS
ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಪೂರ್ವವಾದ ಸಾಧನೆ ಮಾಡಿದೆ. ಭಾರತೀಯರೆಲ್ಲರಿಗೂ ಇದು ಹೆಮ್ಮೆಯ ಕ್ಷಣ. ಈ ಅಸಾಧಾರಣ ಸಾಧನೆ ಮಾಡಿದ ಪ್ರತಿಯೊಬ್ಬ ವಿಜ್ಞಾನಿಗಳಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಜಗತ್ತಿನ ಮುಂಚೂಣಿ ದೇಶಗಳ ಸಾಲಿನಲ್ಲಿ ಮತ್ತೊಮ್ಮೆ ನಿಚ್ಚಳವಾಗಿ ಪ್ರಕಾಶಿಸಿದೆ. ಇಸ್ರೋ ಸಂಸ್ಥೆಯ ಮುಂದಿನ ದಿನಗಳ ಎಲ್ಲಾ ಪ್ರಯತ್ನಗಳಿಗೂ ಶುಭ ಹಾರೈಸುತ್ತೇನೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications