SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಮುದ್ರಣದಲ್ಲಿ ಬದಲಾವಣೆ, ಏನದು? ತಿಳಿಯಿರಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ವಾರವೇ ಘೋಷಿಸಿದಂತೆ ಪ್ರಸಕ್ತ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಿಗದಿಯಂತೆ ಫೆ. 23ರಿಂದಲೇ ನಡೆಯಲಿವೆ. ಆದರೆ ಚಿಕ್ಕ ಬದಲಾವಣೆ ಆಗಿದೆ.
ಬೆಂಗಳೂರು, ಫೆಬ್ರವರಿ 13: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ವಾರವೇ ಘೋಷಿಸಿದಂತೆ ಪ್ರಸಕ್ತ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಿಗದಿಯಂತೆ ಫೆ. 23ರಿಂದಲೇ ನಡೆಯಲಿವೆ. ಆದರೆ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.
ಹೌದು, ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ (SSLC ) ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಿ ಮುಂದಿನ ತಿಂಗಳು ಮಾರ್ಚ್ 1 ರಂದು ಕೊನೆಗೊಳ್ಳಲಿವೆ. ಈ ನಡುವೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಶ್ನೆ ಪತ್ರಿಕೆ ತಯಾರಿಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದೆ.
ಈ ಸಂಬಂಧ ಇಲಾಖೆ ಸಚಿವ ಬಿ.ಸಿ ನಾಗೇಶ್ ಅವರು ಸೋಮವಾರ ಹೊರಡಿಸಿದ ಟಿಪ್ಪಣಿಯ ಪ್ರಕಾರ, ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಿಂದ ಸಿದ್ಧಪಡಿಸಲಾಗುತ್ತಿತ್ತು. ಆದರೆ 2022-23ನೇ ಸಾಲಿನ ಪ್ರಶ್ನೆ ಪತ್ರಿಕೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದ ಬದಲಾಗಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ಹಂತದಲ್ಲಿ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿಯೇ ಪ್ರಶ್ನೆ ಪತ್ರಿಕೆಗಳು ಸಿದ್ಧಗೊಳ್ಳಲಿವೆ ಎಂದು ತಿಳಿಸಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಕಳುಹಿಸಲು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆ ಮುದ್ರಿಸಿ, ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಅಷ್ಟೇ ಅಲ್ಲದೇ ಪರೀಕ್ಷೆ ಸಂಬಂಧ ಪ್ರತಿ ವಿದ್ಯಾರ್ಥಿಯಿಂದ 60/- ರೂಪಾಯಿ ಬದಲು ಕೇವಲ 50/-ರೂಪಾಯಿ ಸಂಗ್ರಹಿಸಲಾಗುವುದು ಎಂದು ಟಿಪ್ಪಣ್ಣಿಯಲ್ಲಿ ಉಲ್ಲೇಖಿಸಲಾಗಿದೆ.
SSLC ಪೂರ್ವ ಸಿದ್ಧತಾ ಪರೀಕ್ಷೆ ದಿನಾಂಕ ಹೀಗಿವೆ
2023 ಫೆಬ್ರವರಿ 23 -ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.

2023 ಫೆಬ್ರವರಿ 24 - ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ.
2023 ಫೆಬ್ರವರಿ 25 - ತೃತೀಯ ಭಾಷೆ- ಹಿಂದಿ, ಕನ್ನಡ, ಕೊಂಕಣಿ, ಅರೇಬಿಕ್, ಇಂಗ್ಲಿಷ್, ತುಳು, ಪರ್ಷಿಯನ್, ಉರ್ದು, ಸಂಸ್ಕೃತ.
2023 ಫೆಬ್ರವರಿ 26 - ಭಾನುವಾರ ರಜೆ ಅಂದು ಪರೀಕ್ಷೆ ಇಲ್ಲ.
2023 ಫೆಬ್ರವರಿ 27 - ಗಣಿತ.
2023 ಫೆಬ್ರವರಿ 28 - ವಿಜ್ಞಾನ.
2023 ಮಾರ್ಚ 1- ಸಮಾಜ.












Click it and Unblock the Notifications