ಲಂಚ ಪ್ರಕರಣ; ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ ಆಗ್ರಹ

ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಬೆಂಗಳೂರು,ಮಾರ್ಚ್ 4: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ ಹೆಚ್ಚಾಗಿದ್ದು, ಈಗಾಗಲೇ 40% ಕಮಿಷನ್ ಆರೋಪ ಹೊತ್ತಿರುವ ಬಿಜೆಪಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಬಿಜೆಪಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪ್ರಶಾಂತ್ ಮಾಡಾಳ್ ಅವರನ್ನ ಬಂಧಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಶನಿವಾರ ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Channagiri Mlas Son Bribery Case Siddaramaiah Demands Resignation Of Cm Basavaraj Bommai

ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್‌ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್‌ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು.

ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್‌ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್‌ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದಿ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ?

Channagiri Mlas Son Bribery Case Siddaramaiah Demands Resignation Of Cm Basavaraj Bommai

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ. ಬೊಮ್ಮಾಯಿಗೆ ಮಾನ ಮರ್ಯಾದಿ ಇದ್ದರೆ ಮಾಡಾಳ್‌ ವಿರೂಪಾಕ್ಷಪ್ಪನನ್ನು ಈ ಕೂಡಲೇ ಬಂಧಿಸಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಿಮ್ಮ ಭ್ರಷ್ಟಾಚಾರಕ್ಕೆ ಇದಕ್ಕಿಂತ ದಾಖಲೆ ಬೇರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ.

8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್‌ ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್‌ ಮಾಡಿದ್ದಾರೆ. ನನ್ನ ಪ್ರಕಾರ ಬೊಮ್ಮಾಯಿ ಈಗಾಗಲೇ ರಾಜೀನಾಮೆ ಕೊಟ್ಟುಬಿಡಬೇಕಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್‌ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕ ನಾವು? ದೇಶದ ದುರಂತ ನೋಡ್ರೀ ಎಂದು ಕಿಡಿಕಾರಿದರು.

Channagiri Mlas Son Bribery Case Siddaramaiah Demands Resignation Of Cm Basavaraj Bommai

"ಸಾಕಪ್ಪ ಸಾಕು 40% ಸರ್ಕಾರ" ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್‌ ಹಗರಣದ ಬಗ್ಗೆ ಮಾತನಾಡಿ ಸರ್‌ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ.

ಅದಕ್ಕೆ ನಿನ್ನೆ ಬೆಳಗಾವಿಯಲ್ಲಿ ಕೂಡಲೇ ಚುನಾವಣೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದೆ, ಚುನಾವಣಾ ನೀತಿ ಸಂಹಿತೆ ಘೋಷಣೆ ಆದರೆ ಇವರು ಲಂಚ ಹೊಡೆಯುವುದಾದರೂ ನಿಲ್ಲುತ್ತೆ, ಗುತ್ತಿಗೆದಾರರ ಸುಲಿಗೆ ನಿಲ್ಲುತ್ತೆ. ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊನೆಯ 6 ತಿಂಗಳಿಂದ ಟೆಂಡರ್‌ ನೀಡಿರುವ ಕಾಮಗಾರಿಗಳನ್ನು ಪುನರ್‌ ಪರಿಶೀಲನೆಗೆ ಒಳಪಡಿಸುತ್ತೇವೆ. ಯಾವುದೇ ಗುತ್ತಿಗೆದಾರರು ಈಗ ಲಂಚ ನೀಡಿ ಗುತ್ತಿಗೆ ಕೆಲಸ ಹಿಡಿಯಬೇಡಿ, ಕಾರಣ ನಾವು ಬಂದ ಮೇಲೆ ಆ ಎಲ್ಲಾ ಕಾಮಗಾರಿಗಳನ್ನು ರದ್ದು ಮಾಡುತ್ತೇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+