ಲೋಕಸಭಾ ಚುನಾವಣೆ ಹೊತ್ತಲಿ ಕಮಲ-ದಳ ನಾಯಕರಿಗೆ ಬಿಗ್ ಶಾಕ್: ಹಲವರು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಫೆಬ್ರವರಿ 26: ಲೋಕಸಭಾ ಚುಣಾವಣೆಗೆ ಭರ್ಜರಿ ತಯಾರಿ ನಡೆಸಿದ್ದ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ. ಚನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುವ ಮೂಲಕ ಸ್ಥಳೀಯ ನಾಯಕರಿಗೆ ಶಾನ್ ನೀಡಿದೆ.
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷದ ಶಾಲು ಹಾಕುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅನ್ಯ ಪಕ್ಷದ ನಾಯಕರನ್ನ ಬಿರ ಮಾಡಿಕೊಂಡರು. ಎರಡೂ ಪಕ್ಷದ ಕಾರ್ಯಕರ್ತರ ಜತೆ ಚರ್ಚೆ ಮಾಡದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ಅವರು ನೆಂಟಸ್ಥನ ಬೆಳೆಸಿದ್ದಾರೆ. ಇದರಿಂದ ಉಭಯ ಪಕ್ಷಗಳ ಕಾರ್ಯಕರ್ತರು ವಿರೋಧ ವ್ಯಕ್ತ ಪಡಿಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಹೇಳಿದರು೨.

ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯಾದ್ಯಂತ ಈ ಮೈತ್ರಿಯಿಂದ ಬೇಸತ್ತಿರುವ ಎಲ್ಲಾ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಬರಲು ನಾನು ಮುಕ್ತ ಆಹ್ವಾನ ನೀಡುತ್ತಿದ್ದೇನೆ. ಈ ಕಾರ್ಯಕ್ರಮ ಕೇವಲ ಆರಂಭ. ನೀವೆಲ್ಲರೂ ಸ್ಥಳೀಯ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದವರನ್ನು ಸೇರಿಸಿಕೊಳ್ಳಬೇಕು. ಚನ್ನಪಟ್ಟಣದ ಮತದಾರರು ಯಾವುದೇ ರೀತಿಯ ತೀರ್ಮಾನ ಮಾಡಬಹುದು.
ಯಾರೇ ಒಂದಾದರೂ ಅವರನ್ನು ಧಿಕ್ಕರಿಸಿ ಮತದಾನ ಮಾಡಲು ಆ ಕ್ಷೇತ್ರದ ಜನ ಸಿದ್ಧರಿದ್ದಾರೆ. ಈ ಹಿಂದೆ ಸುರೇಶ್ ಅವರು ಮೊದಲ ಬಾರಿಗೆ ಸಂಸತ್ ಚುನಾವಣೆಗೆ ಸ್ಪರ್ಧಿಸಿದಾಗ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿತ್ತು. ಆಗಲೂ ಈ ಜನ ಅವರ ಮೈತ್ರಿ ಧಿಕ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಸುರೇಶ್ ಅವರನ್ನು 1.31 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದ್ದರು.
ನಮ್ಮ ಜಿಲ್ಲೆಯ ಜನ ಬಹಳ ವಿದ್ಯಾವಂತ, ಬುದ್ಧಿವಂತ ಹಾಗೂ ಪ್ರಜ್ಞಾವಂತರಿದ್ದಾರೆ. ನೀವೆಲ್ಲರೂ ಅವರ ಮನೆ ಬಾಗಿಲಿಗೆ ಹೋಗಿ ಮತ ಕೇಳಬೇಕು. ನಾನು ಇಲ್ಲಿಗೆ ಬರುವ ಮುನ್ನ ಬಿಡದಿಯಲ್ಲಿ ಹೋಬಳಿ ಮಟ್ಟದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿದ್ದೆ. ಈ ಕಾರ್ಯಕ್ರಮದಲ್ಲಿ 30 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಬಿಜೆಪಿ ನಾಯಕರು ನಮ್ಮ ಗ್ಯಾರಂಟಿ ಯೋಜನೆಗಳನ್ನು 420 ಗ್ಯಾರಂಟಿ, ಡುಪ್ಲಿಕೇಟ್ ಗ್ಯಾರಂಟಿ ಎಂದು ಟೀಕೆ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಶೇ.92 ರಷ್ಟು ಜನ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ.
ನಾವು ಜನರಿಗೆ ಕರೆ ಮಾಡಿದಾಗ ಜನರು, ನಿಮ್ಮ ಯೋಜನೆಗಳಿಂದ ನಮಗೆ ಪ್ರತಿ ತಿಂಗಳು ಸುಮಾರು 5 ಸಾವಿರದಷ್ಟು ಸಹಾಯವಾಗುತ್ತದೆ. ಹೀಗಾಗಿ ನಾವು ನಿಮ್ಮ ಋಣ ತೀರಿಸುತ್ತೇವೆ ಎಂದು ಹೇಳುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವ ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದಲ್ಲಿ ಈ ಗ್ಯಾರಂಟಿ ಯೋಜನೆ ತೆಗೆದುಕೊಳ್ಳಬೇಡಿ ಎಂದು ತಮ್ಮ ಕಾರ್ಯಕರ್ತರಿಗೆ ಹೇಳಲಿ ನೋಡೋಣ. ಅವರಿಗೆ ಧೈರ್ಯ ಇದ್ದರೆ, ಅವರ ಪಕ್ಷಕ್ಕೆ ಸ್ವಾಭಿಮಾನ ಇದ್ದರೆ ಈ ರೀತಿ ಹೇಳಲಿ. ಈ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ.
ಕುಮಾರಸ್ವಾಮಿ ಹಾಗೂ ಯೋಗೇಶ್ವರ್ ಮನೆಯಲ್ಲಿ ಕೆಲಸ ಮಾಡುವ ಜನರು ನಮ್ಮ ಯೋಜನೆಯನ್ನು ಬೇಡ ಎನ್ನುವುದಿಲ್ಲ. ಇತ್ತೀಚೆಗೆ ಬೆಳಗಾವಿಯಲ್ಲಿ ಮಹಿಳೆಯೊಬ್ಬಳು ಮಗನನ್ನು ಕಳೆದುಕೊಂಡು ಆತನ ಚಿತೆ ಮುಂದೆ ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ನನಗೆ ಆಸರೆಯಾಗಲಿದೆ ಎಂದು ಹೇಳಿದ್ದಾರೆ. ಇದು ನಮ್ಮ ಯೋಜನೆಗಳಿಂದ ಸಮಾಜದಲ್ಲಿ ಆಗಿರುವ ಬದಲಾವಣೆ ಎಂದು ಹೇಳಿದರುದ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಇಂತಹ ಯಾವುದಾದರೂ ಒಂದು ಕಾರ್ಯಕ್ರಮ ನೀಡಿದ್ದಾರಾ? ಬಿಜೆಪಿಯವರು ಇತ್ತೀಚೆಗೆ ಮಂತ್ರಾಕ್ಷತೆ ಹಂಚುತ್ತಿದ್ದರು. ಮಂತ್ರಾಕ್ಷತೆಯನ್ನು ದೇವಾಲಯ ದಲ್ಲಿ ಎಲ್ಲಾ ಪ್ರತಿಷ್ಠಾಪನೆ ಆದ ನಂತರ. ನೀವು ಮದುವೆಯಲ್ಲಿ ತಾಳಿ ಕಟ್ಟುವಾಗ ಮಂತ್ರಾಕ್ಷತೆ ಹಾಕುತ್ತೀರಿ ಅಲ್ಲವೇ. ಆದರೆ ಅಯೋಧ್ಯೆಯಲ್ಲಿ ಮಂದಿರ ಉದ್ಘಾಟನೆ ಆಗುವ ಮುನ್ನ 2 ತಿಂಗಳಿಂದ ಇಲ್ಲಿ ಮಂತ್ರಾಕ್ಷತೆ ಹಂಚಿದ್ದಾರೆ. ನಾವು ಕೊಟ್ಟ ಅಕ್ಕಿಗೆ ಅರಿಶಿನ ಹಾಕಿ ಮಂತ್ರಾಕ್ಷತೆ ಹಂಚಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಯಾರೂ ಒಪ್ಪಲು ಸಿದ್ಧವಿಲ್ಲ. ಇತ್ತೀಚೆಗೆ ನಡೆದ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷದ ಪುಟ್ಟಣ್ಣ ಅವರನ್ನು ಗೆಲ್ಲಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಜನ ತೀರ್ಮಾನಿಸಿದ್ದಾರೆ. ರಾಜಕಾರಣದಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಪಕ್ಕಕ್ಕಿಟ್ಟು, ಹಳಬರು, ಹೊಸಬರು ಎಂಬ ವ್ಯತ್ಯಾಸ ಇಲ್ಲದೆ ಒಟ್ಟಾಗಿ ಕೆಲಸ ಮಾಡಿ. ಇನ್ನು ಅನೇಕ ನಾಯಕರು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಬರಲು ಸಿದ್ಧರಿದ್ದಾರೆ.












Click it and Unblock the Notifications