ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ನಡೆಸಿದ ಸಮೀಕ್ಷೆಯಲ್ಲಿ ಯಾರಿಗೆ ಜಯ? ಯಾರಿಗೆ ಸಿಗಲಿದೆ ಟಿಕೆಟ್?‌

ರಾಮನಗರ, ಸೆಪ್ಟೆಂಬರ್‌ 17: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿಯಿಂದ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ವಿಚಾರ ಬಿಜೆಪಿ ಮತ್ತು ಜೆಡಿಎಸ್ ನಡುವೆ ಭಾರೀ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಉಪ ಚುನಾವಣೆಯ ಕಾವು ಜೋರಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಭಾರಿ ಚುರುಕು ಪಡೆದುಕೊಂಡಿದೆ.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರ ಅಳಿಯ ಡಾ. ಮಂಜುನಾಥ್‌ ಅವರ ಗೆಲುವಿಗೆ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರು ಶ್ರಮಿಸಿದ್ದಾರೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್‌ ಗಾಗಿ ಹೈಕಮಾಂಡ್‌ ಮುಂದೆ ಸಿ ಪಿ ಯೋಗೇಶ್ವರ್‌ ಅವರು ಬೇಡಿಕೆ ಇಟ್ಟಿದ್ದಾರೆ. ಇತ್ತ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಜೆಡಿಎಸ್‌ ಪ್ಲಾನ್‌ ನಡೆಸಿದೆ.

Channapatna By Election BJP Survey Brings Strength To CP Yogeshwar

ಚನ್ನಪಟ್ಟಣ ಉಪ ಚುನಾವಣೆ ಬಿಜೆಪಿ- ಜೆಡಿಎಸ್ ಮೈತ್ರಿ ಟಿಕೆಟ್‌ನ ಪ್ರಬಲ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್, ಮತ್ತೆ ಸಕ್ರಿಯವಾಗಿದ್ದಾರೆ. ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಾ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಹಿತೈಷಿಗಳನ್ನು ಭೇಟಿ ಮಾಡುತ್ತಾ ಬೆಂಬಲ ಕೋರುತ್ತಿದ್ದಾರೆ. ಅಲ್ಲದೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾದ ಡಾ. ಮಂಜುನಾಥ್‌ ಅವರು ನನಗೆ ಬೆಂಬಲ ನೀಡುವ ಭರವಸೆ ಇದೆ ಎಂದು ಸಿ ಪಿ ಯೋಗೇಶ್ವರ್‌ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಿ ಪಿ ಯೋಗೇಶ್ವರ್ ಅವರು ಚನ್ನಪಟ್ಟಣ ಟಿಕೆಟ್ ವಿಷಯಕ್ಕಾಗಿ ದೆಹಲಿ ಯಾತ್ರೆ ಮುಗಿಸಿ ಬಂದ ಬಳಿಕ, ‌ ಟಿಕೆಟ್ ವಿಷಯದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಬೇಸರದಿಂದಲೇ ಉಪ ಚುನಾವಣೆ ಕಣದಿಂದ ಹಿಂದಕ್ಕೆ ಸರಿಯುವ ಮುನ್ಸೂಚನೆ ನೀಡಿದ್ರು. ಇದೀಗ ಮತ್ತೆ ಹುರುಪಿನಿಂದ ಓಡಾಡುತ್ತಿದ್ದಾರೆ. ಅಂದಹಾಗೆ, ಅವರ ನಡೆಗೆ ಕಾರಣವಾಗಿರುವುದು ಆ ಸಮೀಕ್ಷೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಚನ್ನಪಟ್ಟಣ ಕ್ಷೇತ್ರ ಜೆಡಿಎಸ್‌ ನ ಭದ್ರ ಕೋಟೆ. ಆದರೆ ಕ್ಷೇತ್ರದ ಚುನಾವಣಾ ವಾತಾವರಣ ಹಾಗೂ ಗೆಲುವಿನ ಸಾಧ್ಯತೆಯ ಕುರಿತು ಬಿಜೆಪಿ ನಡೆಸಿರುವ ಸಮೀಕ್ಷೆಯಲ್ಲಿ, ಮೈತ್ರಿ ಅಭ್ಯರ್ಥಿಯಾಗಿ ಸಿ ಪಿ ಯೋಗೇಶ್ವರ್ ಹೊರತುಪಡಿಸಿ ಬೇರಾರೇ ನಿಂತರೂ ಗೆಲುವು ಕಷ್ಟ ಎಂಬುದು ಗೊತ್ತಾಗಿದೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರ ಮೈತ್ರಿ ನಾಯಕರಿಗೆ ಅತ್ಯಂತ ಪ್ರತಿಷ್ಠೆಯಾಗಿರುವುದರಿಂದ ಇಲ್ಲಿ ಪಕ್ಷ ಪ್ರತಿಷ್ಠೆ ಬಿಟ್ಟು, ಗೆಲುವನ್ನೇ ಮಾನದಂಡವಾಗಿ ಪರಿಗಣಿಸಿ ಅಭ್ಯರ್ಥಿ ವಿಷಯದಲ್ಲಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂಬ ಅಭಿಪ್ರಾಯನ್ನ ಬಿಜೆಪಿ ವ್ಯಕ್ತಪಿಸಿದೆ ಎನ್ನಲಾಗಿದೆ.

ಬಿಜೆಪಿ ನಾಯಕರು ಸಮೀಕ್ಷೆ ಅಂಶಗಳನ್ನು ಆಧರಿಸಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರಿಎ ಟಿಕೆಟ್ ನೀಡುವ ಅಗತ್ಯದ ಕುರಿತು, ಮಿತ್ರಪಕ್ಷದವರಿಗೂ ಮನವರಿಕೆ ಮಾಡಿಕೊಡಲು ಯತ್ನಿಸುತ್ತಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಹೊರತುಪಡಿಸಿದರೆ ಬೇರೆ ಯಾರೇ ಸ್ಪರ್ಧಿಸಿದರೂ ಗೆಲುವಿನ ಸಾಧ್ಯತೆ ಕಡಿಮೆ ಎಂಬ ಮಾತುಗಳು ಉಭಯಪಕ್ಷಗಳಲ್ಲಿ ಕೇಳಿ ಬರುತ್ತಿವೆ. ಕ್ಷೇತ್ರವನ್ನು ತನ್ನ ರಾಜಕೀಯ ಎದುರಾಳಿಗೆ ಬಿಡದೆ ತನ್ನಲ್ಲೇ ಹಿಡಿದಿಟ್ಟುಕೊಳ್ಳಬೇಕಾದರೆ ಸಿ ಪಿ ಯೋಗೇಶ್ವರ್‌ ಆಯ್ಕೆಯೊಂದೇ ಜೆಡಿಎಸ್‌ಗೆ ಅನಿವಾರ್ಯ ಎಂಬಂತಾಗಿದೆ.

ಸಮೀಕ್ಷೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಯೋಗೇಶ್ವರ್ ಅವರಲ್ಲಿ ಮತ್ತೆ ಟಿಕೆಟ್ ಆಸೆ ಚಿಗುರಿಸಿದೆ. ಎರಡು ದಿನಗಳ ಹಿಂದೆ ರಾಮನಗರದಲ್ಲಿ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರ ಕಚೇರಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ಅವರು, 'ನೂರಕ್ಕೆ ನೂರರಷ್ಟು ನನಗೇ ಟಿಕೆಟ್ ಸಿಗಲಿದೆ. ಮಂಜುನಾಥ್ ದಂಪತಿ ಸಹ ನನ್ನ ಪರವಾಗಿದ್ದಾರೆ ಮಾಧ್ಯಮಗಳ ಮುಂದೆ ಸಿ ಪಿ ಯೋಗೇಶ್ವರ್‌ ಹೇಳಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+