Channapatna By Election| ಜೆ.ಪಿ ನಡ್ಡಾ ಭೇಟಿ ಮಾಡಿದ ಸಿ.ಪಿ ಯೋಗೇಶ್ವರ್ !
ಚನ್ನಪಟ್ಟಣ ಉಪ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಒಂದು ಕಡೆ ಮೈತ್ರಿ ಪಕ್ಷಗಳಾದ ಬಿಜೆಪಿ - ಜೆಡಿಎಸ್ ಯಾರನ್ನು ಕಣಕ್ಕೆ ಇಳಿಸಬೇಕು ಎನ್ನುವ ಗೊಂದಲದಲ್ಲಿ ಇದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ತನ್ನದೇ ತಂತ್ರವನ್ನು ಮಾಡುತ್ತಿದೆ. ಇದೀಗ ಚನ್ನಪಟ್ಟಣ ಉಪ ಚುನಾವಣೆ ಕ್ಲೈಮಾಕ್ಸ್ ತಲುಪುವ ಹಂತಕ್ಕೆ ಬಂದಿದೆ.
ಚನ್ನಪಟ್ಟಣದಿಂದ ಆಯ್ಕೆಯಾಗಿದ್ದ ಜೆಡಿಎಸ್ ಪ್ರಮುಖ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಕೇಂದ್ರ ಸಚಿವರು ಆಗಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ (ಚನ್ನಪಟ್ಟಣದಲ್ಲಿ) ಉಪ ಚುನಾವಣೆ ಕಣ ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿ ಬದಲಾಗಿದೆ. ಇದೇ ಸಂದರ್ಭದಲ್ಲಿ ಸಿ.ಪಿ ಯೋಗೇಶ್ವರ್ ಅವರು ಮೈತ್ರಿ ಪಕ್ಷಗಳಾದ ಬಿಜೆಪಿ - ಜೆಡಿಎಸ್ ಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.

ಜೆ.ಪಿ ನಡ್ಡಾ ಭೇಟಿ ಮಾಡಿದ ಯೋಗೇಶ್ವರ್
ಚನ್ನಪಟ್ಟಣದಿಂದ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಉತ್ಸುಕರಾಗಿರುವ ಹಾಗೂ ಚನ್ನಪಟ್ಟಣದಲ್ಲಿ ತಮ್ಮದೇ ಹವಾ ಮೂಡಿಸಿರುವ ಸಿ.ಪಿ ಯೋಗೇಶ್ವರ್ ಅವರು ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚನ್ನಪಟ್ಟಣ ಉಪ ಚುನಾವಣೆಯ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಅಶ್ವಥ್ ನಾರಾಯಣ ಹಾಗೂ ಅರವಿಂದ ಬೆಲ್ಲದ ಅವರು ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಯೋಗೇಶ್ವರ್ ನಡೆಗೆ ವಿರೋಧ ವ್ಯಕ್ತಪಡಿಸಿದ್ದ ಎಚ್.ಡಿಕೆ
ಸಿ.ಪಿ ಯೋಗೇಶ್ವರ್ ಅವರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಆರ್. ಅಶೋಕ್ ಅವರ ಟೀಂ ಸಿ.ಪಿ ಯೋಗೇಶ್ವರ ಅವರನ್ನು ದೆಹಲಿಗೆ ಕರೆದುಕೊಂಡು ಹೋಗಿ ಜೆ.ಪಿ ನಡ್ಡಾ ಅವರೊಂದಿಗೆ ಸಭೆ ನಡೆಸಿದೆ.
ಈಚೆಗೆ ಬಿಜೆಪಿ ಹಾಗೂ ಜೆಡಿಎಸ್ ಗೆ ಸಿ.ಪಿ ಯೋಗೇಶ್ವರ ಅವರ ಪಟ್ಟು ಬಿಸಿ ತುಪ್ಪವಾಗಿ ಪರಿಣಮಿಸಿತ್ತು. ಗುರುವಾರ ನಡೆದ ಬಿಜೆಪಿ - ಜೆಡಿಎಸ್ ಸಭೆಯಲ್ಲೂ ಎಚ್.ಡಿ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ಎಚ್.ಡಿ ಕುಮಾರಸ್ವಾಮಿ ಅವರ ವರ್ತನೆಗೆ ಬಿಜೆಪಿ - ಜೆಡಿಎಸ್ ನಾಯಕರು ಸಹ ಶಾಕ್ ಆಗಿದ್ದರು. ಅದರ ಬೆನ್ನಲ್ಲೇ ಈ ಸಭೆ ನಡೆದಿದೆ.
ಜೆಡಿಎಸ್ ಟಿಕೆಟ್ ಕೊಟ್ಟರೂ ಓಕೆ ಎಂದಿದ್ದ ಯೋಗೇಶ್ವರ್
ಬಿಜೆಪಿಯಿಂದ ಟಿಕೆಟ್ ಕೊಡಲು ಸಾಧ್ಯವಾಗದೆ ಇದ್ದರೆ, ಜೆಡಿಎಸ್ ನಿಂದ ನನಗೆ ಟಿಕೆಟ್ ಕೊಟ್ಟರೂ ಸಮಸ್ಯೆ ಇಲ್ಲ ಎಂದು ಟಿಕೆಟ್ ಆಕಾಂಕ್ಷಿ ಸಿ.ಪಿ ಯೋಗೇಶ್ವರ್ ಹೇಳಿದ್ದರು. ಎರಡು ಪಕ್ಷಗಳಲ್ಲಿ ಯಾವುದೇ ಪಕ್ಷದಿಂದಾದರೂ ನನಗೆ ಟಿಕೆಟ್ ಸಿಕ್ಕರೂ ನಾನು ಚುನಾವಣೆಯಲ್ಲಿ ಸ್ಪರ್ಧಿಸಬಲ್ಲೆ.
ಒಂದೊಮ್ಮೆ ಎರಡೂ ಪಕ್ಷದಿಂದ ನನಗೆ ಟಿಕೆಟ್ ಸಿಗದೆ ಇದ್ದರೆ, ನಾನು ಪಕ್ಷೇತರ ಅಭ್ಯರ್ಥಿಯಾಗಿ ಇಲ್ಲವೇ ಬಿಎಸ್ ಪಿಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದರು. ಇದು ಎಚ್.ಡಿ ಕುಮಾರಸ್ವಾಮಿ ಗರಂ ಆಗಲು ಕಾರಣವಾಗಿತ್ತು. ಎಚ್.ಡಿ ಕುಮಾರಸ್ವಾಮಿ ಅವರು ಅವರ ಪುತ್ರ ಹಾಗೂ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜಕೀಯ ಭವಿಷ್ಯ ರೂಪಿಸಬೇಕು ಎಂದು ನೋಡುತ್ತಿದ್ದಾರೆ. ಆದರೆ, ಅದು ಸಹಕಾರವಾಗುವ ಲಕ್ಷಣ ಕಾಣಿಸುತ್ತಿಲ್ಲ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications