Channapattana By Election Result: 'ಚನ್ನಪಟ್ಟಣ ಜನ ನಮ್ಮನ್ನು ಕೈ ಹಿಡಿದಿದ್ದಾರೆ' ಹೆಚ್‌ಡಿ ಕುಮಾರಸ್ವಾಮಿ ವಿಶ್ವಾಸ
ಬೆಂಗಳೂರು ನವೆಂಬರ್ 23: ಚನ್ನಪಟ್ಟಣ ವಿಧಾನಸಭೆ ಚುನಾವಣೆ ಫಲಿತಾಂಶ ಭಾರೀ ಕುತೂಹಲವನ್ನು ಮೂಡಿದಿದೆ. ಪ್ರಸ್ತುತ ಮತ ಎಣಿಕೆ ಆರಂಭವಾಗಿದ್ದು ಸಂಜೆ ವೇಳೆಗೆ ಅಭ್ಯರ್ಥಿಗಳ ಹಣೆಬರಹ ಗೊತ್ತಾಗಲಿದೆ. ಆರಂಭಿಕ ಹಂತದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದು, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿ ಕುಮಾರಸ್ವಾಮಿ ಅವರು, 'ಚನ್ನಪಟ್ಟಣದ ಜನತೆ ನಿಖಿಲ್ ಅವರನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆ ಇತ್ತು. ಚನ್ನಪಟ್ಟಣ ಜನ ನಮ್ಮನ್ನು ಕೈ ಹಿಡಿದಿದ್ದಾರೆ. ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಅವರೆಲ್ಲರಿಗೂ ಅಭಿನಂದನೆಯನ್ನು ತಿಳಿಸಲು ಬಯಸುತ್ತೇನೆ' ಎಂದು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಡೆಂಪಲ್ ರನ್
ಚನ್ನಪಟ್ಟಣದಲ್ಲಿ 20 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದೆ. ಹೀಗಾಗಿ ಮತ ಎಣಿಕೆ ಕೇಂದ್ರದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚನ್ನಪಟ್ಟಣ ಫಲಿತಾಂಶ ಬೆನ್ನಲ್ಲೆ ಇಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನ ಜೆಪಿ ನಗರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತಂದೆ ಮಗ ಇಬ್ಬರೂ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು ಫಲಿತಾಂಶ ಇಂದು ಎನ್‌ಡಿಎ ಪರವಾಗಿ ಬರುವ ಲಕ್ಷಣಗಳು ಕಾಣಿಸುತ್ತಿವೆ.
ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, 'ನಾವು ಇನ್ನೂ ತುಂಬಾ ದೂರ ಹೋಗುವುದು ಇದೆ. ಚುನಾವಣೆಗೂ ಮುಂಚೆ ನಾನು ಒಂದು ಮಾತನ್ನು ಹೇಳಿದ್ದೇ. ಗೆಲುವಿನ ಆತ್ಮವಿಶ್ವಾಸ ನನಗೆ ಇದೆ ಅಂತ. ಚನ್ನಪಟ್ಟಣ ಜನ ನನ್ನ ಕೈಹಿಡಿಯುತ್ತಾರೆ ಎನ್ನುವ ನಂಬಿಕೆ ಇದೆ. ಚನ್ನಪಟ್ಟಣದ ಮತದಾರರು ಆತ್ಮವಿಶ್ವಾಸ ಮೂಡಿಸಿದ್ದಾರೆ. ಗೆಲ್ಲುವ ವಿಶ್ವಾಸ ತುಂಬಾ ಇದೆ' ಎಂದು ಹೇಳಿದರು.
ಸೋಲಿನ ಸುಳಿವು ಕೊಟ್ಟ ಸಿಪಿ ಯೋಗೇಶ್ವರ್
ಅಷ್ಟಕ್ಕೂ ಹೆಚ್‌ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಗೆಲುವಿನ ವಿಶ್ವಾಸದಲ್ಲಿ ಇರುವುದಕ್ಕೆ ಕಾರಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರ ಹೇಳಿಕೆ. ಚನ್ನಪಟ್ಟಣ ಚುನಾವಣೆ ಮುಗಿದ ಮರು ದಿನವೇ ಸುದ್ದಿಗೋಷ್ಟಿ ನಡೆಸಿದ ಸಿಪಿ ಯೋಗೇಶ್ವರ್ ಅವರು ಗೆಲುವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಹೀಗೆ ಕಾಂಗ್ರೆಸ್ ಅಭ್ಯರ್ಥಿಯೇ ಸ್ವತ: ಗೆಲುವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು ಎನ್‌ಡಿಎ ಅಭ್ಯರ್ಥಿಗೆ ಗೆಲುವಿನ ಕಿರೀಟ ತೊಡಿಸಿದಂತಾಗಿದೆ.
ಅಂದಿನಿಂದಲೂ ಎನ್‌ಡಿ ಕಾರ್ಯಕರ್ತರು ಸಂಭ್ರಮದಲ್ಲಿ ಇದ್ದಾರೆ. ಇನ್ನೂ ಇಂದು ಬೆಳಿಗ್ಗೆ 8.30ಗಂಟೆಯ ಮತ ಎಣಿಕೆಯ ಸಂದರ್ಭದಲ್ಲಿ ನಿಖಿಲ್ ಮುನ್ನಡೆ ಕಾಯ್ದುಕೊಂಡಿದ್ದರು. 9ಗಂಟೆಯ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ 39 ಮತಗಳ ಅಂತರದಲ್ಲಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದರು. ಇನ್ನು ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬೆಳಿಗ್ಗೆ 9.30ಕ್ಕೆ ನಿಖಿಲ್ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೀಗೆ ಇಬ್ಬರು ಪ್ರಬಲ ಅಭ್ಯರ್ಥಿಗಳ ನಡುವೆ ಹಾವು ಏಣಿ ಆಟ ಶುರುವಾಗಿದೆ. ಸಂಜೆ ವೇಳೆಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ಸ್ಪಷ್ಟ ಫಲಿತಾಂಶ ಸಿಗಲಿದೆ.












Click it and Unblock the Notifications