Nikhil Kumaraswamy : ಚನ್ನಪಟ್ಟಣ ಕ್ಷೇತ್ರಗಳಲ್ಲಿ ಬಿರುಸಿನ ಮತದಾನ; ದೇವರ ಮೊರೆ ಹೋದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ, ನವೆಂಬರ್ 13:ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಕ್ಷೇತ್ರ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮತದಾನ ಬೆಳಗ್ಗೆ 7 ಗಂಟೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ಮತದಾರರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಈ ನಡುವೆ ಅಭ್ಯರ್ಥಿಗಳು ದೇವರ ಮೊರೆ ಹೋಗಿದ್ದಾರೆ.
ರಾಜ್ಯದಲ್ಲಿ 3 ಕ್ಷೇತ್ರಗಳ ಉಪ ಚುನಾವಣೆ ಜನರ ಗಮನ ಸೆಳೆದಿತ್ತು. ಮೂರು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಈ ಚುನಾವಣೆಯಲ್ಲಿ ವೈಯಕ್ತಿಕ ಪ್ರತಿಷ್ಠೆಯ ಕಣವನ್ನಾಗಿ ಸ್ವೀಕಾರ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಚನ್ನಪಟ್ಟಣ ಕ್ಷೇತ್ರ ಡಿ ಕೆ ಬ್ರದರ್ಸ್ ಗೆ ಪ್ರತಿಷ್ಠೆಯಾಗಿದ್ರೆ, ಇತ್ತ ದಳಪತಿಗಳಿಗೆ ಅಸ್ತತ್ವದ ಪ್ರಶ್ನೆಯಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜ್ಯದ ಗಮನ ಸೆಳೆದಿದ್ದು, ಇತ್ತ ಮತದಾನ ಆರಂಭವಾಗುತ್ತಿದ್ದಂತೆ ಇತ್ತ ಅಭ್ಯರ್ಥಿಗಳು ದೇವರ ಮೊರೆ ಹೋಗಿದ್ದಾರೆ. ಚನ್ನಪಟ್ಟಣ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತದಾನಕ್ಕೂ ಮುನ್ನ ಕ್ಷೇತ್ರದ ಪ್ರಸಿದ್ದ ಕೆಂಗಲ್ ಆಂಜನೇಯ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಲಾಯಿತು.
ಇನ್ನೂ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಪ್ರಾರಂಭಿಕ ಹಂತದಲ್ಲಿ ಅಭ್ಯರ್ಥಿ ಆಗುವ ಬಗ್ಗೆ ನನಗೆ ಭಾವನೆಗಳು ಇರಲಿಲ್ಲ. ಆದರೆ ಕೆಲ ರಾಜಕೀಯ ಬೆಳವಣಿಗೆ ಹಿನ್ನೆಲೆ ಪಕ್ಷದ ಭಾವನೆಗಳು ಬೆಲೆ ಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎದುರಿಸೋಕೆ ಎನ್‌ಡಿಎ ನಾಯಕರು ತೀರ್ಮಾನ ಮಾಡಿ ನನ್ನ ಅಭ್ಯರ್ಥಿಯನ್ನಾಗಿ ಮಾಡಿದರು.
ಪಕ್ಷದ ಪರವಾಗಿ ಹಳ್ಳಿ ಹಳ್ಳಿಯಲ್ಲಿ ನನ್ನ ಪರ ವಿಶ್ವಾಸ ಮೂಡಿಸುವ ಕೆಲಸ ಮಾಡಿದ್ದೇನೆ. ಕಳೆದ ಆರುವರೆ ವರ್ಷಗಳ ಕಾಲ ಕುಮಾರಣ್ಣ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪ ಮಾಡಿದ್ದೇನೆ. ಮತದಾರರು ಅವರ ಹೃದಯದಲ್ಲಿ ಒಂದು ಸ್ಥಾನ ಕೋಡ್ತಾರೆ ಎಂಬ ವಿಶ್ವಾಸ ಇದೆ. ಮತದಾರರ ವಿಶ್ವಾಸ ಮೀರಿ ಸೇವೆ ಮಾಡುವ ದೃಢ ನಿರ್ಧಾರ ಮಾಡಿದ್ದೇನೆ
ಯುವಕ ಮತ ಚಲಾವಣೆ ಮಾಡದ ವಿಚಾರವಾಗಿ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ ಅವರು, ಚನ್ನಪಟ್ಟಣದಲ್ಲಿ ಯುವ ಸಮುದಾಯ ಬಹಳ ದೊಡ್ಡ ಮಟ್ಟದಲ್ಲಿದೆ. ನಾನು ಹಳ್ಳಿಗಳಿಗೆ ಹೋದ ಸಂದರ್ಭದಲ್ಲಿ ಯುವಕರು ಬಂದಿದ್ದಾರೆ. ಒಬ್ಬ ಅಣ್ಣನೂ ತಮ್ಮನೂ ಬಂದಿದ್ದಾನೆ ಎಂಬ ಭಾವನೆಯಿಂದ ಹೆಜ್ಜೆ ಹಾಕಿದ್ದಾರೆ. ಇವತ್ತು ಯಾವುದೇ ವರ್ಗ,ವಯಸ್ಸು ಇರಬಹುದು. ಬಂದು ಎಲ್ಲರೂ ಬಂದು ಮತದಾನ ಮಾಡಿ, ಪ್ರಜಾಪ್ರಭುತ್ವಲ್ಲಿ ನಿಮ್ಮ ಹಕ್ಕು ಚಲಾಯಿಸಿ ಎಂದು ಮನವಿ ಮಾಡಿದರು.
ದೇವೇಗೌಡ ಕುಟುಂಬದ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ,ತಾವು ಎಲ್ಲ ಗಮನಿಸಿದ್ದೀರಾ. ನನಗೆ ಎರಡು ಚುನಾವಣೆ ಯಾವ ರೀತಿ ನಡೆದುಕೊಂಡು ಬಂದಿದ್ದೇನೆ. ಚನ್ನಪಟ್ಟಣ ಜನತೆಗೆ ಬಿಡ್ತೀನೆ. ನನಗೆ ಇರೋದು ಒಂದೇ ದೇವೇಗೌಡ, ಕುಮಾರಣ್ಣ ಕೊಡುಗೆ ಇದೆ. ನಾಮಪತ್ರ ಸಲ್ಲಿಸಿದ ದಿನದಿಂದಲೂ ನನಗೆ ಗೆಲುವ ಆತ್ಮವಿಶ್ವಾಸವಿದೆ ಎಂದು ಹೇಳಿದರು.












Click it and Unblock the Notifications