Nikhil kumaraswamy : ಜೆಡಿಎಸ್‌ ಸಮೀಕ್ಷೆಯಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಜಯ; ಆದರೆ ಭಾರೀ ಪೈಪೋಟಿ

ಬೆಂಗಳೂರು, ಅಕ್ಟೋಬರ್‌ 28: ಲೋಕಸಭಾ ಚುನಾವಣೆಯ ಬಳಿಯ ರಾಜ್ಯದಲ್ಲಿ ಬೈ ಎಲೆಕ್ಷನ್‌ ಭರಾಟೆ ಜೋತಾಗಿ ಸದ್ದು ಮಾಡುತ್ತಿದೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಸಿ ಪಿ ಯೋಗೇಶ್ವರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ದಳಪತಿಗಳಿ ಪ್ರತಿಷ್ಠೆಯಾಗಿದ್ದು, ಶತಾಯುಗತಾಯ ಚನ್ನಪಟ್ಟಣವನ್ನ ಗೆಲ್ಲುವ ನಿಟ್ಟಿನಲ್ಲಿ ಮಾಸ್ಟರ್‌ ಪ್ಲಾನ್‌ ನಡೆಸಿದ್ದು, ನಿಖಿಲ್‌ ಕುಮಾರಸ್ವಾಮಿ ಗೆಲುವಿಗೆ ದಳಪತಿಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದಾರೆ. ಇತ್ತ ನಿಖಿಲ್‌ ಕುಮಾರಸ್ವಾಮಿ ಕುರಿತು ಚನ್ನಪಟ್ಟಣ ಜನತೆಯ ನಾಡಿಮಿಡಿತ ಹೇಗಿದೆ ಎಂಬ ಬಗ್ಗೆ ಜೆಡಿಎಸ್‌ ರಾಜ್ಯ ಘಟಕ ಸಮೀಕ್ಷೆಯನ್ನ ನಡೆಸಿದ್ದು, ಈ ಸಮೀಕ್ಷೆಯಲ್ಲಿ ಗೆಲುವು ಯಾರಿಗೆ ಎಂದು ತಿಳಿದು ಬಂದಿದೆ.

Channapatna Elections Nikhil Kumaraswamy wins in JDS poll

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಮೊದಲ ಬಾರಿಗೆ 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಂಡ್ಯದಿಂದ ಸ್ಪರ್ಧೆ ನಡೆಸಿದ್ದರು. 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಸುಮಲತಾ ಅವರನ್ನು ಬಿಜೆಪಿ ಬೆಂಬಲಿಸಿತ್ತು, ನಿಖಿಲ್‌ ಕುಮಾರಸ್ವಾಮಿ ಅವರನ್ನ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು.

2019 ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಸಾಧಿಸುವುದು ಖಚಿತ ಎಂದು ಹೆಚ್ಚು ನಿರೀಕ್ಷೆಯನ್ನ ಇಟ್ಟುಕೊಳ್ಳಲಾಗಿತ್ತು. ಆದರೆ, ರು. 2019 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ 7,03,660 ಮತಗಳನ್ನು ಪಡೆದರೆ, ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ 5,77,784 ಮತಗಳನ್ನು ಪಡೆದಿದ್ದು, ಸೋಲು ಅನುಭವಿಸಿದ್ದರು.

ಇನ್ನೂ 2023 ರ ವಿಧಾನಸಭಾ ಚುನಾವಣೆಯಲ್ಲಿಯ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಸೋಲು ಅನುಭವಿಸಿದ್ದರು. ಇದೀಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಳೆದು ತೂಗಿ ಎನ್‌ ಡಿ ಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಕಣಕ್ಕಿಳಿದಿದ್ದು, ನಿಖಿಲ್‌ ಕುಮಾರಸ್ವಾಮಿ ಪರವಾಗಿ ಚನ್ನಪಟ್ಟಣ ಜನತೆಗೆ ನಾಡಿಮಿಡಿತ ಹೇಗಿದೆ ಎಂದು ಜೆಡಿಎಸ್‌ ರಾಜ್ಯ ಘಟನ ಸಮೀಕ್ಷೆ ನಡೆಸಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ನಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ ಡಿ ಎ ಅಭ್ಯರ್ಥಿಯಾಗಿ ಕಣಳಿದ ನಿಖಿಲ್‌ ಕುಮಾರಸ್ವಾಮಿ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ್ರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಹಳೆ ಮೈಸೂರು ಭಾಗದಲ್ಲಿ ಒಳ್ಳೆಯ ಹಿಡಿತ ಇರುವುದರಿಂದ ಒಕ್ಕಲಿಗರ ದೊಡ್ಡ ಲೀಡರ್‌ಗಳಾಗಿದ್ದಾರೆ. ಇನ್ನೂ ಬಿಜೆಪಿ ಸ್ಥಳೀಯ ನಾಯಕರು ನಿಖಿಲ್‌ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಕಾರ್ಯವನ್ನ ನಡೆಸುತ್ತಿದ್ದಾರೆ.

ಅಲ್ಲದೇ ಎರಡು ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಸೋಲು ಅನುಭವಿಸಿದ್ದು, ಈ ಬಾರಿ ಚನ್ನಪಟ್ಟಣದಲ್ಲಿ ಅಗ್ನಿ ಪರೀಕ್ಷೆಯನ್ನ ಎದುರಿಸುತ್ತಿರುವ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಈ ಬಾರಿ ಚನ್ನಪಟ್ಟಣ ಜನತೆ ಕೈ ಹಿಡಿಯುತ್ತಾರೆ ಎಂದು ಜೆಡಿಎಸ್‌ ಸಮೀಕ್ಷೆ ತಿಳಿಸಿದೆ ಎಂದು ಹೇಳಲಾಗಿದೆ. ಕಳೆದ ಎರಡು ಚುನಾವಣೆಯಲ್ಲಿ ಸೋಲು ಕಂಡ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಈ ಬಾರಿ ಅನುಕಂಪದ ಆಧಾರದ ಮೇಲೆ ಹಾಗೂ ಕುಮಾರಸ್ವಾಮಿ ಅವರ ಹಿಡಿತದ ಆಧಾರದ ಮೇಲೆ ನಿಖಿಲ್‌ ಕುಮಾರಸ್ವಾಮಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+