ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ತೊರೆದ ಶಾಸಕ ಸಿಪಿ ಯೋಗೇಶ್ವರ ಚಿತ್ತ ಎತ್ತ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 14: 2018ರ ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಗುಳೆ ಹೋಗುವ ಪಕ್ಷಾಂತರ ಪರ್ವ ಆರಂಭವಾಗಿದೆ.

ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ನ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿ ಸೇರಿ, ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದರೆ ಎಂಬ ಗುಸುಗುಸು ಸುದ್ದಿಗಳು ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿರುವ ಬೆನ್ನಲ್ಲಿಯೇ ಇದೀಗ ಚನ್ನಪಟ್ಟಣ ಶಾಸಕ ಸಿ,ಪಿ ಯೋಗೇಶ್ವರ ಮಾತೃ ಪಕ್ಷ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ.

Channapatna MLA CP Yogeshwar quits congress party

ಸಮಾಜವಾದಿ ಪಕ್ಷರಿಂದ ಶಾಸಕರಾಗಿದ್ದ ಯೋಗೇಶ್ವರ್ ಬಳಿಕ ಕಾಂಗ್ರೆಸ್ ಸೇರಿದ್ದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗೇಶ್ವರ್, "ಎರಡು ಬಾರಿ ಕಾಂಗ್ರೆಸ್ ಟಿಕೆಟ್ ತಪ್ಪಲು ಡಿ.ಕೆ ಶಿವಕುಮಾರ್ ಅವರೇ ಕಾರಣ" ಎಂದು ವಾಗ್ದಾಳಿ ನಡೆಸಿದರು.

ನನ್ನ ಬೆಳವಣಿಗೆಗೆ ಡಿ,ಕೆ ಶಿವಕುಮಾರ್ ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದ ಬೇಸತ್ತು ಕಾಂಗ್ರೆಸ್ ಪಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಲು ಒಲವು ತೋರಿದ್ದಾರೆ.‌

ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

English summary
Channapatna MLA CP Yogeshwar quits congress party. May he is contesting 2018 karnatka assembly election from JDS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X