ಹೆಚ್‌ ಡಿ ಕುಮಾರಸ್ವಾಮಿಗೆ ಪುತ್ರ ವ್ಯಾಮೋಹ; ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ?

ರಾಮನಗರ, ಅಕ್ಟೋಬರ್‌ 12: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಈ ಬಾರೀ ಹೈವೋಲ್ಟೇಜ್ ಕ್ಷೇತ್ರವಾಗಲಿದೆ. ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಕೌಂಟ್​ಡೌನ್​ ಶುರುವಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಯಾರು ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅಳಿಯ ಮಂಜುನಾಥ್‌ ಅವರು ಸ್ಪರ್ಧೆ ನಡೆಸಿದ್ರು. ಈ ವೇಳೆ ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್‌ ಅವರು ಮಂಜುನಾಥ್‌ ಅವರ ಗೆಲುವಿಗೆ ಸಾಕಷ್ಟು ಶ್ರಮಿಸಿದ್ರು. ಇದೀಗ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅಖಾಡಕ್ಕೆ ಇಳಿಯೋದು ಪಕ್ಕಾ ಎನ್ನಲಾಗುತ್ತಿತ್ತು. ಆದರೆ, ಸದ್ಯದ ಬೆಳವಣೆಗೆಯನ್ನ ಗಮನಿಸಿದ್ರೆ, ಸಿ ಪಿ ಯೋಗೇಶ್ವರ್‌ ಅವರಿಗೆ ಟಿಕೆಟ್‌ ಸಿಗುವುದು ಡೌಟ್‌ ಎನ್ನಲಾಗಿದೆ.

Channapatna Nikhil kumaraswamy may completed as NDA candidate for Channapatna By election

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅಖಾಡಕ್ಕೆ ಇಳಿಯೋದು ಪಕ್ಕಾ ಎನ್ನಲಾಗುತ್ತಿತ್ತು.ಆದರೆ ಇದೀಗ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದು ಅವರ ನಡೆ ಕುತೂಹಲ ಕೆರಳಿಸಿದೆ. ಇತ್ತ ನಿಖಿಲ್‌ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಸಂಚಾರ ಆರಂಭಿಸಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರ ಜೊತೆಗೆ ನಿರಂತರವಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಸಭೆಯನ್ನ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣೆಗೆಗಳನ್ನ ಗಮನಿಸಿದರೇ ಸಿ ಪಿ ಯೋಗೇಶ್ವರ್‌ ಗೆ ಟಿಕೆಟ್‌ ಅಸಾಧ್ಯ ಎನ್ನಲಾಗುತ್ತಿದೆ.

ಇನ್ನೂ ಚನ್ನಪಟ್ಟಣ ಟಿಕೆಟ್‌ ಗಾಗಿ ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್‌ ಅವರು ದೆಹಲಿಯ ಹೈಕಮಾಂಡ್‌ ನಾಯಕನ್ನು ಸಹ ಈಗಾಗಲೇ ಭೇಟಿ ಮಾಡಿ ಮಾತುಕತೆಯನ್ನ ನಡೆಸಿದ್ದಾರೆ. ಇತ್ತ ಚನ್ನಪಟ್ಟಣದಿಂದ ನಿಖಿಲ್ ಅವರು ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬಂದಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿ ಸಿ ಪಿ ಯೋಗೇಶ್ವರ್ ಮನವೊಲಿಸಲು ಸಲಹೆ ನೀಡಿದ್ದಾರೆ.

ಕಳೆದ ಒಂದು ತಿಂಗಳಿನಿಂದ ನಿಖಿಲ್‌ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರ ಶುರು ಮಾಡಿದ್ದಾರೆ. ಇದೀಗ ಚನ್ನಪಟ್ಟಣ ಅಖಾಡಕ್ಕೆ ಹೆಚ್ ​ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು ಜೆಡಿಎಸ್​ನಲ್ಲಿ ಭರ್ಜರಿ ತಯಾರಿ ಶುರುವಾಗಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೆಚ್ಚಿದ್ದು, ಪುತ್ರನಿಗೆ ರಾಜಕೀಯ ಜೀವನವನ್ನ ರೂಪಿಸಲು ಹೆಚ್‌ ಡಿ ಕುಮಾರಸ್ವಾಮಿ ಹೈಕಮಾಂಡ್‌ ನಾಯಕರ ಮಟ್ಟದಲ್ಲಿ ಚರ್ಚೆ ನಡೆಸಿದ್ದಾರೆ.

ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗೋಕೆ ಡಿಕೆ ಬ್ರದರ್ಸ್​, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೆಯುತ್ತಿದ್ದು, ಶತಾಯುಗತಾಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ಡಿ ಕೆ ಬ್ರದರ್ಸ್‌ ಹಾಗೂ ಹೆಚ್‌ ಡಿ ಕುಮಾರಸ್ವಾಮಿ ಅವರು ಪಣ ತೊಟ್ಟಿದ್ದಾರೆ. ಒಂದು ಕಡೆ ಡಿ ಕೆ ಶಿವಕುಮಾರ್‌ ಅವರಿಗೆ ಅಸ್ತಿತ್ವ ಪ್ರಶ್ನೆಯಾದ್ರೆ ಇತ್ತ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಹೆಚ್‌ ಡಿ ಕುಮಾರಸ್ವಾಮಿ ಅವರು ಪುತ್ರನನ್ನ ಚನ್ನಪಟ್ಟಣದಿಂದ ಕಣಕ್ಕಿಳಿಸಲು ಭರ್ಜರಿ ಪ್ಲಾನ್‌ ನಡೆಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+