ಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ
ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಒಯಿ ಸಂತಾಪ ಸೂಚಿಸಿದರು.
ಬೆಂಗಳೂರು, ಮಾರ್ಚ್ 23: ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರವನ್ನ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು.
— Siddaramaiah (@siddaramaiah) March 23, 2023
ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ.
ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ. pic.twitter.com/AKtNpZrzPx
ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿಎಂ ಸಂತಾಪ
ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು ಎಂದು ಸ್ವಾಮೀಜಿಗಳ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ" ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದರು.
ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..
ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀಗಳ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ ಎಂದು ವಿರೋಧ ಪಕ್ಷದ ನಾಯಕರ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ. ಸ್ವಸ್ಥಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನ ಭಟ್ಟಾರಕ ಶ್ರೀಗಳಿಗೆ ಭಾರತ ಮಾತ್ರವಲ್ಲದೆ ವಿಶ್ವದ ನಾನಾ ದೇಶಗಳಲ್ಲಿ ಭಕ್ತರಿದ್ದಾರೆ. ಇಡೀ ಭಕ್ತ ಸಮೂಹಕ್ಕೆ ಶ್ರೀಗಳ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಮನುಕುಲದ ಅಂತರಂಗ ಶುದ್ಧಿ ಮತ್ತು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡುತ್ತಿದ್ದ ಶ್ರೀಗಳು ಸ್ವತಃ ಬೆಂಗಳೂರು ಮತ್ತು ಮೈಸೂರು ವಿಶ್ವ ವಿದ್ಯಾಲಯದಲ್ಲಿ ಕ್ರಮವಾಗಿ ತತ್ವಶಾಸ್ತ್ರ ಮತ್ತು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಪ್ರಾಕೃತ, ಸಂಸ್ಕೃತ ಮತ್ತು ಕನ್ನಡದಲ್ಲಿ ಅಪಾರ ಪಾಂಡಿತ್ಯ ಮತ್ತು ಪರಿಣತಿ ಹೊಂದಿದ್ದ ಇವರು ಪ್ರಾಕೃತ ವಿಶ್ವ ವಿದ್ಯಾಲಯವನ್ನೂ ಸ್ಥಾಪಿಸಿದ್ದರು. ಪಾಲಿಟೆಕ್ಷಿಕ್, ಎಂಜಿನಿಯರಿAಗ್, ನರ್ಸಿಂಗ್ ಕಾಲೇಜುಗಳನ್ನೂ ಸ್ಥಾಪಿಸಿ ಸಾವಿರಾರು ಮಕ್ಕಳಿಗೆ ಶಿಕ್ಷಣ ದೊರಕಿಸಿದ್ದಾರೆ.
ನಾನು ಹಲವು ಬಾರಿ ಶ್ರೀಗಳ ದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು ಜೀವಮಾನದಲ್ಲಿ ಮೊಬೈಲ್ ಸ್ಪರ್ಷಿಸಿಲ್ಲ, ಆಧುನಿಕ ಸವಲತ್ತುಗಳನ್ನು ಆಶಿಸದೆ 12 ವರ್ಷಗಳ ಕಾಲ ವಾಹನ ಸಂಚಾರವನ್ನೇ ಮಾಡದೆ ಗ್ರಂಥ ರಚನೆ ಮಾಡಿದ್ದರು ಎನ್ನುವುದು ಬಹಳ ಉನ್ನತವಾದ ಮೌಲ್ಯ. ಜೈನ ಪರಂಪರೆ ಮತ್ತು ಅಧ್ಯಾತ್ಮದ ಮೌಲ್ಯಗಳನ್ನು ಹೇಳುವ ದವಳ ಮತ್ತು ಜಯದವಳ ಆಗಮ ಗ್ರಂಥಗಳನ್ನು ಶ್ರೀಗಳು ರಚನೆ ಮಾಡಿದ್ದಾರೆ ಎನ್ನುವುದನ್ನು ಕೇಳಿ ತಿಳಿದಿದ್ದೇನೆ.
1949ರಲ್ಲಿ ರತ್ನವರ್ಮರಾಗಿ ಕಾರ್ಕಳದ ವರಂಗ ಗ್ರಾಮದಲ್ಲಿ ಜನಿಸಿದ್ದ ಶ್ರೀಗಳು 1970ರಲ್ಲಿ ಶ್ರವಣಬೆಳಗೊಳದ ಪೀಠಾಧಿಪತಿಗಳಾಗಿ ಹೊಯ್ಸಳ ವಂಶದ ಚಾರುಕೀರ್ತಿ ಪಟ್ಟವನ್ನೂ ಪಡೆದರು. ಇವರು ತಮ್ಮ ಅವಧಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಶ್ರವಣಬೆಳಗೊಳದ ಮಹಾಮಸ್ತಾಭಿಷೇಕವನ್ನು 1981, 1993, 2006 ಮತ್ತು 2018 ರಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿಸಿದ್ದಾರೆ.
ಇವರ ಅಧ್ಯಾತ್ಮದ ಸಾಧನೆ ನಮ್ಮ ನೆಲದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಇವರ ಶಿಕ್ಷಣ ಕ್ಷೇತ್ರದ ಸಾಧನೆಗಳೂ ಹಲವು ತಲೆಮಾರುಗಳವರೆಗೂ ಬೆಳೆಯುತ್ತಲೇ ಇರುತ್ತದೆ. ಶ್ರೀಗಳ ನಿಧನ ಅತೀವ ನೋವು ತಂದಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರುತ್ತಾ, ಶ್ರದ್ದಾಂಜಲಿ ಸಲ್ಲಿಸುತ್ತೇನೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications