Chaithra Kundapur; ವಂಚನೆ ಪ್ರಕರಣ, ಚೈತ್ರ ಕುಂದಾಪುರ ತಪ್ಪೊಪ್ಪಿಗೆ?
ಬೆಂಗಳೂರು, ಸೆಪ್ಟೆಂಬರ್ 22; ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯಿಂದ ಸುಮಾರು 5 ಕೋಟಿ ರೂ. ಹಣ ಪಡೆದು ವಂಚನೆ ಮಾಡಲಾಗಿದೆ ಎಂಬುದು ಆರೋಪವಾಗಿದೆ.
ಈ ಪ್ರಕರಣದ ಮೊದಲ ಆರೋಪಿ, ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಗೆ ಸೇರಿದ ಸ್ವತ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಪ್ರಕರಣದ ಕುರಿತು ತಪ್ಪೊಪ್ಪಿಕೊಂಡಿದ್ದಾರೆ ಎಂದು Kannada News Now ವರದಿ ಮಾಡಿದೆ.

ಉದ್ಯಮಿ ಗೋವಿಂದ ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿರುವ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿ ಚೈತ್ರಾ ಕುಂದಾಪುರ ಇದ್ದಾರೆ. ಆಕೆಗೆ ಸೇರಿದ ಸ್ವತ್ತುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ದಾಖಲೆಗಳ ಸಮೇತ ಪ್ರಶ್ನೆ ಮಾಡಿದಾಗ, ಆಕೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಹಣ ಮಾಡುವ ಉದ್ದೇಶದಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆಯಲಾಗಿತ್ತು. ಟಿಕೆಟ್ ಸಿಕ್ಕರೆ ಮುಂದೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಚೈತ್ರಾ ಕುಂದಾಪುರ ಸೇರಿದಂತೆ ಇತರ ಆರೋಪಿಗಳು ನಂಬಿದ್ದರು. ಉದ್ಯಮಿ ಬಳಿಯಿಂದ ಚೈತ್ರಾ ಕುಂದಾಪುರ ಮತ್ತು ಇತರ ಆರೋಪಿಗಳು ಮೂರುವರೆ ಕೋಟಿ ರೂ.ಗಳನ್ನು ಪಡೆದಿದ್ದರು ಎಂಬ ಮಾಹಿತಿಯೂ ಪೊಲೀಸರಿಗೆ ಸಿಕ್ಕಿದೆ.
ವಿಶ್ವನಾಥ್ ಜಿ ಮೃತಪಟ್ಟಿದ್ದಾರೆ; ಉದ್ಯಮಿ ಗೋವಿಂದ ಪೂಜಾರಿಯನ್ನು ನಂಬಿಸಲು ಚೈತ್ರಾ ಕುಂದಾಪುರ ಮತ್ತು ಇತರ ಆರೋಪಿಗಳು ವಿಶ್ವನಾಥ್ ಜಿ ಎಂಬ ಪಾತ್ರ ಸೃಷ್ಟಿ ಮಾಡಿ, ಕಥೆ ಕಟ್ಟಿದ್ದರು. ನಾವು ನಿಮಗೆ ಹಣದ ಸಹಾಯ ಮಾಡಿದ್ದೇವೆ. ಹಣವನ್ನು ವಿಶ್ವನಾಥ್ ಜಿಗೆ ನೀಡಿದ್ದೇವೆ. ಅವರು ಸತ್ತೊ ಹೋಗಿದ್ದಾರೆ ಎಂದು ನಂಬಿಸಲು ಗ್ಯಾಂಗ್ ಯೋಜನೆ ರೂಪಿಸಿತ್ತು.
ಸಿಸಿಬಿ ಪೊಲೀಸರ ವಶದಲ್ಲಿದ್ದ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಕೆಯನ್ನು ಎರಡು ದಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ಸಿಸಿಬಿ ಪೊಲೀಸರು ಉಡುಪಿಯ ಉಪ್ಪೂರು ಶ್ರೀರಾಮ ಸೊಸೈಟಿ ಲಾಕರ್‌ನಲ್ಲಿದ್ದ ಚೈತ್ರಾ ಕುಂದಾಪುರ ಆಸ್ತಿ ಪತ್ರ, ಬಂಗಾರವನ್ನು ಪತ್ತೆ ಹಚ್ಚಿದ್ದರು.
ಈ ಸಮಯದಲ್ಲಿ 1.8 ಕೋಟಿ ರೂ. ಮೌಲ್ಯದ ಆಸ್ತಿ ಪತ್ರ, 40 ಲಕ್ಷ ನಗದು, 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಯಾಗಿತ್ತು. ಚೈತ್ರಾ ಕುಂದಾಪುರ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ಹಣ, ಚಿನ್ನವನ್ನು ಇಟ್ಟಿದ್ದರು. ಉಡುಪಿಯ ಹಿರಿಯಡ್ಕದಲ್ಲಿ 2 ಅಂತಸ್ತಿನ ಮನೆಯನ್ನು ಕಟ್ಟಿಸುತ್ತಿದ್ದರು. ಅಲ್ಲದೇ ಅವರ ಕಾರು ಸಹ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪತ್ತೆಯಾಗಿತ್ತು.
ಸಿಸಿಬಿ ಪೊಲೀಸರು ಬಳಿಕ ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಕಛೇರಿ, ಕೆ. ಕೆ. ಗೆಸ್ಟ್ ಹೌಸ್‌ನ 2ನೇ ಮಹಡಿಯ 207 ಸಂಖ್ಯೆಯ ರೂಂ ಅಲ್ಲಿ ಮಹಜರು ನಡೆಸಿದ್ದರು. ಈ ಎಲ್ಲಾ ದಾಖಲೆಗಳ ಸಮೇತ ಆಸ್ಪತ್ರೆಯಿಂದ ವಾಪಸ್ ಆದ ಚೈತ್ರಾ ಕುಂದಾಪುರ ವಿಚಾರಣೆ ನಡೆಸಲಾಗಿತ್ತು.
ವಂಚನೆ ಪ್ರಕರಣದ ಆರೋಪಿಗಳಾದ ಚೈತ್ರಾ ಕುಂದಾಪುರ ಸೇರಿದಂತೆ ಇತರರನ್ನು ನ್ಯಾಯಾಲಯ ಸೆಪ್ಟೆಂಬರ್ 23ರ ತನಕ ಸಿಸಿಬಿ ಪೊಲೀಸರ ವಶಕ್ಕೆ ನೀಡಿತ್ತು. ಶನಿವಾರ ಸಿಸಿಬಿ ಪೊಲೀಸರು ಆರೋಪಿಗಳನ್ನು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಸುಮಾರು 5 ಕೋಟಿ ರೂ. ವಂಚನೆ ಪ್ರಕರಣದ ತನಿಖೆ ನೆಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ ಇದುವರೆಗೂ 2.76 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣದ ಆರೋಪಿ ಅಭಿನವ ಹಾಲವೀರಪ್ಪ ಸ್ವಾಮೀಜಿಗೆ ಸೇರಿದ್ದ 56 ಲಕ್ಷ ರೂ. ಮತ್ತು ಪರಿಚಯಸ್ಥರ ಬಳಿ ಇದ್ದ 20 ಲಕ್ಷ ಸಹ ಜಪ್ತಿ ಮಾಡಲಾಗಿದೆ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್












Click it and Unblock the Notifications