ಚೆಲುವರಾಯ ಸ್ವಾಮಿ ವಿರುದ್ಧದ ದೂರು ಪ್ರಕರಣ CID ತನಿಖೆಗೆ ಸಿಎಂ ಸೂಚನೆ

ಬೆಂಗಳೂರು, ಆಗಸ್ಟ್‌ 08: ಕೃಷಿ ಸಚಿವ ಚೆಲುವರಾಯ ಸ್ವಾಮಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆನ್ನಲಾದ ಪತ್ರದ ಕುರಿತು ಸಿಐಡಿಗೆ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.

ಈ ಪ್ರಕರಣದ ಕುರಿತು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಸಿಐಡಿ ಗೆ ತನಿಖೆಗೆ ಒಪ್ಪಿಸಲು ಸೂಚಿಸಿದ್ದಾರೆ. ಚೆಲುವರಾಯ ಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ ಎಂದು ಹೇಳಲಾಗಿರುವ ದೂರು ಪತ್ರದಲ್ಲಿ ಏಳು ಅಧಿಕಾರಿಗಳ ಸಹಿಯಿದ್ದು, ಆ ಎಲ್ಲಾ ಸಹಿಗಳನ್ನು ಒಬ್ಬರೇ ಮಾಡಿರುವ ಶಂಕೆ ಎದುರಾಗಿರುವುದರಿಂದ ಪ್ರಕರಣವನ್ನು ಸಿಐಡಿಗೆ ಕೊಡಲು ನಿರ್ಧರಿಸಲಾಗಿದೆ.

corruption-charges-cm-siddaramaiah

ಇನ್ನೂ ಸಚಿವರ ವಿರುದ್ದದ ದೂರಿನ ಪತ್ರದಲ್ಲಿ ಜೆಡಿಎಸ್ ನಾಯಕರ ಎಚ್.ಡಿ. ಕುಮಾರಸ್ವಾಮಿಯವರ ಹೆಸರನ್ನೂ ಉಲ್ಲೇಖಿಸಲಾಗಿದೆ. ಆ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸಿಐಡಿ ತನಿಖೆಯು ಅಗತ್ಯವಾಗಿದೆ ಎಂದು ತಿಳಿದ ಸರ್ಕಾರ, ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲು ಸೂಚಿಸಿದಲಾಗಿದೆ.

ರಾಜ್ಯಪಾಲರ ಪತ್ರದಲ್ಲೇನಿದೆ?

ರಾಜ್ಯಪಾಲರ ಕಚೇರಿಯಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ "ಮಾನ್ಯ ರಾಜ್ಯಪಾಲರವರಿಗೆ ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿ ಉಲ್ಲೇಖಿತ ದೂರರ್ಜಿಯನ್ನು ಸಲ್ಲಿಸಿರುತ್ತಾರೆ. ದೂರರ್ಜಿಯಲ್ಲಿ ಮೇಲಿನ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ 6-8 ಲಕ್ಷ ರೂಪಾಯಿಗಳನ್ನು ನೀಡುವಂತೆ ಮಾನ್ಯ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿರುತ್ತಾರೆ.

ಲಂಚ ಕೇಳುವ ಇಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕುವ ಸಂಬಂಧ ಕ್ರಮ ವಹಿಸದಿದ್ದಲ್ಲಿ ಅಧಿಕಾರಿಗಳು ಕುಟುಂಬದ ಸದಸ್ಯರ ಜೊತೆಗೆ ವಿಷ ಕುಡಿಯುವುದಾಗಿ ತಿಳಿಸಿರುತ್ತಾರೆ. ಈ ದೂರರ್ಜಿಯನ್ನು ನಿಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ವಹಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಿದ್ದೇನೆ ಎಂದು ಉಲ್ಲೇಖಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+