ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಶ್ನೆ ಪತ್ರಿಕೆ ಸೋರಿಕೆ : ಪಲ್ಲವಿ ಅಕುರಾತಿ ವರ್ಗಾವಣೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 02 : ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಅಕುರಾತಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶುಕ್ರವಾರ ಒಟ್ಟು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಪಲ್ಲವಿ ಅರುಕರಾತಿ ಅವರನ್ನು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಸಾರಿಗೆ ಇಲಾಖೆಯ ಆಯುಕ್ತ ರಾಮೇಗೌಡ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. [ಪ್ರಶ್ನೆ ಪತ್ರಿಕೆ ಸೋರಿಕೆ : 10 ಪ್ರಮುಖ ಬೆಳವಣಿಗೆಗಳು]

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಎರಡು ಬಾರಿ ಸೋರಿಕೆಯಾದ ಜವಾಬ್ದಾರಿಯನ್ನು ಇಲಾಖೆಯ ನಿರ್ದೇಶಕರೇ ಹೊರಬೇಕು ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಇಲಾಖೆಯ 40 ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. [ಏಪ್ರಿಲ್ 12ಕ್ಕೆ ಮರು ಪರೀಕ್ಷೆ, ಎಕ್ಸಾಂ ಬರೆಯಲ್ಲ: ವಿದ್ಯಾರ್ಥಿಗಳು]

ಮಾರ್ಚ್ 21ರಂದು 1.75 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಆ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಮಾರ್ಚ್ 31ರಂದು ಮರುಪರೀಕ್ಷೆ ನಡೆಸುವುದಾಗಿ ಘೋಷಿಸಲಾಗಿತ್ತು. ಆದರೆ, ಅಂದು ಬೆಳಗ್ಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆ ರದ್ದು ಮಾಡಲಾಗಿತ್ತು. ಸದ್ಯ, ಏ.12ರಂದು ಮರು ಪರೀಕ್ಷೆ ನಡೆಸುವುದಾಗಿ ಇಲಾಖೆ ದಿನಾಂಕ ಪ್ರಕಟಿಸಿದೆ. [ದ್ವೇಷಕ್ಕಾಗಿ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ?]

pallavi akurathi

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳ ಪಟ್ಟಿ [ಪ್ರಶ್ನೆ ಪತ್ರಿಕೆ ಸೋರಿಕೆ, ಪಿಯು ವಿದ್ಯಾರ್ಥಿಗಳಲ್ಲಿ ಭುಗಿಲೆದ್ದ ಆಕ್ರೋಶ]

* ಡಾ.ಜಿ.ಕಲ್ಪನಾ - ಮೈಸೂರು ಆಡಳಿತ ತರಬೇತಿ ಸಂಸ್ಥೆ ಮಹಾನಿರ್ದೇಶಕಿ
* ಶಾಲಿನಿ ರಜನೀಶ್‌ - ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
* ಎಸ್‌.ಆರ್‌.ಉಮಾಶಂಕರ್‌ - ಕಾರ್ಯದರ್ಶಿ, ಕನ್ನಡಸಂಸ್ಕೃತಿ ಮತ್ತು ವಾರ್ತಾ ಇಲಾಖೆ
* ಟಿ.ಕೆ.ಅನಿಲ್‌ ಕುಮಾರ್‌ - ಮೈಸೂರು ಕಾಗದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ
* ಹರ್ಷ ಗುಪ್ತ - ಕಾರ್ಯದರ್ಶಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ
* ನವೀನ್‌ರಾಜ್‌ ಸಿಂಗ್‌ - ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
* ವಿ.ಪೊನ್ನುರಾಜ್‌ - ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ

English summary
Karnataka pre-university department director Pallavi Akurathi has been transferred. Akurathi was in the spot after the Chemistry question paper leak and the subsequent re-exam leak. Primary and Secondary Education Minister Kimmane Ranakar had earlier hinted of taking tough action against the director.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X