ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ (85) ಅವರು ಇಂದು (ಶನಿವಾರ, ಜುಲೈ 18) ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕಳೆದ ಬುಧವಾರ ರಾತ್ರಿ ಚೆನ್ನಮ್ಮ ಅವರಿಗೆ ದಿಢೀರ್ ಉಸಿರಾಟದ ಸಮಸ್ಯೆ ಉಲ್ಬಣಿಸಿತ್ತು. ಇದರ ಜೊತೆಗೆ ಎದೆಭಾಗದಲ್ಲಿ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಕ್ಷಣವೇ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ವೈದ್ಯರ ವಿಶೇಷ ತಂಡವೊಂದು ತೀವ್ರ ನಿಗಾ ಘಟಕದಲ್ಲಿ ಇರಿಸಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ, ವಯೋಸಹಜ ಕಾರಣಗಳಿಂದಾಗಿ ಅವರ ದೇಹವು ಚಿಕಿತ್ಸೆಗೆ ಸ್ಪಂದಿಸುವುದನ್ನು ನಿಲ್ಲಿಸಿತ್ತು. ಎಷ್ಟೇ ಪ್ರಯತ್ನ ಪಟ್ಟರೂ ವೈದ್ಯರಿಗೆ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇಂದು ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಮತ್ತು ಕುಟುಂಬದ ಆಪ್ತರು ಖಚಿತಪಡಿಸಿದ್ದಾರೆ.

Chennamma

ದೇವೇಗೌಡರ ರಾಜಕೀಯ ಏಳಿಗೆಯ ಹಿಂದಿನ ಶಕ್ತಿ

ಎಚ್.ಡಿ. ದೇವೇಗೌಡರ ರಾಜಕೀಯ ಪಯಣದಲ್ಲಿ ಸದಾ ಬೆನ್ನೆಲುಬಾಗಿ ನಿಂತಿದ್ದವರು ಚೆನ್ನಮ್ಮ. ಒಬ್ಬ ಸಾಮಾನ್ಯ ರೈತ ಕುಟುಂಬದಿಂದ ಬಂದ ದೇವೇಗೌಡರು ಶಾಸಕರಾಗಿ, ಸಚಿವರಾಗಿ, ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನ ಮಂತ್ರಿಯಾಗಿ ಅತ್ಯುನ್ನತ ಹುದ್ದೆಗೇರುವಲ್ಲಿ ಚೆನ್ನಮ್ಮ ಅವರ ತ್ಯಾಗ ಹಾಗೂ ಬೆಂಬಲ ಅಪಾರವಾಗಿದೆ. ಪತಿ ಸಕ್ರಿಯ ರಾಜಕಾರಣದಲ್ಲಿ ಸದಾ ಬ್ಯುಸಿಯಾಗಿದ್ದಾಗ, ಇಡೀ ಕುಟುಂಬದ ಜವಾಬ್ದಾರಿಯನ್ನು ಹೊತ್ತು ಮಕ್ಕಳನ್ನು ಬೆಳೆಸಿದ ಶ್ರೇಯಸ್ಸು ಚೆನ್ನಮ್ಮ ಅವರಿಗೆ ಸಲ್ಲುತ್ತದೆ. ಅವರು ರಾಜಕಾರಣದಲ್ಲಿ ಕಾಣಿಸಿಕೊಳ್ಳಲಿಲ್ಲ, ಇದರ ಜೊತೆಗೆ ಕ್ಯಾಮೆರಾ ಮತ್ತು ಪ್ರಚಾರದಿಂದ ತುಂಬ ದೂರವೇ ಉಳಿದಿದ್ದರು. ಆದರೆ, ಕುಟುಂಬದ ಆಧಾರಸ್ತಂಭವಾಗಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವಲ್ಲಿ ಅವರ ಪಾತ್ರ ಮಾತ್ರ ತುಂಬ ಮುಖ್ಯವಾದದ್ದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+