Breaking News: ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸಿ.ಎಂ.ಪೂಣಚ್ಚ ನೇಮಕ

ಬೆಂಗಳೂರು, ಜೂನ್ 08: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಕೀಲ ಸಿ.ಎಂ.ಪೂಣಚ್ಚ ಅವರು ನೇಮಕಗೊಂಡಿದ್ದಾರೆ.ಈ ಕುರಿತಂತೆ ರಾಷ್ಟ್ರಪತಿಗಳ ಆದೇಶದಂತೆ ಕಾನೂನು ಮತ್ತು ನ್ಯಾಯ ಸಚಿವಾಲಯ ಅಸೂಚನೆ ಹೊರಡಿಸಿದೆ.

ಒಂದೆರಡು ದಿನಗಳಲ್ಲಿ ಅವರು ನೂತನ ನ್ಯಾಯಮೂರ್ತಿಗಳಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡು ವರ್ಷಗಳ ಅವಗೆ ಪೂಣಚ್ಚ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಎರಡು ವರ್ಷಗಳ ಪ್ರಬೇಷನರಿ ಅವಧಿ ನಂತರ ಅವರ ಸೇವೆ ಕಾಯಂ ಆಗಲಿದೆ.

ಸುಮಾರು 20ವರ್ಷಕ್ಕೂ ಅಧಿಕ ವಕೀಲಿಕೆ ಅನುಭವವನ್ನು ಹೊಂದಿರುವ ಅವರ ಹೆಸರನ್ನು ನ್ಯಾಯಮೂರ್ತಿ ಹುದ್ದೆಗೆ ಹಿಂದಿನ ಸಿಜೆ ಎ.ಎಸ್. ಓಕ್ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿ ಸುಪ್ರೀಂಕೋರ್ಟ್‌ಗೆ ಕಳುಹಿಸಿತ್ತು.

Cheppudira Monnappa Poonacha appointed as as additional judge to the High Court

ನಂತರ ಸುಪ್ರೀಂಕೋರ್ಟ್‌ನ ಕೊಲಿಜಿಯಂ ಪೂಣಚ್ಚ ಅವರ ಹೆಸರನ್ನು ನ್ಯಾಯಮೂರ್ತಿ ಹುದ್ದೆಗೆ ಪರಿಗಣಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇದೀಗ ಎಲ್ಲ ಪ್ರಕ್ರಿಯೆಗಳು ಮುಗಿದು ಅವರನ್ನು ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.

45 ನ್ಯಾಯಮೂರ್ತಿಗಳು: ಸದ್ಯ ಮುಖ್ಯ ನ್ಯಾಯಮೂರ್ತಿ ಸೇರಿ 44 ನ್ಯಾಯಮೂರ್ತಿಗಳು ಸೇವೆ ಸಲ್ಲಿಸುತ್ತಿದ್ದು, ಪೂಣಚ್ಚ ಅವರ ಸೇರ್ಪಡೆಯಿಂದ ನ್ಯಾಯಮೂರ್ತಿಗಳ ಸಂಖ್ಯೆ 45ಕ್ಕೆ ಏರಿಕೆಯಾಗಲಿದೆ. ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಒಟ್ಟು 62 ನ್ಯಾಯಮೂರ್ತಿ ಹುದ್ದೆಗಳು ಮಂಜೂರಾಗಿವೆ. ಇನ್ನೂ 17 ಹುದ್ದೆಗಳು ಖಾಲಿ ಇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+