ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀರಿಗೆ ಅಳಲು : ಚಿಕ್ಕಬಳ್ಳಾಪುರ ಬಂದ್ ಯಶಸ್ವಿ

|
Google Oneindia Kannada News

ಚಿಕ್ಕಬಳ್ಳಾಪುರ, ಜ.31 : ಡಾ.ಪರಮಶಿವಯ್ಯ ವರದಿಯಂತೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಚಿಕ್ಕಬಳ್ಳಾಪುರ ಬಂದ್ ಯಶಸ್ವಿಯಾಗಿದೆ. ಬಂದ್ ನಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಜನಜೀವನ ಸಂಪೂರ್ಣವಾಗಿ ಸ್ತಬ್ಧವಾಗಿತ್ತು.

ಶುಕ್ರವಾರ ಶಾಶ್ವತ ನೀರಾವರಿ ಹೋರಾಟ ಸಮಿತಿ ಮತ್ತು ವಿವಿಧ ಸಂಘಟನೆಗಳು ಡಾ.ಪರಮಶಿವಯ್ಯ ವರದಿ ಅನ್ವಯ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಬಂದ್ ಗೆ ಬಂದ್ ಗೆ ಕರೆ ನೀಡಿದ್ದವು. ಬಂದ್ ಗೆ ಜನರಿಂದಲೂ ಬೆಂಬಲ ವ್ಯಕ್ತವಾಗಿದ್ದು, ಸಂಪೂರ್ಣ ಯಶಸ್ವಿಯಾಯಿತು.

ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಗ್ಗೆ 5.30ಕ್ಕೆ ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಆರಂಭಿಸಿದವು. ನಗರದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂಜಾನೆಯಿಂದಲೇ ನಗರದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಚಿಕ್ಕಬಳ್ಳಾಪುರ ಬಂದ್ ಚಿತ್ರಗಳು

ಬಸ್ ನಿಲ್ದಾಣ ಖಾಲಿ-ಖಾಲಿ

ಬಸ್ ನಿಲ್ದಾಣ ಖಾಲಿ-ಖಾಲಿ

ಸದಾ ಜನರಿಂದ ತುಂಬಿ ತುಳುಕುತ್ತಿದ್ದ ಚಿಕ್ಕಬಳ್ಳಾಪುರ ಬಸ್ ನಿಲ್ದಾಣ ಬಂದ್ ಹಿನ್ನಲೆಯಲ್ಲಿ ಸಂಪೂರ್ಣ ಖಾಲಿಯಾಗಿತ್ತು. ಯಾವುದೇ ಬಸ್ ಗಳು ನಿಲ್ದಾಣದತ್ತ ಸುಳಿಯಲಿಲ್ಲ.

ನಿರ್ಜನ ರಸ್ತೆಗಳು

ನಿರ್ಜನ ರಸ್ತೆಗಳು

ಚಿಕ್ಕಬಳ್ಳಾಪುರ ಜನರು ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು. ನಗರದ ಪ್ರಮುಖ ರಸ್ತೆಗಳು ಜನರಿಲ್ಲದೆ ಬಿಕೋ ಅನ್ನುತ್ತಿದ್ದವು.

ಅಂಗಡಿ ಮುಂಗಟ್ಟುಗಳು ಬಂದ್

ಅಂಗಡಿ ಮುಂಗಟ್ಟುಗಳು ಬಂದ್

ಬಂದ್ ಹಿನ್ನಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರೆ ನೀಡಿದ್ದ ಬಂದ್ ಗೆ ಸಾರ್ವಜನಿಕರು ಬೆಂಬಲ ನೀಡಿದರು.

ಪರಮಶಿವಯ್ಯ ವರದಿ ಏನು?

ಪರಮಶಿವಯ್ಯ ವರದಿ ಏನು?

ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 9 ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಹಾಗೂ ಕೃಷಿ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಡಾ. ಪರಮಶಿವಯ್ಯ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವರದಿ ಅನ್ವಯ 300 ಟಿಎಂಸಿ ನೀರನ್ನು ತರಬಹುದಾಗಿದೆ. ಸರ್ಕಾರ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿತ್ತು.

ವೀರಪ್ಪ ಮೊಯ್ಲಿಗೆ ಶ್ರದ್ಧಾಂಜಲಿ ಸಲ್ಲಿಕೆ

ವೀರಪ್ಪ ಮೊಯ್ಲಿಗೆ ಶ್ರದ್ಧಾಂಜಲಿ ಸಲ್ಲಿಕೆ

ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು ಕೇಂದ್ರ ಇಂಧನ ಮತ್ತು ಪರಿಸರ, ಅರಣ್ಯ ಖಾತೆ ಸಚಿವ ವೀರಪ್ಪ ಮೊಯ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದವು. ಕ್ಷೇತ್ರದ ಸಂಸದರಾದ ಮೊಯ್ಲಿ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಾವರಿ ಯೋಜನೆ ಜಾರಿಗೊಳಿಸುವುದು ಬಿಟ್ಟು, ಮತ ಗಳಿಸುವ ಸಲುವಾಗಿ ಎತ್ತಿನ ಹೊಳೆ ಯೋಜನೆ ಜಾರಿಗೊಳಿಸಲು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. [ಕೇಜ್ರಿವಾಲ್ ಹಿಟ್ ಲೀಸ್ಟ್ ನಲ್ಲಿ ಮೊಯ್ಲಿ]

English summary
Chikkaballapur district bandh successful. Shashvatha Neeravari Horata Samiti Chickballapur and other organizations calls for one day bandh, on Friday 31st Jan demanding for permanent Drinking Water Project based on Paramashivaiah report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X