ಚಿಕ್ಕಬಳ್ಳಾಪುರ: ಗ್ರಾಮ ಲೆಕ್ಕಿಗರಾಗಲು ಸುವರ್ಣಾವಕಾಶ

ಚಿಕ್ಕಬಳ್ಳಾಪುರ, ಜೂನ್ 24: ರಾಜಧಾನಿ ಬೆಂಗಳೂರಿನ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳನ್ನು (VA) ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 18 ಹುದ್ದೆಗಳು ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಲು ಅಧ್ಯಕ್ಷರು, ಗ್ರಾಮಲೆಕ್ಕಿಗರ ನೇಮಕಾತಿ ಮತ್ತು ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ಇವರು ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ. ಮೀಸಲಾತಿ ವರ್ಗೀಕರಣವೂ ಇದೆ.

ವಿದ್ಯಾರ್ಹತೆ : ದ್ವಿತೀಯ ಪಿಯುಸಿ (ಸಿಬಿಎಸ್ಇ/ಐಸಿಎಸ್ಇ) ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯ ಗಣಕಯಂತ್ರ ನಿರ್ವಹಣೆ (MS Office) ಪ್ರಮಾಣ ಪತ್ರ ಹೊಂದಿರಬೇಕು.

Online recruitment Chickballapur Village Accountants 18 Posts -2014
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ದಿನಾಂಕ 21-07-2014ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 500 ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ರೂ. 250. (ಒನ್ಇಂಡಿಯಾದಿಂದ ಉದ್ಯೋಗ ಹುಡುಕಾಟ ಸೇವೆ)

ಹೆಚ್ಚಿವ ವಿವರಗಳಿಗೆ ಅಧ್ಯಕ್ಷರು, ಗ್ರಾಮಲೆಕ್ಕಿಗರ ನೇಮಕಾತಿ ಮತ್ತು ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ಇವರ ಅಧಿಕೃತ ವೆಬ್ ಸೈಟ್ www.chikballapur.nic.in ಅನ್ನು ನೋಡಬಹುದು . (ಬೆಂಗಳೂರು: ಪೊಲೀಸ್ ಪರೀಕ್ಷೆ ವೇಳೆ ಅಭ್ಯರ್ಥಿ ಸಾವು)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+