Breaking; ನವದೆಹಲಿಗೆ ತೆರಳಿದ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮೇ 10; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನಗಳ ಭೇಟಿಗಾಗಿ ನವದೆಹಲಿಗೆ ತೆರಳಿದರು. ಸಂಪುಟ ವಿಸ್ತರಣೆ ಬಗ್ಗೆ ಸಿಎಂ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆಯೇ? ಕಾದು ನೋಡಬೇಕು.
ಮಂಗಳವಾರ ಬೆಳಗ್ಗೆ ಆರ್. ಟಿ. ನಗರದ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ತೆರಳಿದ ಬಸವರಾಜ ಬೊಮ್ಮಾಯಿ ಅಲ್ಲಿಂದ ದೆಹಲಿಗೆ ತೆರಳಿದರು. ಜಾಗತಿಕ ಬಂಡವಾಳ ಹೂಡಿಕೆದಾರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಮಂಗಳವಾರ ದೆಹಲಿಯಲ್ಲಿಯೇ ವಾಸ್ತವ್ಯ ಹೊಡಲಿರುವ ಮುಖ್ಯಮಂತ್ರಿಗಳು ಬುಧವಾರ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮುಖ್ಯಮಂತ್ರಿಗಳು ಅರವಿಂದ್ ಬೆಲ್ಲದ್ ಜೊತೆ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಗಳ ನಿವಾಸಕ್ಕೆ ಬೆಳಗ್ಗೆಯೇ ಆಗಮಿಸಿದ್ದ ಅರವಿಂದ್ ಬೆಲ್ಲದ್ ಬಸವರಾಜ ಬೊಮ್ಮಾಯಿ ಜೊತೆ ಕಾರಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ತನಕ ತೆರಳಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಸಂಪುಟ ವಿಸ್ತರಣೆ ಬಗ್ಗೆ ಬಸವರಾಜ ಬೊಮ್ಮಾಯಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆಯೇ? ಎಂದು ಕಾದು ನೋಡಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ವರಿಷ್ಠ ನಾಯಕರು ವಿವಿಧ ರಾಜ್ಯಗಳ ಪ್ರವಾಸದಲ್ಲಿದ್ದಾರೆ.
ಮಂಗಳವಾರ ರಾತ್ರಿ ವರಿಷ್ಠರು ಆಗಮಿಸಿದ ಬಳಿಕ ಈ ಕುರಿತು ಅಧಿಕೃತ ಮಾಹಿತಿ ತಿಳಿಯುವ ನಿರೀಕ್ಷೆ ಇದೆ. ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.












Click it and Unblock the Notifications