ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಯೋತ್ಪಾದನೆಯ ದಮನಕ್ಕೆ ಎಚ್ಚರ ಅಗತ್ಯ: ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21: ಸಮಾಜದ ಎಲ್ಲ ರಂಗಗಳಲ್ಲೂ ದುಷ್ಟ ಶಕ್ತಿಗಳು ಇರುವುದರಿಂದ ಎಚ್ಚರ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಯೋತ್ಪಾದನೆಯ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದೂ ಅವರು ಎಚ್ಚರಿಸಿದರು.

ಇಂದು ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಕರ್ನಾಟಕ ಪೊಲೀಸ್ ಇಲಾಖೆಗೆ ದೊಡ್ಡ ಇತಿಹಾಸ ಇದೆ. ಅನೇಕ ಸಂದರ್ಭಗಳಲ್ಲಿ ಪೊಲೀಸರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಮರಿಸಿದರು.

ಬಸವರಾಜ ಬೊಮ್ಮಾಯಿ ರಾಜ್ಯ ಕಂಡ ಅತ್ಯಂತ ದುರ್ಬಲ ಕಳಪೆ ಸಿಎಂ: ಸಿದ್ದು ಟೀಕೆಬಸವರಾಜ ಬೊಮ್ಮಾಯಿ ರಾಜ್ಯ ಕಂಡ ಅತ್ಯಂತ ದುರ್ಬಲ ಕಳಪೆ ಸಿಎಂ: ಸಿದ್ದು ಟೀಕೆ

ಸಮಾಜದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ದೇಶ ಹಾಗೂ ವಿದೇಶಿ ಮೂಲದ ದುಷ್ಟ ಶಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿವೆ. ಅಪರಾಧ ಘಟಿಸಿದ ನಂತರ ಅದರ ನಿಯಂತ್ರಣಕ್ಕಾಗಿ ಕಾನೂನು ರೂಪುಗೊಳ್ಳುತ್ತದೆ. ಆದರೆ ಇಂಥ ಅಪರಾಧಗಳ ಸಾಧ್ಯತೆಗಳನ್ನು ಗ್ರಹಿಸಿ ಕಾನೂನನ್ನು ಮುಂಚಿತವಾಗಿಯೇ ರೂಪಿಸುವ ಅಗತ್ಯವಿದೆ ಎಂದರು.

ಪೊಲೀಸರಿಗೆ ಆಧುನಿತ ಶಸ್ತ್ರಾಸ್ತ್ರದ ಅಗತ್ಯ ಇದೆ. ಹಿರಿಯ ಅಧಿಕಾರಿಗಳು ಹೆಚ್ಚು ದಕ್ಷರಾಗಿ ಕಾರ್ಯ ನಿರ್ವಹಿಸಿದರೆ ಕೆಳ ಹಂತದ ಅಧಿಕಾರಿಗಳ ಮೆಲೆ ಪರಿಣಾಮ ಬೀರುತ್ತದೆ. ಪೊಲೀಸರು ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದೀರಿ. ಅದನ್ನು ಸರ್ಕಾರ ಮತ್ತು ಸಮಾಜ ಗೌರವಿಸುತ್ತದೆ. ತಮ್ಮ ಹಿಂದೆ ಕುಟುಂಬ ಮಕ್ಕಳು ಇದ್ದಾರೆ‌. ಅದನ್ನು ಆಳುವವರು ಗಮನಿಸಬೇಕಾಗುತ್ತದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನಿರ್ವಹಣೆಗೆ ಪೊಲೀಸರ ಪಾತ್ರ ಅತ್ಯಂತ ಮುಖ್ಯ ಎಂದರು.

 ಸೌಲಭ್ಯ ನೀಡುವ ವಿಚಾರದಲ್ಲಿ ಕರ್ನಾಟಕ ಮುಂದೆ

ಸೌಲಭ್ಯ ನೀಡುವ ವಿಚಾರದಲ್ಲಿ ಕರ್ನಾಟಕ ಮುಂದೆ

ಪೊಲೀಸರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ನಮ್ಮ ಸರ್ಕಾರ ಬೇರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ. ನೇಮಕಾತಿ ಪ್ರಮಾಣವು ಹೆಚ್ಚಳವಾಗಿದೆ. ಪ್ರತಿ ವರ್ಷ ನಾಲ್ಕು ಐದು ಸಾವಿರ ಪೊಲಿಸರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಪೊಲೀಸರ ವಿಶ್ವಾಸಾರ್ಹತೆ ಹೆಚ್ಚಬೇಕಿದೆ. ಯಾವುದೇ ಭ್ರಷ್ಟಾಚಾರ ಆಗದಂತೆ ನೇಮಕಾತಿ ಆಗಬೇಕು. ಅದನ್ನು ನಾವು ಮಾಡುತ್ತೇವೆ. ತರಬೇತಿಯಲ್ಲಿ ಹೊಸ ತಂತ್ರಜ್ಞಾನದ ಪರಿಚಯ, ಸೈಬರ್ ಅಪರಾಧಗಳ ಕುರಿತು ತರಬೇತಿ ನೀಡುವ ಕೆಲಸ ಆಗಬೇಕು ಎಂದರು.

ಎಲ್ಲಾ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ

ಎಲ್ಲಾ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ

ಕಳೆದ ಒಂದು ವರ್ಷದಲ್ಲಿ ಪೊಲಿಸ್ ಠಾಣೆಗಳ ನಿರ್ಮಾಣ ಹೆಚ್ಚಾಗಿದೆ. ಒಂದು ವರ್ಷದ ಅವಧಿಯಲ್ಲಿ ಎಲ್ಲಾ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ ನಿರ್ಮಾಣವಾಗಲಿದೆ.
ಇನ್ಸ್ ಪೆಕ್ಟರ್ ಮತ್ತು ಡಿವೈಎಸ್ಪಿ ವರ್ಗಗಳ ಅಧಿಕಾರಿಗಳಿಗೆ ತರಬೇತಿ ಅಗತ್ಯವಿದೆ‌. ಅದಕ್ಕೆ ಪ್ರತ್ಯೇಕ ತರಬೇತಿ ಕಮಾಂಡ್ ನಿರ್ಮಿಸಲು ತೀರ್ಮಾನ ಮಾಡಲಾಗಿದೆ.

 ಜೈಲುಗಳ ಸಂಖ್ಯೆ ಹೆಚ್ಚಳ

ಜೈಲುಗಳ ಸಂಖ್ಯೆ ಹೆಚ್ಚಳ

ಪೊಲೀಸರ ತ್ಯಾಗ, ಬಲಿದಾನ ಹಾಗೂ ಸಾಧನೆಗಳನ್ನು ಜನರಿಗೆ ತಿಳಿಸಲು ಪೊಲೀಸ್ ವಸ್ತುಸಂಗ್ರಹಾಲಯ, ಎಟಿಎಸ್ ಬಲವರ್ಧನೆ, ಜೈಲುಗಳ ಸಂಖ್ಯೆ ಹಾಗೂ ಸಾಮರ್ಥ್ಯ ಹೆಚ್ಚಿಸಲಾಗುವುದಲ್ಲದೆ ಇನ್ನಷ್ಟು ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

 ಪೊಲೀಸರ ತ್ಯಾಗ ವ್ಯರ್ಥ ಮಾಡುವುದಿಲ್ಲ

ಪೊಲೀಸರ ತ್ಯಾಗ ವ್ಯರ್ಥ ಮಾಡುವುದಿಲ್ಲ

ಪೊಲೀಸರ ತ್ಯಾಗ ವ್ಯರ್ಥವಾಗದಂತೆ, ಅದು ಸದಾ ಸ್ಮರಣೆಯಲ್ಲಿ ಇರುವಂತೆ ಮಾಡುವುದು ನಮ್ಮ ಕೆಲಸ. ನಮ್ಮ ಸರ್ಕಾರ ಪೊಲೀಸರ ಜೊತೆ ಇರುತ್ತದೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

English summary
Chief Minister Basavaraj Bommai Says even the Constable police should work carefully to fight terrorism Bengaluru Police Deparment,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X