ಪಿಎಸ್ಐ ನೇಮಕಾತಿಗೆ ಯುಪಿಎಸ್‌ಸಿ ಮಾದರಿ ಪರೀಕ್ಷೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏ. 29: ಕರ್ನಾಟಕದ 545 ಪಿಎಸ್ಐಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷೆ ರದ್ದು ಮಾಡಿದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮರ್ಥನೆ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಾಗೂ ಪಿಎಸ್ಐ ನೇಮಕಾತಿ ಅಕ್ರಮದ ತನಿಖೆಯನ್ನು ಸಿಐಡಿಗೆ ವಹಿಸಿದ್ದೇವೆ. ಹಗರಣದ ಮೂಲದ ವರೆಗೂ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಪರೀಕ್ಷಾ ಅಕ್ರಮಗಳು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇಲ್ಲಿ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಯುಪಿಎಸ್‌ಸಿ ಪರೀಕ್ಷೆ ಮಾದರಿಯಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ. ಈ ಪ್ರಕರಣವನ್ನು ಸರ್ಕಾರವೇ ಕಂಡು ಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಮಾಣಿಕವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆದಿದ್ದರೂ ಆದನ್ನು ಸೆದೆಬಡೆಯಲಾಗುವುದು ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

Chief Minister Basavaraj bommai reaction on PSI exam cancelled

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸಿಎಂ ಭರವಸೆ ನೀಡಿದ್ದರು. ಇದೀಗ ಪಿಎಸ್ಐ ಅಕ್ರಮ ತನಿಖೆಯ ಹಂತದದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಪಡಿಸಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಪ್ರಕಟಿಸಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸ್ವತಃ ಪರೀಕ್ಷೆ ರದ್ದು ಪಡಿಸಿ ಮರು ಪರೀಕ್ಷೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಪರೀಕ್ಷಾ ರದ್ದು ಮಾಡಲಾಗಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಪಿಎಸ್ಐ ಅಭ್ಯರ್ಥಿಗಳು ಕಿಡಿ ಕಾರಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರಿಗೆ ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

Chief Minister Basavaraj bommai reaction on PSI exam cancelled

ಆದರೆ, ಪಿಎಸ್ಐ ಪರೀಕ್ಷೆ ರದ್ದು ವಿಚಾರ ತಿಳಿಯುತ್ತಿದ್ದಂತೆ ಪಿಎಸ್ಐ ಆಗಿ ನೇಮಕವಾಗದ ಆಕಾಂಕ್ಷಿಗಳು ಸಂಭ್ರಮಾಚಣೆ ಮಾಡಿದ್ದಾರೆ. ನಾವು ಕೊಟ್ಟ ಸುಳಿವುನಿಂದ ಅಕ್ರಮ ತನಿಖೆ ತನಿಖೆ ನಡೆಸಿದ್ದು, ಗೃಹ ಸಚಿವರು ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಮದ್ಯೆ ಪರೀಕ್ಷೆ ಬೇಕ- ಬೇಡ ಎಂಬುದರ ಎರಡು ಬಣಗಳು ಸೃಷ್ಠಿಯಾಗಿದ್ದು ಗೊಂದಲ ಏರ್ಪಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+