ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget 2023; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ; ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿದ ಬಿಜೆಪಿ ನಾಯಕರು

|
Google Oneindia Kannada News

ಬೆಂಗಳೂರು, ಫೆಬ್ರವರಿ 1: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ತಸ್ತಾವನೆ ಕಳಿಸಿದ್ದೆವು. ಹೀಗಾಗಿ 5300 ಕೋಟಿ ನೀಡಿದ್ದು ಸ್ವಾಗತಾರ್ಹ ಎಂದರು.

ಜಲಸಂಪನ್ಮೂಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಸ್ವತಂತ್ರ್ಯಾ ನಂತರ ಭದ್ರಾ ಮೇಲ್ದಂಡೆ ಯೋಜನೆಯನ್ನು ಮೊಟ್ಟ ಮೊದಲ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಿ 5300 ಕೋಟಿ ಅನುದಾನ ಕೊಟ್ಟಿದೆ.ಈ ಅನುದಾನವನ್ನು ನಾವು ಬರಪೀಡಿತ ಜಿಲ್ಲೆಗಳಿಗೆ, ಬರಪೀಡಿತ ಪ್ರದೇಶದ ಕೃಷಿಕರಿಗೆ ಮತ್ತು ಕುಡಿಯುವ ನೀರಿಗೆ ಪರದಾಡುತ್ತಿರುವ ಜಿಲ್ಲೆಗಳಿಗೆ ಯೋಜನೆಯನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಇದೊಂದು ದೊಡ್ಡ ಆರ್ಥಿಕ ನೆರವಾಗಿದೆ ಎಂದು ತಿಳಿಸಿದ್ದಾರೆ.

Chief Minister basavaraj bommai Reaction on Union Budget 2023

ದೇಶದ ಇತಿಹಾಸದಲ್ಲಿಯೇ ಯಾವ ರಾಜಕ್ಕೂ ಕೂಡ ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಇಷ್ಟೊಂದು ದೊಡ್ಡ ಮೊತ್ತದ ಅನುದಾನವನ್ನ ಕೊಟ್ಟಿರಲಿಲ್ಲ ಹಾಗಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೂ ರಾಜ್ಯದ ಜನತೆಯ ಪರವಾಗಿ ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಭದ್ರಾ ವಿಚಾರದಲ್ಲಿ ಕರ್ನಾಟಕ ಕ್ಕೆ ಬಂಪರ್ ಕೊಡುಗೆ; ಸಂಸದ ಅಣ್ಣಾ ಸಾಹೇಬ್ ಜೊಲ್ಲೆ

ಭದ್ರಾ ವಿಚಾರದಲ್ಲಿ ಕರ್ನಾಟಕ ಕ್ಕೆ ಬಂಪರ್ ಕೊಡುಗೆ ಕೇಂದ್ರ ಬಜೆಟ್ ನಲ್ಲಿ ಕೊಟ್ಟಿದ್ದಾರೆ ಎಂದು ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಹೇಳಿದ್ದಾರೆ. ಇನ್ನೂ ಆದಾಯ ತೆರಿಗೆ ವಿಚಾರದಲ್ಲಿ ಆದ್ಯತೆ ನೀಡಲಾಗಿದೆ. ಸರ್ವ ವ್ಯಾಪಿ, ಸರ್ವ ಸ್ಪರ್ಶಿ ಯೋಜನೆಯಾಗಿದ್ದು, ಉತ್ತಮವಾದ ಬಜೆಟ್ ಇವತ್ತು ನೀಡಿದ್ದಾರೆ ಎಂದು ಹೇಳಿದ್ದಾರೆ.

Chief Minister basavaraj bommai Reaction on Union Budget 2023

ಭದ್ರಾ ಮೇಲ್ದೆಂಡೆ ಯೋಜನೆ; ಕರ್ನಾಟಕಕ್ಕೆ ಕೇಂದ್ರ ಸರ್ಕಾರ ವಿಶೇಷ ಕೊಡುಗೆ: ನಳಿನ್ ಕುಮಾರ್ ಕಟೀಲ್

ಭದ್ರಾ ಮೇಲ್ದೆಂಡೆ ಯೋಜನೆಗೆ ಅನುಮತಿ ನೀಡುವ ಮೂಲಕ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ವಿಶೇಷ ಕೊಡುಗೆ ನೀಡಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಆ ಭಾಗದ ಜನರಿಗೆ ಕುಡಿಯುವ ನೀರು, ಕೃಷಿಗೆ ಅನುಕೂಲ ಮಾಡಿದೆ. ಕೃಷಿ, ಸಹಕಾರಿ ರಂಗಕ್ಕೆ ಆದ್ಯತೆ ನೀಡಲಾಗಿದೆ. ಇನ್ನೂ ಉದ್ಯೋಗ ಸೃಷ್ಟಿಗೂ ಅವಕಾಶ ಮಾಡಿದೆ. ಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜುಗಳನ್ನು ನೀಡಿದ್ದು ಇದರಿಂದ ರಾಜ್ಯಕ್ಕೆ ಅನುಕೂಲವಾಗಲಿದ್ದು, ರಸ್ತೆ ಮತ್ತು ರೈಲ್ವೆ ವಿಭಾಗದಲ್ಲಿ ರಾಜ್ಯಕ್ಕೆ ಆದ್ಯತೆ ಸಿಕ್ಕಿದೆ ಎಂದು ಹೇಳಿದರು.

English summary
Budget 2023 Reactions : Chief Minister basavaraj bommai about Union Budget 2023-24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X