Breaking; ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ದೃಢ
ಬೆಂಗಳೂರು, ಜನವರಿ 10; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರ 11,698 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.
ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಕೋವಿಡ್ ಸೋಂಕು ತಗುಲಿರುವ ಕುರಿತು ಮಾಹಿತಿ ನೀಡಿದ್ದಾರೆ. "ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿದ್ದಾರೆ.
I have tested positive for COVID -19 today with mild symptoms. My health is fine, I am under home quarantine. I request everyone who have recently come in my contact to isolate themselves and get tested.
— Basavaraj S Bommai (@BSBommai) January 10, 2022
ಕೋವಿಡ್ ಸೋಂಕಿನ ಸೌಮ್ಯ ಗುಣಲಕ್ಷಣಗಳು ಕಂಡು ಬಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಐಸೋಲೇಷನ್ ಆಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಸೋಮವಾರ 11,698 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 24 ಗಂಟೆಯಲ್ಲಿ 1,148 ಜನರು ಗುಣಮುಖಗೊಂಡಿದ್ದರೆ ನಾಲ್ವರು ಸಾವನ್ನಪ್ಪಿದ್ದಾರೆ.
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಸೋಮವಾರ 11,698 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 24 ಗಂಟೆಯಲ್ಲಿ 1,148 ಜನರು ಗುಣಮುಖಗೊಂಡಿದ್ದರೆ ನಾಲ್ವರು ಸಾವನ್ನಪ್ಪಿದ್ದಾರೆ.
ಕರ್ನಾಟಕದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 60,148 ಆಗಿದೆ. ಸೋಮವಾರದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು ನಗರದಲ್ಲಿ 9,221 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 1,50,479 ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಕರ್ನಾಟಕದಲ್ಲಿ ಈಗಾಗಲೇ ಕೋವಿಡ್ ಹರಡುವಿಕೆ ತಡೆಯಲು ನೈಟ್ ಕರ್ಫ್ಯೂವನ್ನು ಡಿಸೆಂಬರ್ 28ರಿಂದಲೇ ಜಾರಿಗೊಳಿಸಲಾಗಿದೆ. ವಾರಾಂತ್ಯದ ಕರ್ಫ್ಯೂ, ಬೆಂಗಳೂರಿನಲ್ಲಿ ಶಾಲೆಗಳ ಭೌತಿಕ ತರಗತಿ ಬಂದ್, ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಸೀಟು ಭರ್ತಿ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕಂದಾಯ ಸಚಿವ ಆರ್. ಅಶೋಕಗೆ ಕಳೆದ ವಾರ ಕೋವಿಡ್ ಸೋಂಕು ಧೃಢಪಟ್ಟಿತ್ತು. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು.












Click it and Unblock the Notifications