ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಜು. 30: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಹೈಕಮಾಂಡ್ ಭೇಟಿಗೆ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ 6.10ಕ್ಕೆ ವಿಮಾನದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದು, ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಲಿದ್ದಾರೆ. ಲೋಕಸಭಾ ಮಳೆಗಾಲದ ಅಧಿವೇಶನ ನಡೆಯುತ್ತಿರುವುದರಿಂದ ಕಲಾಪ ಆರಂಭವಾಗುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಇಲ್ಲದಿದ್ದರೆ ಮಧ್ಯಾಹ್ನ 1ಗಂಟೆಯೊಳಗೆ ಪ್ರಧಾನಿ ಮೋದಿ ಅವರನ್ನು ಬೊಮ್ಮಾಯಿ ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿಯಿದೆ.

ಪ್ರಧಾನಿ ಭೇಟಿ ಮಾಡಿದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ. ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದಾರೆ.

Chief Minister Basavaraj Bommai went Delhi to meet BJP High Command

ಬಳಿಕ ಮಧ್ಯಾಹ್ನ 1 ಗಂಟೆಗೆ ರಾಜ್ಯದ ಸಂಸದರು ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರೊಂದಿಗೆ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಭೆ ಮಾಡಲಿದ್ದಾರೆ. ಸಭೆಯಲ್ಲಿ ರಾಜ್ಯದ ಅಭಿವೃದ್ಧಿಗೆ ಸಹಕಾರವನ್ನು ಕೋರಲಿದ್ದಾರೆ ಎಂಬ ಮಾಹಿತಿಯಿದೆ.

Chief Minister Basavaraj Bommai went Delhi to meet BJP High Command

Recommended Video

Congress ಪಕ್ಷ ಸೇರಿಕೊಂಡ ಮಧು ಬಂಗಾರಪ್ಪ | Siddaramaiah | DK Shivakumar | Hubli | Oneindia Kannada

ಮಧ್ಯಾಹ್ನ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಕೆಲಸಗಳ ಕುರಿತು ಚರ್ಚೆ ಮಾಡಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿಯೇ ಉಳಿದುಕೊಳ್ಳಲಿದ್ದು, ಕರ್ನಾಟಕ ಭವನದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ (ಜು.31) ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಹೈಕಮಾಂಡ್ ಸೂಚಿಸಿದರೆ ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂತಿಮವಾಗಲಿದೆ. ಆದರಿಂದ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ ಎಂಬ ಮಾಹಿತಿಯಿದೆ.

English summary
Chief Minister Basavaraj Bommai went Delhi to meet BJP High Command. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X